Praveen Nettar Murder : ಪ್ರವೀಣ್‌ ಹತ್ಯೆ : ಸಿಎಂ ಬೊಮ್ಮಾಯಿ, ನಳಿನ್‌ ವಿರುದ್ದ ಹಿಂದೂ ಕಾರ್ಯಕರ್ತರ ಆಕ್ರೋಶ

ಮಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್‌ ನೆಟ್ಟಾರು (Praveen Nettar Murder) ಹತ್ಯೆ ಪ್ರಕರಣದಿಂದಾಗಿ ರಾಜ್ಯವೇ ಬೆಚ್ಚಿಬಿದ್ದಿದೆ. ಬಿಜೆಪಿ ಪಕ್ಷದ ಮುಖಂಡನೇ ಹತ್ಯೆಯಾಗಿದ್ದರು ಕೂಡ ಆಳುವ ಪಕ್ಷದ ಜನಪ್ರತಿನಿಧಿಗಳು ಇದುವರೆಗೂ ಸ್ಥಳಕ್ಕೆ ಬಂದಿಲ್ಲ. ಇದು ಹಿಂದೂ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನೊಂದೆಡೆಯಲ್ಲಿ ಸಿಎಂ ಬಸವರಾಜ್‌ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲು, ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಟ್ವೀಟ್‌ ವಿರುದ್ದವೂ ಜನಾಕ್ರೋಶ ವ್ಯಕ್ತವಾಗುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಪೇಟೆಯಲ್ಲಿ ಪ್ರವೀಣ್‌ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ರಾತ್ರಿಯೇ ಸಾವಿನ ಸುದ್ದಿ ಮಾಧ್ಯಮಗಳಲ್ಲಿ ಬಿತ್ತರವಾಗಿದ್ದರೂ ಕೂಡ ಬೆಳಗ್ಗೆ 11 ಗಂಟೆಯವರೆಗೂ ಯಾವೊಬ್ಬ ಜನಪ್ರತಿನಿಧಿಯೂ ಸ್ಥಳಕ್ಕೆ ಬಂದಿಲ್ಲ. ಮನೆಯವರಿಗೆ ಸಾಂತ್ವಾನ ಹೇಳುವ ಕಾರ್ಯವನ್ನು ಮಾಡಿಲ್ಲ. ಬಿಜೆಪಿ ಯುವಮೋರ್ಚಾ ಕಾರ್ಯಕರ್ತನಾಗಿ ಪಕ್ಷಕ್ಕೆ ಸಾಕಷ್ಟು ದುಡಿದಿದ್ದರೂ ಕೂಡ ಪ್ರವೀಣ್‌ ನೆಟ್ಟಾರು ಸಾವಿನ ನ್ಯಾಯ ಕೊಡಿಸುವ ಕಾರ್ಯವನ್ನು ಮಾಡಿಲ್ಲ. ಕುಟುಂಬಸ್ಥರನ್ನು ಭೇಟಿಯಾಗಿಲ್ಲ ಅನ್ನೋ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Praveen Nettar Murder : ಜನಪ್ರತಿನಿಧಿಗಳ ವಿರುದ್ದ ಹಿಂದೂ ಸಂಘಟನೆಗಳ ಆಕ್ರೋಶ

ಪ್ರವೀಣ್‌ ಹತ್ಯೆಗೆ ಸಂಬಂಧಿಸಿದಂತೆ ಸಿಎಂ ಬಸವರಾಜ್‌ ಬೊಮ್ಮಾಯಿ ಅವರು ಬೆಳಗ್ಗೆ ಟ್ವೀಟ್‌ ಮಾಡಿದ್ದರು. ಸಾವನ್ನು ಖಂಡಿಸಿದ್ದರು. ಆದ್ರೆ ಸಿಎಂ ಮಾಡಿರುವ ಟ್ವೀಟ್‌ ವಿರುದ್ದವೂ ಆಕ್ರೋಶ ವ್ಯಕ್ತವಾಗುತ್ತಿದೆ.

ಕೇವಲ ಮುಖ್ಯಮಂತ್ರಿ ಸಿಎಂ ಬಸವರಾಜ್‌ ಬೊಮ್ಮಾಯಿ ಅವರ ವಿರುದ್ದ ಮಾತ್ರವಲ್ಲದೇ, ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ , ಸಿಟಿ ರವಿ ಹೀಗೆ ಸಾಲು ಸಾಲು ಬಿಜೆಪಿ ನಾಯಕರ ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂ ಕಾರ್ಯಕರ್ತರ ಆಕ್ರೋಶವನ್ನು ನೋಡಬಹುದಾಗಿದೆ.

ಇದನ್ನೂ ಓದಿ : Praveen Nettaru murder case : ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ : ಸೆಕ್ಷನ್‌ ಜಾರಿ, ಹುಟ್ಟೂರಲ್ಲಿ ಅಂತ್ಯಕ್ರೀಯೆ

ಇದನ್ನೂ ಓದಿ : Praveen Nettaru murder : ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ : ಸಿಎಂ ಬೊಮ್ಮಾಯಿ ಖಂಡನೆ, ಯಾರು ಈ ಪ್ರವೀಣ್‌ ನೆಟ್ಟಾರು ?

ಇದನ್ನೂ ಓದಿ : bjp leader murder case : ಬಿಜೆಪಿ ಮುಖಂಡ ಪ್ರವೀಣ್​​ ನೆಟ್ಟಾರು ಹತ್ಯೆ ಪ್ರಕರಣ : ಸುಳ್ಯ, ಕಡಬ , ಪುತ್ತೂರು ತಾಲೂಕು ಬಂದ್

ಇದನ್ನೂ ಓದಿ : Rahul Dravid: “ರಾಹುಲ್ ದ್ರಾವಿಡ್ ಅಲ್ಲ ರಾಹುಲ್ ‘ಡೇವಿಡ್’..” ದಿ ಗ್ರೇಟ್ ವಾಲ್ ಬಿಚ್ಚಿಟ್ಟ “ಹೆಸರು” ರಹಸ್ಯ

Praveen Nettar Murder Case Outrage of Hindu activists against CM Bommai, Nalin and other people’s representatives

Comments are closed.