ಬೆಂಗಳೂರು : ಕರಾವಳಿ ಜಿಲ್ಲೆಯಲ್ಲಿ ಮತ್ತೊಮ್ಮೆ ನೆತ್ತರು ಹರಿದಿದೆ. ಬಿಜೆಪಿ ಯುವ ಮೋರ್ಛಾದ ಜಿಲ್ಲಾ ಮುಖಂಡ ಪ್ರವೀಣ್ ನೆಟ್ಟಾರು ದುಷ್ಕರ್ಮಿಗಳ ಮಾರಕ ದಾಳಿಗೆ ಬಲಿಯಾಗಿದ್ದಾರೆ. ಪ್ರವೀಣ್ ನೆಟ್ಟಾರು ಸಾವಿನ ಸುದ್ದಿ ಎಲ್ಲೆಡೆ ಸುದ್ದಿಯಾಗುತ್ತಿದ್ದಂತೆಯೇ ದಕ್ಷಿಣ ಕನ್ನಡದ ಪುತ್ತೂರು, ಸುಳ್ಯ ಹಾಗೂ ಕಡಬ ತಾಲೂಕಿನಲ್ಲಿ ಪರಿಸ್ಥಿತಿ ಉದ್ವಿಘ್ನಗೊಂಡಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಸುಳ್ಯ, ಕಡಬ ಹಾಗೂ ಬೆಳ್ಳಾರೆಯ ಪೊಲೀಸರು ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದಾರೆ.
ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಸಾವಿನ ಪ್ರಕರಣದ ವಿಚಾರವಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಪ್ರವೀಣ್ ನೆಟ್ಟಾರು ಸಾವು ಪ್ರಕರಣ ನಿಜಕ್ಕೂ ದುರದೃಷ್ಟಕರ. ರಾಜ್ಯ ಪೊಲೀಸ್ ಇಲಾಖೆ ಈ ಪ್ರಕರಣದಲ್ಲಿ ಈಗಾಗಲೇ ಅಲರ್ಟ್ ಆಗಿದ್ದು ಹಂತಕರು ಯಾರೇ ಆಗಿದ್ದರೂ ಸಹ ಶೀಘ್ರದಲ್ಲಿಯೇ ಅವರನ್ನು ಪತ್ತೆ ಮಾಡಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ಭರವಸೆ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಎಂಬಲ್ಲಿ ನಿನ್ನೆ ರಾತ್ರಿ ಪ್ರವೀಣ್ ನೆಟ್ಟಾರು ತಮ್ಮ ಅಂಗಡಿಯನ್ನು ಬಂದ್ ಮಾಡಿ ಮನೆಗೆ ತೆರಳಲು ಮುಂದಾಗುತ್ತಿದ್ದಂತೆಯೇ ಬಂದ ದುಷ್ಕರ್ಮಿಗಳು ಪ್ರವೀಣ್ರನ್ನು ಬರ್ಬರವಾಗಿ ಹತ್ಯೆಗೈದು ಎಸ್ಕೇಪ್ ಆಗಿದ್ದಾರೆ. ಪ್ರವೀಣ್ರ ಮೃತದೇಹವನ್ನು ಕೂಡಲೇ ಪುತ್ತೂರಿನ ಪ್ರಗತಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಬಳಿಕ ಪುತ್ತೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರವೀಣ್ ನೆಟ್ಟಾರು ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ನಡೆಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ . ಈ ಪ್ರಕರಣದಲ್ಲಿ ಈಗಾಗಲೇ ಪೊಲೀಸರು ಬೆಳ್ಳಾರೆ ಮೂಲದ ಐವರನ್ನು ವಶಕ್ಕೆ ಪಡೆದಿದ್ದು ತನಿಖೆ ನಡೆಸುತ್ತಿದ್ದಾರೆ.
ಇದನ್ನು ಓದಿ : Praveen Nettaru murder case : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಸೆಕ್ಷನ್ ಜಾರಿ, ಹುಟ್ಟೂರಲ್ಲಿ ಅಂತ್ಯಕ್ರೀಯೆ
ಇದನ್ನೂ ಓದಿ : Praveen Nettar Murder : ಪ್ರವೀಣ್ ಹತ್ಯೆ : ಸಿಎಂ ಬೊಮ್ಮಾಯಿ, ನಳಿನ್ ವಿರುದ್ದ ಹಿಂದೂ ಕಾರ್ಯಕರ್ತರ ಆಕ್ರೋಶ
praveen nettaru murder home minister araga jnanendra respond