BIG BREAKING : ಪ್ರವೀಣ್‌ ಹತ್ಯೆ ಪ್ರಕರಣ : ಮೊಹಮ್ಮದ್‌ ಶಫೀಕ್‌, ಜಾಕೀರ್‌ ಬಂಧನ

ಮಂಗಳೂರು : ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಇದೀಗ ಮೊಹಮ್ಮದ್‌ ಶಫೀಕ್‌ ಮತ್ತು ಜಾಕೀರ್‌ ಎಂಬವರನ್ನು (Praveen Nettaru Murder 2 arrest ) ಬಂಧಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರವೀಣ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಪೊಲೀಸರ ನಾಲ್ಕು ತಂಡಗಳನ್ನು ರಚಿಸಲಾಗಿದೆ. ಕಾಸರಗೋಡಿನಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಹತ್ಯೆ ಮಾಡಿದವರು ಇನ್ನೂ ಸಿಕ್ಕಿಲ್ಲ. ಆದರೆ ಹತ್ಯೆಗೆ ಸ್ಕೆಚ್‌ ಹಾಕಿದವರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಇನ್ನು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್‌ ಕುಮಾರ್‌ ಅವರು ಖುದ್ದು ತನಿಖೆಗೆ ಇಳಿದಿದ್ದಾರೆ. ನೆಟ್ಟಾರುವಿನಲ್ಲಿರುವ ಪ್ರವೀಣ್‌ ಅವರ ಮನೆಗೆ ಭೇಟಿ ನೀಡಿದ್ದಾರೆ. ಅಲ್ಲದೇ ಬೆಳ್ಳಾರೆ ಠಾಣೆಗೂ ಭೇಟಿಯನ್ನು ಕೊಟ್ಟು ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಇನ್ನು ಪ್ರವೀಣ್‌ ಹತ್ಯೆಗೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿರುವ ಇಬ್ಬರೂ ಕೂಡ ಬೆಳ್ಳಾರೆಯವರೇ ಆಗಿದ್ದಾರೆ ಎಂದು ಅಲೋಕ್‌ ಕುಮಾರ್‌ ಅವರು ಮಾಹಿತಿ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಪಟ್ಟಣದಲ್ಲಿ ಮಂಗಳವಾರ ರಾತ್ರಿ ಪ್ರವೀಣ್‌ ನೆಟ್ಟಾರು ಎಂಬವರನ್ನು ಬೈಕಿನಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕಡಿದು ಹತ್ಯೆ ಮಾಡಿದ್ದಾರೆ. ಹತ್ಯೆ ಪ್ರಕರಣ ರಾಷ್ಟ್ರದಾದ್ಯಂತ ಸುದ್ದಿ ಮಾಡಿದೆ. ಅಲ್ಲದೇ ಘಟನೆಗೆ ಸಂಬಂಧಿಸಿದಂತೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ನಾಲ್ಕು ತಂಡಗಳನ್ನು ರಚಿಸಿಕೊಂಡಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ. ಹಿರಿಯ ಪೊಲೀಸ್‌ ಅಧಿಕಾರಿಗಳೇ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಕೇರಳದಿಂದ ಬಂದು ದುಷ್ಕೃತ್ಯ ಎಸಗಿರುವ ಸಾಧ್ಯತೆಯಿದೆ ಅನ್ನೋ ಹಿನ್ನೆಲೆಯಲ್ಲಿ ಕೇರಳ ಪೊಲೀಸರಿಂದಲೂ ಮಾಹಿತಿಯನ್ನು ಪಡೆಯುವ ಕಾರ್ಯವನ್ನು ಮಾಡುತ್ತಿದ್ದಾರೆ.

ಇದನ್ನೂ ಓದಿ : accused is likely to be arrested : ಪ್ರವೀಣ್​ ನೆಟ್ಟಾರು ಕೊಲೆ ಪ್ರಕರಣದಲ್ಲಿ ನೇರವಾಗಿ ಭಾಗಿಯಾದ ವ್ಯಕ್ತಿ ಬಂಧಿಸಿರುವ ಸಾಧ್ಯತೆ

ಇದನ್ನೂ ಓದಿ : Praveen Nettaru’s father : ಕೇಸರಿ ಕಾರ್ಯಕರ್ತ ಪ್ರವೀಣ್​ ನೆಟ್ಟಾರು ತಂದೆ ಅಸ್ವಸ್ಥ : ಆಸ್ಪತ್ರೆಗೆ ದಾಖಲು

Praveen Nettaru Murder case 2 arrest in bellare

Comments are closed.