Police age limit: ಪೊಲೀಸ್ ಕಾನ್‍ಸ್ಟೇಬಲ್ ನೇಮಕಾತಿ ವಯೋಮಿತಿ 2 ವರ್ಷ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ಪೊಲೀಸ್ ಕಾನ್‍ಸ್ಟೇಬಲ್ ನೇಮಕಾತಿ ವಯೋಮಿತಿ (Police age limit) 2 ವರ್ಷ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2022-23ನೇ ಸಾಲಿನ ಕಾನ್‍ಸ್ಟೇಬಲ್ ನೇಮಕಾತಿಗೆ ಮಾತ್ರ ಇದು ಅನ್ವಯವಾಗಲಿದೆ.

ಸಿವಿಲ್, CAR, DAR ಪೊಲೀಸ್ ಕಾನ್‍ಸ್ಟೇಬಲ್ ನೇಮಕಾತಿ ವಯೋಮಿತಿ 2 ವರ್ಷ ಹೆಚ್ಚಳ ಮಾಡಲಾಗಿದೆ. 2022-23ನೇ ಸಾಲಿನ ಕಾನ್‍ಸ್ಟೇಬಲ್ ನೇಮಕಾತಿಗೆ ಮಾತ್ರ ಇದು ಅನ್ವಯವಾಗಲಿದೆ ರಾಜ್ಯ ಪೊಲೀಸ್ ಕಾನ್ ಸ್ಟೇಬಲ್ ಗರಿಷ್ಠ ನೇಮಕ ವಯೋಮಿತಿ ಈ ಹಿಂದೆ ಒಂದು ಬಾರಿ ಹೆಚ್ಚಳ ಮಾಡಲಾಗಿತ್ತು. ಇದೀಗ 2 ವರ್ಷಗಳಿಗೆ ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ. ಈ ಸಂಬಂಧ ಜಿಲ್ಲಾಡಳಿತ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು, ನಡವಳಿ ಪೊಲೀಸ್ ಕಾನ್ ಸ್ಟೇಬಲ್ ( ಸಿವಿಲ್) ಹುದ್ದೆ ಮತ್ತು ಪೊಲೀಸ್ ಕಾನ್ ಸ್ಟೇಬಲ್ (ಸಿಎಆರ್ ಮತ್ತು ಡಿಎಆರ್ ) ಹುದ್ದೆಗಳಿಗೆ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.

2022-23ನೇ ಸಾಲಿನಲ್ಲಿ ಒಂದು ಬಾರಿ ಮಾತ್ರ ಪೊಲೀಸ್ ಕಾನ್ ಸ್ಟೇಬಲ್ ನೇಮಕಾತಿಗೆ ಕರೆಯಲಾಗಿದೆ. (ಸಿಎಆರ್ ಮತ್ತು ಡಿಎಆರ್) 420 ಮತ್ತು 3,064 ಸೇರಿ ಒಟ್ಟು 3484 ಹುದ್ದೆಗಳಿವೆ. ಮತ್ತು ಪೊಲೀಸ್ ಕಾನ್‍ಸ್ಟೇಬಲ್ (ಸಿವಿಲ್) 1137 + 454 ಸೇರಿದಂತೆ 1,591 ಹುದ್ದೆಗಳಿಗೆ ಮಾತ್ರ ಗರಿಷ್ಠ ವಯೋಮಿತಿಯನ್ನು 2 ವರ್ಷಗಳಿಗೆ ಹೆಚ್ಚಿಸಲಾಗಿದೆ.

ಪೊಲೀಸ್ ಕಾನ್‍ಸ್ಟೇಬಲ್ ಹುದ್ದೆಗೆ ಸಾಮಾನ್ಯ ವರ್ಗಕ್ಕೆ ಗರಿಷ್ಠ ವಯೋಮಿತಿಯನ್ನು 25ರಿಂದ 27 ವರ್ಷ ಹಾಗೂ ಎಸ್‍ಸಿ ಎಸ್‍ಟಿ ಹಾಗೂ ಹಿಂದುಳಿದ ವರ್ಗಗಳಿಗೆ 27ರಿಂದ 29 ವರ್ಷಗಳವರೆಗೆ ಹಾಗೂ ಬುಡಕಟ್ಟು ಜನಾಂಗದ ಅಭ್ಯರ್ಥಿಗಳಿಗೆ 32 ವರ್ಷಗಳಿಗೆ ಹೆಚ್ಚಿಸಲಾಗಿದೆ. ಸೇವಾ ನಿರತ ಅಭ್ಯರ್ಥಿಗಳ ವಯೋಮಿತಿಯಲ್ಲಿ ಎಸ್‍ಸಿ ಎಸ್‍ಟಿ ಅಭ್ಯರ್ಥಿಗಳ ವಯಸ್ಸಿಗೆ 35, ಹಾಗೂ ಇತರೆ ಅಭ್ಯರ್ಥಿಗಳಿಗೆ 33 ವರ್ಷಕ್ಕೆ ಹೆಚ್ಚಿಸಲಾಗಿದೆ. ಸಶಸ್ತ್ರ ಪಡೆಯ ಪೊಲೀಸ್ ಕಾನ್‍ಸ್ಟೇಬಲ್ ಹುದ್ದೆಗಳಿಗೆ ಶೇ.10ರಷ್ಟು ಮೀಸಲಾತಿ ನೀಡಿ ಗರಿಷ್ಠ ವಯೋಮಿತಿಯನ್ನು ಸಾಮಾನ್ಯ ವರ್ಗಕ್ಕೆ 31 ವರ್ಷ ಹಾಗೂ ಎಸ್‍ಸಿ ಎಸ್‍ಟಿ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ 33 ವರ್ಷವನ್ನು ನಿಗದಿಪಡಿಸಲಾಗಿದೆ.

ಇದನ್ನೂ ಓದಿ : Imran Khan: ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ; ಇಮ್ರಾನ್ ಕಾಲಿಗೆ ಗಾಯ

ಇದನ್ನೂ ಓದಿ : Chandrashekhar Death Big twist : ಚಂದ್ರಶೇಖರ ಸಾವಿನ ಸುತ್ತ ಹಲವು ಅನುಮಾನ : ಸ್ಥಳಕ್ಕೆ ಎಸ್ಪಿ, ವಿಧಿವಿಜ್ಞಾನ ತಂಡ ಭೇಟಿ

Police age limit Karnataka government has increased age limit for recruitment of police constables by 2 years

Comments are closed.