ಸೋಮವಾರ, ಏಪ್ರಿಲ್ 28, 2025
Homekarnataka"ಪ್ರವಾಸೋದ್ಯಮ ಕ್ಷೇತ್ರದಲ್ಲಿ ಇನ್ನಷ್ಟು ಅಭಿವೃದ್ದಿಯಾಗಲಿ : ಶಿವಮೊಗ್ಗ ವಿಮಾನ ನಿಲ್ದಾಣದ ಬಗ್ಗೆ ಮೋದಿ ಟ್ವೀಟ್

“ಪ್ರವಾಸೋದ್ಯಮ ಕ್ಷೇತ್ರದಲ್ಲಿ ಇನ್ನಷ್ಟು ಅಭಿವೃದ್ದಿಯಾಗಲಿ : ಶಿವಮೊಗ್ಗ ವಿಮಾನ ನಿಲ್ದಾಣದ ಬಗ್ಗೆ ಮೋದಿ ಟ್ವೀಟ್

- Advertisement -

ಶಿವಮೊಗ್ಗ: (PM Narendra Modi tweet) ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆಗೆ ಸಿದ್ದವಾಗಿದ್ದು, ಇದೇ ಫೆ. 27 ರಂದು ಪ್ರಧಾನಿ ಮೋದಿ ಅವರು ಶಿವಮೊಗ್ಗ ಕುವೆಂಪು ವಿಮಾನ ನಿಲ್ದಾಣದ ಉದ್ಘಾಟನೆ ಮಾಡಲಿದ್ದಾರೆ. ಉದ್ಘಾಟನೆಗೂ ಮೊದಲೇ ಮೋದಿ ಅವರು ವಿಮಾನ ನಿಲ್ದಾಣದ ಕುರಿತು ಟ್ವೀಟ್‌ ಮಾಡಿದ್ದು, ಪ್ರವಾಸೋದ್ಯಮ ಕ್ಷೇತ್ರದಲ್ಲಿ ಇನ್ನಷ್ಟು ಅಭಿವೃದ್ದಿ ಸಾಗಲಿ ಎಂದು ಹಾರೈಸಿದ್ದಾರೆ.

ಶಿವಮೊಗ್ಗ ವಿಮಾನ ನಿಲ್ದಾಣದ ಡ್ರೋನ್‌ ವಿಡಿಯೋವನ್ನು ಮೋದಿ ಅವರು ತಮ್ಮ ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ಇದರ ಮೂಲಕ ಶಿವಮೊಗ್ಗ ವಿಮಾನ ನಿಲ್ದಾಣವು ಆರ್ಥಿಕ ಚೇತರಿಕೆಯನ್ನು ತರಳಿ ಹಾಗೂ ಸಂಪರ್ಕ ಕ್ರಾಂತಿಯ ಜೊತೆಗೆ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಇನ್ನಷ್ಟು ಅಭಿವೃದ್ದಿ ಸಾಗಲಿ ಎಂದು ಮೋದಿ ಅವರು ಹಾರೈಸಿದ್ದಾರೆ.

ಶಿವಮೊಗ್ಗದ ಬಿಜೆಪಿ ಸಂಸದ ಬಿ.ವೈ. ರಾಘವೇಂದ್ರ ಡ್ರೋನ್‌ ಕ್ಯಾಮೆರಾ ಮೂಲಕ ಸೆರೆ ಹಿಡಿಯಲಾದ ಶಿವಮೊಗ್ಗ ವಿಮಾನ ನಿಲ್ದಾಣದ ವಿಡಿಯೋವನ್ನು ಗುರುವಾರ ಟ್ವೀಟ್‌ ಮಾಡಿದ್ದು, ಈ ಟ್ವೀಟ್‌ ಗೆ ಪ್ರತಿಯಾಗಿ ಪ್ರಧಾನಿ ಮೋದಿ ಅವರು ವಿಮಾನ ನಿಲ್ದಾಣದ ಬಗ್ಗೆ ಟ್ವೀಟ್‌ ಮಾಡಿ ಶುಭಹಾರೈಸಿದ್ದಾರೆ. ಇದಕ್ಕೆ ಬಿಜೆಪಿ ಸಂಸದ ಬಿ.ವೈ ರಾಘವೇಂದ್ರ ಪ್ರತಿಕ್ರಿಯೆ ನೀಡಿದ್ದು, “ಮಲೆನಾಡಿನ ಜನರ ದಶಕಗಳ ಕನಸು ಕೊನೆಗೂ ನನಸಾಗಿದೆ. ಶಿವಮೊಗ್ಗದ ಸೋಗಾನೆಯಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಂಡಿದೆ. ಶಿವಮೊಗ್ಗ ವಿಮಾನ ನಿಲ್ದಾಣ ಕೇವಲ ವಿಮಾನ ನಿಲ್ದಾಣವಾಗಿರದೇ ಮಲೆನಾಡು ಪ್ರದೇಶದ ಪರಿವರ್ತನೆಯ ಹೆಬ್ಬಾಗಿಲಾಗಿ ರೂಪುಗೊಳ್ಳಲಿದೆ ” ಎಂದಿದ್ದಾರೆ.

ಇದನ್ನೂ ಓದಿ : Airforce plane in Shimoga Airport: ಶಿವಮೊಗ್ಗ ಏರ್ ಪೋರ್ಟ್ ನಲ್ಲಿ ಲ್ಯಾಂಡ್ ಆಯ್ತು ವಾಯುಸೇನೆಯ ವಿಮಾನ

ಇದನ್ನೂ ಓದಿ : Shimoga airport: ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕನ್ನಡ ಭಾಷೆಯ ಬಗ್ಗೆ ನಿರ್ಲಕ್ಷ್ಯ : ಕನ್ನಡಿಗರ ಆಕ್ರೋಶ

ಫೆ. 27 ರಂದು ಪ್ರಧಾನಿ ಮೋದಿ ಅವರು ಶಿವಮೊಗ್ಗ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಲಿದ್ದು, ಅದೇ ದಿನ ಮೋದಿ ಅವರೇ ವಿಮಾನ ನಿಲ್ದಾಣಕ್ಕೆ ಕುವೆಂಪು ಎಂಬ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರವನ್ನು ಬಿಜೆಪಿಯ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಪ್ರತಿನಿಧಿಸಿದ್ದರು. ಇಲ್ಲಿಗೆ ವಿಮಾನ ನಿಲ್ದಾಣವಾಗಬೇಕು ಎಂದು ಹೇಳಿದವರಲ್ಲಿ ಅವರೇ ಮೊದಲಾಗಿದ್ದರು. ಈ ಕಾರಣಕ್ಕೆ ಅವರ ಹೆಸರನ್ನೇ ವಿಮಾನ ನಿಲ್ದಾಣಕ್ಕೆ ಇಡಬೇಕು ಎಂಬ ಮಾತು ಕೇಳಿಬಂದಿತ್ತು. ಇದು ಚರ್ಚೆಗೂ ಕಾರಣವಾಗಿತ್ತು. ಆದರೆ ಈ ಚರ್ಚೆಗೆ ಸ್ವತಃ ಅವರೇ ತೆರೆ ಎಳೆದಿದ್ದು, ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ವಿಮಾನ ನಿಲ್ದಾಣಕ್ಕಿಡಲು ಯಡಿಯೂರಪ್ಪ ನಿರ್ಧರಿಸಿದರು.

PM Narendra Modi tweet: “More development in the field of tourism: Modi tweet about Shimoga airport

RELATED ARTICLES

Most Popular