Old pension Scheme : ರಾಜ್ಯದಲ್ಲಿ ಎನ್‌ಪಿಎಸ್‌ ರದ್ದು : ರಾಜ್ಯ ಸರಕಾರಿ ನೌಕರರಿಗೆ ಗುಡ್‌ನ್ಯೂಸ್‌

ಬೆಂಗಳೂರು : Old pension Scheme : ಕರ್ನಾಟಕದಲ್ಲಿ ಎನ್‌ಪಿಎಸ್‌ ರದ್ದು ಮಾಡಿ, ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಸಂಬಂಧಿಸಿದಂತೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಸರಕಾರಿ ಎನ್‌ಪಿಎಸ್‌ ನೌಕರರ ಸಂಘ ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳ ನಿಯೋಗ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಪ್ರನಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ರಾಜ್ಯದಲ್ಲಿ ಎನ್‌ಪಿಎಸ್‌ ರದ್ದು ಮಾಡಿ ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸುವ ಬಗ್ಗೆ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಆದರೆ ಸರಕಾರಿ ನೌಕರರು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಸಿದ್ದರಾಮಯ್ಯ ಸೂಚನೆಯನ್ನು ನೀಡಿದ್ದಾರೆ.

Old-pension-Scheme-Implementation-Cancellation-of-NPS-in-the-Karnataka-state-government-employees-say-cm-Siddaramaiah-1
ಎನ್‌ಪಿಎಸ್‌ ನೌಕರರ ಜೊತೆ ಸಿಎಂ ಸಿದ್ದರಾಮಯ್ಯ

ದೇಶದಾದ್ಯಂತ 2006ರ ಎಪ್ರಿಲ್‌ 1ರಿಂದಲೇ ಎನ್‌ಪಿಎಸ್‌ ಜಾರಿಯಾಗಿದೆ. ರಾಜ್ಯದಲ್ಲಿನ 2.98 ಲಕ್ಷ ನೌಕರರು ಎನ್‌ಪಿಎಸ್‌ ವ್ಯಾಪ್ತಿಗೆ ಒಳಪಡುತ್ತಿದ್ದು, ಪಿಂಚಣಿ ಮೊತ್ತವನ್ನು ಎನ್‌ಎಸ್‌ಡಿಎಲ್‌ನಲ್ಲಿ ಠೇವಣಿ ಇರಿಸಲಾಗುತ್ತಿದೆ. ಹೀಗೆ ಠೇವಣಿ ಇರಿಸಿರುವ ಮೊತ್ತವು ನಿವೃತ್ತಿಯ ವೇಳೆಯಲ್ಲಿ ಸಿಗುತ್ತಿದೆ. ಕಳೆದ ವರ್ಷ ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಎನ್‌ಪಿಎಸ್‌ ನೌಕರರು ವೋಟ್‌ ಫಾರ್‌ ಎನ್‌ಪಿಎಸ್‌ನಲ್ಲಿ ಭಾಗಿಯಾದವರ ಮೇಲೆ ಕೈಗೊಂಡಿರುವ ಶಿಸ್ತಿನ ಕ್ರಮವನ್ನು ಕೈಬಿಡುವ ಕುರಿತು ಸರಕಾರ ತೀರ್ಮಾನ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ ವಿ.ಎಸ್.ಉಗ್ರಪ್ಪ ತಿಳಿಸಿದ್ದಾರೆ.

Old pension Scheme Implementation Cancellation of NPS in the Karnataka state government employees say cm Siddaramaiah 2
ಹಳೆ ಪಿಂಚಣಿ ವ್ಯವಸ್ಥೆಗೆ ಜಾರಿಗೆ ಸಂಬಂಧಿಸಿದಂತೆ ಸಿಎಂ ಜೊತೆಗೆ ಎನ್‌ಪಿಎಸ್‌ ನೌಕರರ ಮನವಿ

ಇನ್ನು ಎನ್‌ಪಿಎಸ್‌ ನೌಕರರ ಸಂಘದ ರಾಜ್ಯಾಧ್ಯಕ್ಷ ಶಾಂತಾರಾಮ್‌ ಅವರು ಮಾತನಾಡಿ ರಾಜಾಸ್ತಾನ, ಛತ್ತೀಸ್ ಗಡದಲ್ಲಿ ಎನ್.ಪಿ.ಎಸ್ ರದ್ದಾಗಿದ್ದು, ಕರ್ನಾಟಕದಲ್ಲಿಯೂ ಅದನ್ನು ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು. ಎನ್.ಪಿ.ಎಸ್ ರದ್ದು ಮಾಡುವುದರಿಂದ ಯೋಜನೆಯಡಿ ಲಭ್ಯವಿರುವ ಒಟ್ಟು 19 ಸಾವಿರ ಕೋಟಿ ಹಣವನ್ನು ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮ ಗಳಿಗೆ ದೊರೆಯಲಿದೆ. ನೌಕರರ ಪಾಲಿನ 9 ಸಾವಿರ ಕೋಟಿ ಜಿಪಿಎಫ್ ಗೆ ಪರಿವರ್ತನೆ ಮಾಡಿಕೊಳ್ಳುಬಹುದು ಹಾಗೂ ಸರ್ಕಾರದ 10 ಸಾವಿರ ಕೋಟಿ ರೂ.ಗಳು ಸರ್ಕಾರದ ಪಾಲನ್ನು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಬಳಕೆ ಮಾಡಿಕೊಳ್ಳಬಹುದು ಎಂದು ಸಲಹೆ ನೀಡಿದ್ದಾರೆ.

Old pension Scheme Implementation Cancellation of NPS in the Karnataka state government employees say cm Siddaramaiah 3
ಸಿಎಂ ಸಿದ್ದರಾಮಯ್ಯ ಜೊತೆ ಎನ್‌ಪಿಎಸ್‌ ನೌಕರರು

ಇದನ್ನೂ ಓದಿ : ಶಾಲಾ ಪಠ್ಯಪುಸ್ತಕ ಪರಿಷ್ಕರಣೆ : 2 ಅಧ್ಯಾಯ ಕೈ ಬಿಡಲು ಸರಕಾರ ನಿರ್ಧಾರ

ಇದನ್ನೂ ಓದಿ : Gruha Jyothi Yojana : ಗೃಹ ಜ್ಯೋತಿ ಯೋಜನೆ : ಬಾಡಿಗೆದಾರರಿಗೆ ಹೊಸ ನಿಯಮ ಜಾರಿ

Old pension Scheme Implementation Cancellation of NPS in the Karnataka state government employees say cm Siddaramaiah

Comments are closed.