ಬೆಂಗಳೂರು : ಬಿಪಿಎಲ್ ಕಾರ್ಡ್ ದಾರರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ. ಬಿಪಿಎಲ್ ಕಾರ್ಡ್ ರದ್ದು ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಮನೆಯಲ್ಲಿ ಬೈಕ್, ಟೆಲಿವಿಷನ್, ಫ್ರಿಡ್ಜ್ ಹೊಂದಿದ್ದವರ ಪಡಿತರ ಚೀಟಿಯನ್ನು ರದ್ದುಗೊಳಿಸಿ. ಇಂತಹ ಬಿಪಿಎಲ್ ಕಾರ್ಡುದಾರರು ತಮ್ಮ ಕಾರ್ಡ್‌ಗಳನ್ನು ಹಿಂದಿರುಗಿಸಲು ಸೂಚನೆ ನೀಡಿದೆ.
3 ಹೆಕ್ಟೇರ್ ಗಿಂತ ಹೆಚ್ಚು ಭೂಮಿಯನ್ನು ಹೊಂದಿದ್ದರೆ ಅಥವಾ ವಾರ್ಷಿಕ ಆದಾಯ 1.28 ಲಕ್ಷ ರೂ. ಇದ್ದರೂ ಬಿಪಿಎಲ್ ಕಾರ್ಡ್ ರದ್ದು ಜೊತೆಗೆ ಬೈಕ್, ಟಿವಿ, ಫ್ರಿಡ್ಜ್ ಇರುವ ಬಡವರ ಬಿಪಿಎಲ್ ಕಾರ್ಡ್ ರದ್ದು ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗಿದೆ.
ಇದನ್ನೂ ಓದಿ: ಪ್ರಧಾನಿ ನರೇಂದ್ರ ಮೋದಿ ವಿರುದ್ದ ಸಿದ್ದರಾಮಯ್ಯ ವಾಗ್ದಾಳಿ
ಬಿಪಿಎಲ್ ಪಡಿತರು ಮೂರು ಹೆಕ್ಟೇರ್ ಭೂಮಿಯನ್ನು ಹೊಂದಿದ್ದರೆ ಅಥವಾ ವಾರ್ಷಿಕ ಆದಾಯವು 1.28 ಲಕ್ಷ ರೂ. ಇದ್ದವರ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುತ್ತಿತ್ತು. ಆದ್ರೆ ಈಗ ಫ್ರಿಡ್ಜ್, ಟಿವಿ ಇರುವ ಬಡವರ ಬಿಪಿಎಲ್ ಕಾರ್ಡ್ ರದ್ದು ಗೊಳಿಸಲಾಗಿದೆ. ಅಲ್ಲದೆ ಸ್ಥಳೀಯ ರಾಜಕಾರಣಿಗಳ ಕುಮ್ಮಕ್ಕಿನಿಂದಲೂ ಕಾರ್ಡ್ ರದ್ದುಗೊಳಿಸಲಾಗುತ್ತಿದೆ ಎಂಬ ಆರೋಪವೂ ಕೇಳಿ ಬಂದಿದೆ.
ಇದನ್ನೂ ಓದಿ: Mysore : ಸಿಎಂ ಬೊಮ್ಮಾಯಿ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ : ಅರುಣ್ ಸಿಂಗ್
( The State Government has given Big Shock to BPL card holders.)