ಬೆಂಗಳೂರು : Praveen Nettaru murder case : ರಾಜ್ಯದಲ್ಲಿ ಭಾರೀ ಸಂಚಲನವನ್ನು ಸೃಷ್ಟಿಸಿದ್ದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನು ರಾಜ್ಯ ಸರ್ಕಾರ ಎನ್ಐಎಗೆ ಹಸ್ತಾಂತರಿಸಿದೆ. ಇಂದು ಪೊಲೀಸ್ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ಕರೆದ ಸಿಎಂ ಬಸವರಾಜ ಬೊಮ್ಮಾಯಿ ಈ ಆದೇಶವನ್ನು ನೀಡಿದ್ದಾರೆ. ಪ್ರವೀಣ್ ಹತ್ಯೆಯಲ್ಲಿ ಅಂತಾರಾಜ್ಯ ನಂಟಿರುವುದು ಪ್ರಾಥಮಿಕ ತನಿಖೆಯಲ್ಲಿ ಬಯಲಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಕೊಲೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಪ್ರಕರಣಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಹಿಂದೆ ಸಿಎಂ ಕೂಡ ಅನೇಕ ಬಾರಿ ನಾವು ಈ ಪ್ರಕರಣಗಳನ್ನು ಕೇವಲ ಕೊಲೆ ಪ್ರಕರಣಗಳೆಂದು ಪರಿಗಣಿಸಿಲ್ಲ ಎಂದು ಅನೇಕ ಬಾರಿ ಹೇಳಿದ್ದಾರೆ. ಇಂದು ಪ್ರಕರಣಗಳ ಸಂಬಂಧ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಿಎಂ ಬಸವರಾಜ ಬೊಮ್ಮಾಯಿ ಪ್ರವೀಣ್ ನೆಟ್ಟಾರು ಹತ್ಯೆಗೂ ಕೇರಳಕ್ಕೂ ನಂಟಿರುವ ಗುಮಾನಿ ಇದೆ. ಇದೊಂದು ಅಂತಾರಾಜ್ಯ ಪ್ರಕರಣ ಎನಿಸಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳಕ್ಕೆ ಈ ಪ್ರಕರಣದ ವಿಚಾರಣೆಯನ್ನು ಒಪ್ಪಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವಂತೆ ಸಿಎಂ ಬಸವರಾಜ ಬೊಮ್ಮಾಯಿ ಗೃಹ ಇಲಾಖೆ ಸೂಚನೆಯನ್ನು ನೀಡಿದ್ದಾರೆ. ಅಲ್ಲದೇ ಕೇರಳದ ಗಡಿಯಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸುವ ಬಗ್ಗೆಯೂ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.
ನಿನ್ನೆಯಷ್ಟೇ ಮೃತ ಪ್ರವೀಣ್ ನೆಟ್ಟಾರು ಪತ್ನಿ ನೂತನಾ ನೆಟ್ಟಾರು ಕೂಡ ತಮ್ಮ ಪತಿಯ ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಹಸ್ತಾಂತರಿಸಬೇಕು. ಹಾಗೂ ಕೂಡಲೇ ಆರೋಪಿಗಳನ್ನು ಬಂಧಿಸಿ ಅವರಿಗೆ ಗಲ್ಲು ಶಿಕ್ಷೆಯನ್ನು ಕೊಡಿಸಬೇಕು. ಆರೋಪಿಗಳಿಗೆ ಪರೋಕ್ಷವಾಗಿ ಸಾಥ್ ನೀಡಿದವರನ್ನೂ ಶಿಕ್ಷಿಸಬೇಕೆಂದು ಮನವಿ ಮಾಡಿದ್ದರು.
ಆರ್ಎಸ್ಎಸ್ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್ ಮಾಡಿದ್ದ ಪೊಲೀಸರಿಗೆ ಎತ್ತಂಗಡಿ
ಇನ್ನು ಬುಧವಾರದಂದು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಆಕ್ರೋಶಗೊಂಡಿದ್ದ ಹಿಂದೂ ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಈ ಸಮಯದಲ್ಲಿ ಅನೇಕ ಹಿಂದೂ ಕಾರ್ಯಕರ್ತರಿಗೆ ಏಟಾಗಿತ್ತು. ಈ ಸಂಬಂಧ ಇಂದು ಪಶ್ಚಿಮ ವಲಯದ ಐಜಿಪಿ ಬೆಳ್ಳಾರೆ ಹಾಗೂ ಸುಬ್ರಹ್ಮಣ್ಯ ಠಾಣೆಯ ಪಿಎಸ್ಐಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ್ದಾರೆ.
ಇದನ್ನು ಓದಿ : Pramod Muthalik barred : ಶಾಂತಿ ಕದಡುವ ಆತಂಕ : ಪ್ರಮೋದ್ ಮುತಾಲಿಕ್ಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ
ಇದನ್ನೂ ಓದಿ : Fazil was killed : ಹುಟ್ಟು ಹಬ್ಬಕ್ಕೆಂದು ಬಟ್ಟೆ ತರಲು ಹೋಗಿದ್ದೇ ತಪ್ಪಾಯ್ತಾ : ಬರ್ತ್ಡೇ ಹಿಂದಿನ ದಿನವೇ ಹತ್ಯೆಯಾದ ಫಾಜಿಲ್
Praveen Nettaru murder case handed over to NIA