ಪೋಕ್ಸೋ ಪ್ರಕರಣ : ಚಿತ್ರದುರ್ಗದ ಮುರುಘಾ ಶರಣರಿಗೆ ಬಿಗ್‌ ರಿಲೀಫ್‌

Chitradurga Muruga Mutt ಚಿತ್ರದುರ್ಗ : ಮುರುಘಾ ಮಠದ ಶಿವಮೂರ್ತಿ ಮುರುಘಾ ಸ್ವಾಮಿಗಳಿಗೆ ಚಿತ್ರದುರ್ಗದ ನ್ಯಾಯಾಲಯ ಬಿಗ್‌ ರಿಲೀಫ್‌ ಕೊಟ್ಟಿದೆ. 2022 ಅಗಸ್ಟ್‌ 26ರಂದು ಮುರುಘಾ ಶ್ರೀಗಳ ವಿರುದ್ದ ದಾಖಲಾಗಿದ್ದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಜಿಲ್ಲಾ ಮತ್ರು ಸತ್ರ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ.

ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀಗಳನ್ನು ಖುಲಾಸೆಗೊಳಿಸಿ ಆದೇಶ ಹೊರಡಿಸಿದೆ. ಮುರುಘಾ ಮಠದ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ, ಚಿತ್ರದುರ್ಗದ ಮುರುಘಾಶ್ರೀಗಳ ವಿರುದ್ದ ಮೈಸೂರಿನ ನಜರಾಬಾದ್‌ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಮುರುಘಾ ಶ್ರೀಗಳನ್ನು ಪ್ರಮುಖ ಆರೋಪಿಯನ್ನಾಗಿ ಮಾಡಲಾಗಿತ್ತು.

ಅಲ್ಲದೇ ಹಾಸ್ಟೇಲ್‌ನ ಲೇಡಿ ವಾರ್ಡನ್‌ ರಶ್ಮಿ, ಬಸವಾದಿತ್ಯ, ಮ್ಯಾನೇಜರ್‌ ಪರಮಶಿವಯ್ಯ ಹಾಗೂ ವಕೀಲರಾದ ಗಂಗಾಧರಯ್ಯ ಅವರ ವಿರುದ್ದ ಪ್ರಕರಣ ದಾಖಲಾಗಿತ್ತು. ಅಲ್ಲದೇ ಚಿತ್ರದುರ್ಗದ ಗ್ರಾಮಾಂತರ ಪೊಲೀಸ್‌ ಠಾಣೆಗೆ ಪ್ರಕರಣ ದಾಖಲಾಗಿತ್ತು. ಪೋಕ್ಸೋ ಪ್ರಕರಣದ ಹಿನ್ನೆಲೆಯಲ್ಲಿ 2022ರ ಸೆಪ್ಟೆಂಬರ್‌ 1 ರಂದು ಮುರುಘಾಶ್ರೀಗಳನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ : ತಾಯಿ ಸಮಾಧಿಯ ಬಳಿಯಲ್ಲಿಯೇ ಮಹಾಂತೇಶ ಬೀಳಗಿ ಅಂತ್ಯಕ್ರಿಯೆ

ಈ ನಡಯವಲ್ಲೇ ಅಡುಗೆ ಸಹಾಯಕಿ ಕೂಡ ಶ್ರೀಗಳ ವಿರುದ್ದ ಮತ್ತೊಂದು ಪ್ರಕರಣ ದಾಖಲಿಸಿದ್ದು, ತನ್ನ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆಯೂ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿದ್ದರು. ಚಿತ್ರದುರ್ಗ ಗ್ರಾಮಾಂತರ ಪೊಲೀಸರು ಹಾಗೂ ಚಿತ್ರದುರ್ಗ ಡಿವೈಎಸ್ಪಿ ಅನಿಲ್ ಕುಮಾರ್ ನೇತೃತ್ವದ ತಂಡವು ಸುಮಾರು 694 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಿತ್ತು.

ಇದನ್ನೂ ಓದಿ : ಕ್ಲೈಮ್ಯಾಕ್ಸ್‌ ಹಂತ ತಲುಪಿದ ನವೆಂಬರ್‌ ಕ್ರಾಂತಿ : ಡಿಕೆಶಿ ಹಾಗೂ ಸಿದ್ದರಾಮಯ್ಯ ಸಂಧಾನ

ವಿಚಾರಣೆಯ ನಡುವಲ್ಲೇ ಮುರುಘಾಶ್ರಿಗಳು 2023ರ ನವೆಂಬರ್‌ 16 ರಂದು ಜಾಮೀನಿನ ಮೇಲೆ ಬಿಡುಗಡೆ ಆಗಿದ್ದರು. ಇದೀಗ ಮುರುಘಾ ಶ್ರೀಗಳನ್ನು ಪೋಕ್ಸೋ ಪ್ರಕರಣದಿಂದ ಬಿಡುಗಡೆಗೊಳಿಸಿದ್ದು, ಉಳಿದ ಎಲ್ಲಾ ಆರೋಪಿಗಳನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

POCSO case Big relief for Shivamurthy Murugha Sharanaru of Chitradurga Muruga Mutt

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories