prajwal revanna maneka gandhi : ಅಕ್ರಮವಾಗಿ ಆನೆ ದಂತ ಮಾರಾಟ ಪ್ರಕರಣ : ಸಂಸದ ಪ್ರಜ್ವಲ್​ ರೇವಣ್ಣ ವಿರುದ್ಧ ಸಿಎಂಗೆ ಮನೇಕಾ ಗಾಂಧಿ ದೂರು

ಬೆಂಗಳೂರು : prajwal revanna maneka gandhi : ವೀರಾಪುರ ಗ್ರಾಮದಲ್ಲಿ ವಿದ್ಯುತ್​ ಹರಿಸಿ ಆನೆಯನ್ನು ಕೊಂದಿದ್ದು ಮಾತ್ರವಲ್ಲದೇ ದಂತವನ್ನು ಮಾರಾಟ ಮಾಡಿದ ಪ್ರಕರಣದಲ್ಲಿ ಇದೀಗ ಸಂಸದ ಪ್ರಜ್ವಲ್​ ರೇವಣ್ಣಗೆ ಹೊಸ ಸಂಕಷ್ಟ ಎದುರಾಗಿದೆ. ಈ ಪ್ರಕರಣದಲ್ಲಿ ಆರೋಪಿಗಳನ್ನು ರಕ್ಷಣೆ ಮಾಡಲು ಸಂಸದ ಪ್ರಜ್ವಲ್​ ರೇವಣ್ಣ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿ ಸಂಸದೆ ಹಾಗೂ ಪ್ರಾಣಿ ಹಕ್ಕುಗಳ ಕಾರ್ಯಕರ್ತೆ ಮನೇಕಾ ಗಾಂಧಿ ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದಾರೆ.


ಹಾಸನ ಜಿಲ್ಲೆಯ ವೀರಾಪುರ ಗ್ರಾಮದಲ್ಲಿ ಚಂದ್ರೇಗೌಡ ಹಾಗೂ ತಮ್ಮಯ್ಯ ಎಂಬವರು ಸೇರಿ ತಮ್ಮ ಜಮೀನಿಗೆ ನುಗ್ಗಿ ಬೆಳೆ ನಾಶ ಮಾಡುತ್ತಿದ್ದ ಆನೆಯನ್ನು ವಿದ್ಯುತ್​ ಹರಿಸಿ ಕೊಲೆ ಮಾಡಿದ್ದರು. ಇದು ಮಾತ್ರವಲ್ಲದೇ ಆನೆ ಸತ್ತ ಬಳಿಕ ಅದರ ದಂತವನ್ನು ಬೆಂಗಳೂರಿನಲ್ಲಿ ಮಾರಾಟ ಮಾಡಲು ಯತ್ನಿಸಿದ್ದರು.ಮಾರ್ಚ್ 19ರಂದು ಆರೋಪಿಗಳು ಆನೆ ದಂತವನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸಿದ್ದ ವೇಳೆಯಲ್ಲಿ ಸಿ.ಕೆ ಅಚ್ಚುಕಟ್ಟು ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದರು. ಬಳಿಕ ವಿಚಾರಣೆ ಸಂದರ್ಭದಲ್ಲಿ ತಾವು ಆನೆಯನ್ನು ಕೊಲೆ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದರು.


ಇದಾದ ಬಳಿಕ ಈ ಪ್ರಕರಣವನ್ನು ಹಾಸನ ಅರಣ್ಯ ಇಲಾಖೆ ಅಧಿಕಾರಿಗಳಿಗೆ ವಹಿಸಲಾಗಿತ್ತು. ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿರುವ ಅರಣ್ಯ ಇಲಾಖೆ ಪೊಲೀಸರು ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಆದರೆ ಈ ಆರೋಪಿಗಳನ್ನು ಕಾನೂನಿನ ಕೈಗಳಿಂದ ರಕ್ಷಿಸಿಕೊಳ್ಳಲು ಸಂಸದ ಪ್ರಜ್ವಲ್​ ರೇವಣ್ಣ ಪ್ರಭಾವ ಬೀರಿದ್ದಾರೆ ಎಂಬ ಆರೋಪ ಎದುರಾಗಿದೆ. ಈ ಪ್ರಕರಣವನ್ನು ಸಿ.ಕೆ ಅಚ್ಚಕಟ್ಟು ಪೊಲೀಸರು ವರ್ಗಾವಣೆ ಮಾಡುವಂತೆ ಒತ್ತಡ ಹೇರಿದ್ದೇ ಸಂಸದ ಪ್ರಜ್ವಲ್​ ರೇವಣ್ಣ. ಆರೋಪಿಗಳನ್ನು ರಕ್ಷಿಸಲು ಪ್ರಜ್ವಲ್​​ ರೇವಣ್ಣ ಹಾಸನ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒತ್ತಡ ಹೇರಿದ್ದಾರೆ ಎಂದು ಮನೇಕಾ ಗಾಂಧಿ ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದು ದೂರಿದ್ದಾರೆ.


ಆರೋಪಿಗಳನ್ನು ರಕ್ಷಿಸಿಕೊಳ್ಳಲು ಉದ್ದೇಶಪೂರ್ವಕವಾಗಿ ಈ ಪ್ರಕರಣವನ್ನು ವರ್ಗಾಯಿಸಲಾಗಿದೆ. ಅಲ್ಲದೇ ಸ್ಥಳೀಯ ವಲಯ ಅರಣ್ಯಾಧಿಕಾರಿಗಳಿಗೆ ಪ್ರಜ್ವಲ್​ ರೇವಣ್ಣ ಲಂಚವನ್ನೂ ನೀಡಿದ್ದಾರೆ. ಆರೋಪಿಗಳು ಪಕ್ಷದ ಬೆಂಬಲಿಗರಾಗಿದ್ದು ಇದೇ ಕಾರಣಕ್ಕೆ ಸಂಸದ ಪ್ರಜ್ವಲ್​ ರೇವಣ್ಣ ಈ ಪ್ರಕರಣದಲ್ಲಿ ಮೂಗು ತೂರಿಸಿ ಭ್ರಷ್ಟಾಚಾರ ಎಸಗಿದ್ದಾರೆ ಎಂದು ಮನೇಕಾ ಗಾಂಧಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ರೀತಿ ರಾಜ್ಯದ ಸಂಸದರ ಬಗ್ಗೆ ದೂರಿ ಸಿಎಂಗೆ ಪತ್ರ ಬರೆದ ಅತ್ಯಂತ ವಿರಳ ಪ್ರಕರಣ ಇದಾಗಿದ್ದು ಈ ಪ್ರಕರಣದಲ್ಲಿ ಸಿಎಂ ಬೊಮ್ಮಾಯಿ ಯಾವ ರೀತಿಯ ಕ್ರಮ ಕೈಗೊಳ್ಳಬಹುದು ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಇದನ್ನು ಓದಿ : car accident : ಭೀಕರ ರಸ್ತೆ ಅಪಘಾತ : ಒಂದೇ ಕುಟುಂಬದ ನಾಲ್ವರು ದುರ್ಮರಣ

ಇದನ್ನೂ ಓದಿ : Suryakumar Yadav Success :ಸೂರ್ಯಕುಮಾರ್ ಯಾದವ್ ಯಶಸ್ಸಿನ ಹಿಂದೆ ರೋಹಿತ್ ಶರ್ಮಾ ಪಾತ್ರ ; ರಹಸ್ಯ ಬಿಚ್ಚಿಟ್ಟ SKY !

prajwal revanna maneka gandhi basavaraja bommai elephant ivory hassan cm bommai

Comments are closed.