Karnataka Lockdown : ಓಮಿಕ್ರಾನ್‌ ಭೀತಿ : ಡಿ.15ರ ನಂತರ ಕರ್ನಾಟಕ ಲಾಕ್‌ಡೌನ್‌ !

ಬೆಂಗಳೂರು : ಕೊರೊನಾ ವೈರಸ್‌ ಸೋಂಕು ನಿಧಾನವಾಗಿ ಕರ್ನಾಟಕದಲ್ಲಿ ಏರಿಕೆ ಕಾಣುತ್ತಿದೆ. ಈ ನಡುವಲ್ಲೇ ಡೆಲ್ಟಾ ಫ್ಲಸ್‌, ನ್ಯೂರೋ ವೈರಸ್‌ ಸೋಂಕಿನ ಹಾವಳಿಯು ಹೆಚ್ಚುತ್ತಿದೆ. ಜೊತೆಯಲ್ಲೇ ಓಮಿಕ್ರಾನ್‌ ಭೀತಿ ಕರುನಾಡನ್ನು ಕಾಡುತ್ತಿದ್ದ ತಜ್ಞರ ಸಲಹೆಯಂತೆ ಡಿಸೆಂಬರ್‌ 15ರ ನಂತರ ಕರ್ನಾಟಕದಲ್ಲಿ ಮತ್ತೆ ಲಾಕ್‌ಡೌನ್‌ (Karnataka Lockdown) ಜಾರಿಯಾಗುವ ಸಾಧ್ಯತೆಯಿದೆ.

ಸಿಲಿಕಾನ್‌ ಸಿಟಿ ಬೆಂಗಳೂರು, ಧಾರವಾಡ ಜಿಲ್ಲೆಗಳಲ್ಲಿ ಕೊರೊನಾ ಆರ್ಭಟ ಹೆಚ್ಚುತ್ತಿದೆ. ಅದ್ರಲ್ಲೂ ಆಫ್ರಿಕಾದ ದೇಶಗಳಲ್ಲಿ ಓಮಿಕ್ರಾನ್‌ ಮಿತಿಮೀರುತ್ತಿದೆ. ಈ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಈಗಾಗಲೇ ವಿಶ್ವ ಆರೋಗ್ಯ ಸಂಸ್ಥೆ ಸೂಚನೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಅಲರ್ಟ್‌ ಆಗಿದೆ. ಕರ್ನಾಟಕ ಸಿಎಂ ಬಸವರಾಜ್‌ ಬೊಮ್ಮಾಯಿ ಈಗಾಗಲೇ ಅಧಿಕಾರಿಗಳ ಜೊತೆಗೆ ಸಭೆಯನ್ನು ನಡೆಸಿದೆ.

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಬ್ಬರು ದಕ್ಷಿಣ ಆಫ್ರಿಕಾದ ಪ್ರಜೆಗಳಿಗೆ ಕೊರೊನಾ ಸೋಂಕು ಇರುವುದು ಪತ್ತೆಯಾಗಿತ್ತು. ಅಲ್ಲದೇ ಓಮಿಕ್ರಾನ್‌ ಭೀತಿ ಉಂಟಾಗಿತ್ತು. ಆದರೆ ಪ್ರಯೋಗಾಲಯದ ವರದಿ ನೆಮ್ಮದಿಯ ನಿಟ್ಟುಸಿರುವ ಬಿಡುವಂತೆ ಮಾಡಿದ್ದು ಇಬ್ಬರಲ್ಲಿ ಪತ್ತೆಯಾಗಿರೋದು ಡೆಲ್ಟಾ ಪ್ಲಸ್‌ ಅನ್ನೋದು ದೃಢಪಟ್ಟಿದೆ. 10 ಅಪಾಯಕಾರಿ ದೇಶಗಳಿಂದ 584 ಜನರು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಅಲ್ಲದೇ ಹೊರ ರಾಜ್ಯಗಳಿಂದ ಬರುವವರ ಮೇಲೆ ಹದ್ದಿನ ಕಣ್ಣು ಇರಿಸಲಾಗುತ್ತಿದೆ. ಇನ್ನು ಮುಖ್ಯಮಂತ್ರಿ ಬೊಮ್ಮಾಯಿ ಮಾತನಾಡಿ, ರಾಜ್ಯವು ಧಾರವಾಡ, ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿನ ಶಾಲಾ, ಕಾಲೇಜು ಮತ್ತು ಹಾಸ್ಟೆಲ್‌ಗಳಲ್ಲಿ ಕೋವಿಡ್ ಹರಡುವಿಕೆಯನ್ನು ಗಮನಿಸಿದೆ ಮತ್ತು ನೆರೆಯ ಕೇರಳದಲ್ಲಿ ಪ್ರಕರಣಗಳ ಹೆಚ್ಚಳವನ್ನು ಗಮನಿಸಲಾಗಿದೆ. ಇದನ್ನು ನಿಯಂತ್ರಿಸಲು ರಾಜ್ಯ ಸರಕಾರ ಕೂಡಲೇ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.

ಇನ್ನೊಂದೆಡೆಯಲ್ಲಿ ಧಾರವಾಡದ ಎಸ್‌ಡಿಎಂ ಕಾಲೇಜಿನಲ್ಲಿ ಕೊರೊನಾ ಸ್ಪೋಟ ಸಂಭವಿಸಿದೆ. ಎಸ್‌ಡಿಎಂ ಕಾಲೇಜ್ ಆಫ್ ಮೆಡಿಕಲ್ ಸೈನ್ಸ್‌ನಲ್ಲಿ ಒಟ್ಟು 281ಮಂದಿ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಅಲ್ಲದೇ ಇಂದು ೨೫ ಮಂದಿಗೆ ಕೊರೊನಾ ಸೋಂಕು ಕಾಣಿಸಿ ಕೊಂಡಿದೆ. ಹೀಗಾಗಿ ಕೊರೊನಾ ಸೋಂಕಿತರ ಸಂಖ್ಯೆ 306 ಕ್ಕೆ ಏರಿಕೆ ಕಂಡಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ವಿದ್ಯಾರ್ಥಿಗಳನ್ನು ಹಾಗೂ ಸಿಬ್ಬಂದಿಯನ್ನೂ ತಪಾಸಣೆಗೆ ಒಳಪಡಿಸಲಾಗಿದ್ದು 1,822 ಪರೀಕ್ಷಾ ಫಲಿತಾಂಶಕ್ಕಾಗಿ ಕಾಯಲಾಗುತ್ತಿದೆ.

ಹೊಸ ಕೋವಿಡ್ -19 ಪೀಡಿತ ದೇಶಗಳಿಂದ ಬರುವ ಜನರು ಬೆಂಗಳೂರಿಗೆ ಬಂದಿಳಿದ ನಂತರ ಆರ್‌ಟಿ-ಪಿಸಿಆರ್ ತೆಗೆದುಕೊಳ್ಳಬೇಕು ಎಂದು ಕರ್ನಾಟಕ ಆರೋಗ್ಯ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. ಡಾ ಕೆ ಸುಧಾಕರ್, ಕೇಂದ್ರ ಆರೋಗ್ಯ ಸಚಿವಾಲಯದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ. ದಕ್ಷಿಣ ಆಫ್ರಿಕಾ, ಹಾಂಗ್‌ಕಾಂಗ್‌, ಇಸ್ರೇಲ್‌ ಹಾಗೂ ಬೋಟ್ಸ್ವಾನಾದಲ್ಲಿ ಓಮಿಕ್ರಾನ್‌ ವೈರಸ್‌ ಪತ್ತೆಯಾಗಿದೆ. ಹೀಗಾಗಿ ಹೊಸ ತಳಿಯ ವೈರಸ್‌ ಬಗ್ಗೆ ಎಚ್ಚರಿಕೆಯನ್ನು ವಹಿಸಲಾಗುತ್ತಿದೆ ಎಂದಿದ್ದಾರೆ.

ಕೊರೊನಾ ರೂಪಾಂತರ ತಳಿಯಾಗಿರುವ ಡೆಲ್ಟಾ ವೈರಸ್‌ಗಿಂತಲೂ ಓಮಿಕ್ರಾನ್‌ ಹೆಚ್ಚು ಅಪಾಯಕಾರಿಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎರಡು ತಿಂಗಳು ಲಾಕ್‌ಡೌನ್‌ ಜಾರಿ ಮಾಡುವಂತೆ ತಜ್ಞರು ಸಲಹೆಯನ್ನು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಸೆಂಬರ್‌ ಎರಡನೇ ವಾರದಲ್ಲಿ ಲಾಕ್‌ಡೌನ್‌ ಜಾರಿ ಮಾಡುವ ಸಾಧ್ಯತೆಯಿದೆ.

ಇದನ್ನೂ ಓದಿ : ಕರ್ನಾಟಕಕ್ಕೆ ಒಮಿಕ್ರಾನ್‌ ಭೀತಿ : ಬೆಂಗಳೂರಿಗೆ ಬಂದ ಇಬ್ಬರಿಗೆ ಕೊರೊನಾ ಸೋಂಕು ದೃಢ !

ಇದನ್ನೂ ಓದಿ : Omicron Variant : ಕರ್ನಾಟಕದಲ್ಲಿ ಪತ್ತೆಯಾಗಿಲ್ಲ ಓಮಿಕ್ರಾನ್‌ : ಸಿಎಂ ಬಸವರಾಜ್‌ ಬೊಮ್ಮಾಯಿ

( Omicron panic : Karnataka lockdown after December 15 )

Comments are closed.