Prajwal Revanna : ಹಾಸನದಲ್ಲಿ ಪ್ರಜ್ವಲ್‌ ರೇವಣ್ಣ, ಮಂಡ್ಯದಲ್ಲಿ ಎಚ್‌ಡಿ ಕುಮಾರಸ್ವಾಮಿಗೆ ಮುನ್ನಡೆ

Lok Sabha Election 2024 : ಬೆಂಗಳೂರು : ಪೆನ್‌ಡ್ರೈವ್ ಪ್ರಕರಣದಲ್ಲಿ (Pen Drive Case) ಸಿಲುಕಿ ಎಸ್‌ಐಟಿ ವಿಚಾರಣೆಯನ್ನು ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna) ಅವರಿಗೆ ಲೋಕಸಭಾ ಚುನಾವಣೆಯನ್ನು ಮುನ್ನಡೆ ದೊರೆತಿದೆ.

Lok Sabha Election 2024 : ಬೆಂಗಳೂರು : ಪೆನ್‌ಡ್ರೈವ್ ಪ್ರಕರಣದಲ್ಲಿ (Pen Drive Case) ಸಿಲುಕಿ ಎಸ್‌ಐಟಿ ವಿಚಾರಣೆಯನ್ನು ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna) ಅವರಿಗೆ ಲೋಕಸಭಾ ಚುನಾವಣೆಯನ್ನು ಮುನ್ನಡೆ ದೊರೆತಿದೆ. ಇನ್ನೊಂದೆಡೆಯಲ್ಲಿ ಎಚ್‌ಡಿ ಕುಮಾರಸ್ವಾಮಿ (HD Kumaraswami) ಮಂಡ್ಯದಲ್ಲಿ ಭರ್ಜರಿ ಮುನ್ನಡೆ ಕಾಯ್ದುಕೊಂಡಿದೆ.

Prajwal Revanna in Hassan, HD Kumaraswamy in Mandya lead in Lok Sabha Election Result 2024
Image Credit : NDTV

ಕರ್ನಾಟಕದಲ್ಲಿ ಈ ಬಾರಿ ಜೆಡಿಎಸ್‌ ಮೂರು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿತ್ತು. ಇದೀಗ ಜೆಡಿಎಸ್‌ ಲೋಕಸಭಾ ಚುನಾವಣೆಯನ್ನು ಮೂರು ಕ್ಷೇತ್ರಗಳಲ್ಲಿಯೂ ಭರ್ಜರಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದ ಜೆಡಿಎಸ್‌ ರಾಜ್ಯಾಧ್ಯಕ್ಷ, ಮಾಜಿ ಮುಖ್ಯ ಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಭರ್ಜರಿ ಮುನ್ನೆಡೆ ಕಾಯ್ದುಕೊಂಡಿದ್ದಾರೆ. ಐದು ಸುತ್ತಿನ ಮತ ಎಣಿಕೆ ಕಾರ್ಯ ಈಗಾಗಲೇ ಮುಕ್ತಾಯಗೊಂಡಿದೆ. ಎಚ್‌ಡಿ ಕುಮಾರಸ್ವಾಮಿ ಅವರು 88,000 ಕ್ಕೂ ಅಧಿಕ ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಇದನ್ನೂ ಓದಿ : Lok Sabha Election 2024 Result Live : ಲೋಕಸಭೆ ಚುನಾವಣೆ ಫಲಿತಾಂಶ 2024 : ಎನ್‌ಡಿಎ 271, ಐಎನ್‌ಡಿಐಎ 183 ಕ್ಷೇತ್ರಗಳಲ್ಲಿ ಮುನ್ನಡೆ: ಯಾರಿಗೆ ಕ್ಷೇತ್ರ ಯಾರಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ

ಹಾಸನ ಲೋಕಸಭಾ ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದ ಪ್ರಜ್ವಲ್‌ ರೇವಣ್ಣ ಇದೀಗ ಚುನಾವಣಾ ಫಲಿತಾಂಶದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಚುನಾವಣೆಗೆ ಒಂದು ದಿನದ ಮೊದಲು ಪೆನ್‌ ಡ್ರೈವ್‌ ಹಗರಣ ಬೆಳಕಿಗೆ ಬಂದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಾಲ್‌ ರೇವಣ್ಣ ಈಗಾಗಲೇ ಎಸ್‌ಐಟಿಯಿಂದ ಬಂಧನಕ್ಕೆ ಒಳಗಾಗಿದ್ದು ವಿಚಾರಣೆಯನ್ನು ಎದುರಿಸುತ್ತಿದ್ದಾರೆ. ಇದೀಗ ಚುನಾವಣೆಯಲ್ಲಿ ಪ್ರಜ್ವಲ್‌ ರೇವಣ್ಣ ಮುನ್ನಡೆ ಕಾಯ್ದುಕೊಂಡಿರುವುದು ಕುತೂಹಲ ಮೂಡಿಸಿದೆ.

Prajwal Revanna in Hassan, HD Kumaraswamy in Mandya lead in Lok Sabha Election Result 2024
Image Credit : X

ಇನ್ನು ಕೋಲಾರದಲ್ಲಿಯೂ ಜೆಡಿಎಸ್‌ ಅಭ್ಯರ್ಥಿ ಮಲ್ಲೇಶ್‌ ಬಾಬು ಅವರು ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್‌ ಪಕ್ಷ ಅಭ್ಯರ್ಥಿಗಳನ್ನು ಕಣಕ್ಕೀಳಿಸುವ ವಿಚಾರದಲ್ಲಿ ಸಾಕಷ್ಟು ಮನಸ್ಥಾಪ ಉಂಟಾಗಿತ್ತು. ಇದರ ಲಾಭವನ್ನು ಪಡೆದುಕೊಂಡಿರುವ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಕೂಟ ಜೆಡಿಎಸ್‌ ಗೆ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದು, ಜೆಡಿಎಸ್‌ನಿಂದ ಮಲ್ಲೇಶ್‌ ಬಾಬು ಅವರು ಕಣಕ್ಕೆ ಇಳಿದಿದ್ದರು. ನಿರೀಕ್ಷೆಯಂತೆಯೇ ಮಲ್ಲೇಶ್‌ ಬಾಬು ಅವರು ಚುನಾವಣಾ ಮತ ಎಣಿಕೆಯಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.

ಇದನ್ನೂ ಓದಿ :  Noni Juice : ನೋನಿ ಜ್ಯೂಸ್‌ ಕುಡಿಯೋದು ಅಪಾಯಕಾರಿ : ಮಧುಮೇಹ ನಿಯಂತ್ರಣಕ್ಕೆ ಬರೋದು ನಿಜನಾ ?

ಕರ್ನಾಟಕದಲ್ಲಿನ 28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 18 ಸ್ಥಾನಗಳಲ್ಲಿ ಮುನ್ನೆಡೆ ಕಾಯ್ದುಕೊಂಡಿದ್ರೆ, ಕಾಂಗ್ರೆಸ್‌ 7 ಹಾಗೂ ಜೆಡಿಎಸ್‌ 3 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬಿಜೆಪಿ ಅತೀ ಹೆಚ್ಚು ಸ್ಥಾನಗಳನ್ನು ಕರ್ನಾಟಕದಲ್ಲಿ ಗೆಲ್ಲುವ ನಿರೀಕ್ಷೆಯನ್ನು ಹೊಂದಿದೆ. ಆದರೆ ಸದ್ಯಕ್ಕೆ ಕಾಂಗ್ರೆಸ್‌ಗೆ ಕರ್ನಾಟಕದಲ್ಲಿ ನಿರೀಕ್ಷಿತ ಫಲಿತಾಂಶ ಲಭ್ಯವಾಗಿಲ್ಲ.

Prajwal Revanna in Hassan, HD Kumaraswamy in Mandya lead in Lok Sabha Election Result 2024

Comments are closed.