ಸೋಮವಾರ, ಏಪ್ರಿಲ್ 28, 2025
HomekarnatakaPraveen Nettaru murder case : ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ : ಸೆಕ್ಷನ್‌...

Praveen Nettaru murder case : ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ : ಸೆಕ್ಷನ್‌ ಜಾರಿ, ಹುಟ್ಟೂರಲ್ಲಿ ಅಂತ್ಯಕ್ರೀಯೆ

- Advertisement -

ಪುತ್ತೂರು : ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ (Praveen Nettaru murder case ) ಸಂಬಂಧಿಸಿದಂತೆ ಪ್ರವೀಣ್‌ ಮರಣೋತ್ತರ ಕಾರ್ಯವನ್ನು ನಡೆಸಲಾಗಿದೆ. ಹುಟ್ಟೂರಲ್ಲಿಂದು ಅಂತ್ಯಕ್ರೀಯೆ ನಡೆಯಲಿದ್ದು, ಪುತ್ತೂರು ವಿಭಾಗದ ಮೂರು ತಾಲೂಕುಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ 144 ಸೆಕ್ಷನ್‌ ಜಾರಿ ಮಾಡಲಾಗಿದೆ.

ದಕ್ಷಿಣ ಕನ್ನಡದ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಿನ್ನೆ ರಾತ್ರಿ ಹಂತಕರು ಬಿಜೆಪಿ ಯುವ ಮುಖಂಡ ಪ್ರವೀಣ್‌ ನೆಟ್ಟಾರು ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದರು. ಘಟನೆಯಿಂದ ಕರಾವಳಿಗರು ಬೆಚ್ಚಿಬಿದ್ದಿದ್ದಾರೆ. ಪ್ರಕರಣದ ಬೆನ್ನಲ್ಲೇ ಪ್ರವೀಣ್‌ ಮರಣೋತ್ತರ ಕಾರ್ಯವನ್ನು ನಡೆಸಲಾಗಿದ್ದು, ಮೃತದೇಹವನ್ನು ಪ್ರವೀಣ್‌ ಸಂಬಂಧಿಕರಿಗೆ ಹಸ್ತಾಂತರ ಮಾಡಲಾಗಿದೆ. ಹಿಂದೂ ಕಾರ್ಯಕರ್ತರು ಪ್ರವೀಣ್‌ ಹತ್ಯೆಗೆ ಸಂಬಂಧಿಸಿದಂತೆ ಪ್ರತಿಭಟನೆಯನ್ನು ನಡೆಸಿ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಇನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್‌ ಕುಮಾರ್‌ ಕಟೀಲು ವಿರುದ್ದವೂ ಆಕ್ರೋಶ ವ್ಯಕ್ತವಾಗುತ್ತಿದೆ.

ಮನೆಯ ಆವರಣದಲ್ಲೇ ಅಂತ್ಯಕ್ರೀಯೆ

ಪ್ರವೀಣ್‌ ಮರಣೋತ್ತರ ಕಾರ್ಯವನ್ನು ಪುತ್ತೂರಿನ ಆಸ್ಪತ್ರೆಯಲ್ಲಿ ನಡೆಸಲಾಗಿದೆ. ಪ್ರವೀಣ್‌ ಮೃತದೇಹವನ್ನು ಸ್ವಗ್ರಾಮಕ್ಕೆ ಕರೆದೊಯ್ಯಲಾಗುತ್ತಿದೆ. ದಾರಿಯುದ್ದಕ್ಕೂ ಅಮರ್‌ ರಹೇ ಎಂಬ ಘೋಷಣೆಯನ್ನು ಕೂಗಲಾಗುತ್ತಿದೆ. ಪ್ರವೀಣ್‌ ಮೃತದೇಹವನ್ನು ಬೆಳ್ಳಾರೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ಪ್ರವೀಣ್‌ ಮನೆಯ ಆವರಣದಲ್ಲಿಯೇ ಅಂತ್ಯಕ್ರೀಯೆಯನ್ನು ನಡೆಸಲು ಸಿದ್ದತೆಯನ್ನು ಮಾಡಿಕೊಳ್ಳಲಾಗುತ್ತಿದೆ. ಬಿಲ್ಲವ ಸಂಪ್ರದಾಯದಂತೆ ಅಂತ್ಯಕ್ರೀಯೆ ನಡೆಸಲಾಗುತ್ತದೆ.

ಪುತ್ತೂರು ವಿಭಾಗದಲ್ಲಿ ಸೆಕ್ಷನ್‌ ಜಾರಿ
ಪ್ರವೀಣ್‌ ಹತ್ಯೆಯ ಬೆನ್ನಲ್ಲೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪುತ್ತೂರು ವಿಭಾಗದ ಮೂರು ತಾಲೂಕುಗಳಲ್ಲಿ ಸೆಕ್ಷನ್‌ 144 ಜಾರಿ ಮಾಡಿ ಪುತ್ತೂರು ವಿಭಾಗಾಧಿಕಾರಿ ಗಿರೀಶ್‌ ನಂದನ್‌ ಅವರು ಆದೇಶ ಹೊರಡಿಸಿದ್ದಾರೆ. ಪುತ್ತೂರು, ಸುಳ್ಯ, ಕಡಬ ತಾಲೂಕಿನಾದ್ಯಂತ ಬೂದಿಮುಚ್ಚಿದ ಕೆಂಡದಂತಿದ್ದು, ಪುತ್ತೂರಿನ ಎರಡು ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ.

ಪ್ರವೀಣ್‌ ಹತ್ಯೆ ತನಿಖೆಗೆ ವಿಶೇಷ ತಂಡ ರಚನೆ

ಪ್ರವೀಣ್‌ ಹತ್ಯೆಯ ಪ್ರಕರಣದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ಇಲಾಖೆ ನಾಲ್ಕು ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ. ನಿನ್ನೆ ರಾತ್ರಿ ಬೆಳ್ಳಾರೆಯಲ್ಲಿ ನಿಂತಿದ್ದ ವೇಳೆಯಲ್ಲಿ ಬೈಕಿನಲ್ಲಿ ಬಂದಿದ್ದ ದುಷ್ಕರ್ಮಿಗಳ ತಂಡ ಹತ್ಯೆ ನಡೆಸಿದೆ. ಘಟನೆಯ ಬೆನ್ನಲ್ಲೇ ಆರೋಪಿಗಳ ಪತ್ತೆಗೆ ವಿಶೇಷ ತಂಡವನ್ನು ರಚನೆ ಮಾಡಲಾಗಿದ್ದು, ಶೀಘ್ರದಲ್ಲಿಯೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಎಸ್‌ಪಿ ಋಷಿಕೇಶ ಸೋನಾವಣೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಇದನ್ನು ಓದಿ : Praveen Nettaru murder : ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ : ಸಿಎಂ ಬೊಮ್ಮಾಯಿ ಖಂಡನೆ, ಯಾರು ಈ ಪ್ರವೀಣ್‌ ನೆಟ್ಟಾರು ?

ಇದನ್ನೂ ಓದಿ : Youth dies : ಕಬಡ್ಡಿ ಆಡುತ್ತಿರುವಾಗಲೇ ಹಾರಿ ಹೋಯ್ತು ವಿದ್ಯಾರ್ಥಿಯ ಪ್ರಾಣ ಪಕ್ಷಿ: ಮನಕಲುಕುತ್ತೆ ಯುವಕನ ಕೊನೆಕ್ಷಣದ ವಿಡಿಯೋ

Praveen Nettaru murder case : Section enforcement, cremation at hometown

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular