state government : ಸರ್ಕಾರಿ ಕಚೇರಿಗಳಲ್ಲಿ ಇನ್ಮುಂದೆ ಫೋಟೋ/ವಿಡಿಯೋ ಕ್ಲಿಕ್ಕಿಸುವಂತಿಲ್ಲ : ರಾಜ್ಯ ಸರ್ಕಾರದ ಮಹತ್ವದ ಆದೇಶ

ಬೆಂಗಳೂರು : state government : ಸರ್ಕಾರಿ ಕಚೇರಿಗಳಲ್ಲಿ ಕರ್ತವ್ಯದ ಸಂದರ್ಭದಲ್ಲಿ ಫೋಟೋ ಹಾಗೂ ವಿಡಿಯೋಗಳನ್ನು ಶೂಟ್​ ಮಾಡಿ ಸೋಶಿಯಲ್​ ಮೀಡಿಯಾಗಳಲ್ಲಿ ಹರಿಬಿಡುತ್ತಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಸಂಬಂಧ ಮಹತ್ವದ ಆದೇಶವನ್ನು ಹೊರಡಿಸಿದೆ. ರಾಜ್ಯ ಸರ್ಕಾರದ ನೂತನ ಆದೇಶದ ಪ್ರಕಾರ ಸರ್ಕಾರಿ ಕಚೇರಿಗಳಲ್ಲಿ ಕೆಲಸದ ಅವಧಿಯಲ್ಲಿ ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಫೋಟೋ ಕ್ಲಿಕ್ಕಿಸುವುದು ಅಥವಾ ವಿಡಿಯೋ ಚಿತ್ರೀಕರಣ ಮಾಡುವುದಕ್ಕೆ ನಿಷೇಧ ಹೇರಲಾಗಿದೆ.


ರಾಜ್ಯದ ಪ್ರತಿಯೊಂದು ಸರ್ಕಾರಿ ಕಚೇರಿಗಳು ಅಂದರೆ ಗ್ರಾಮ, ತಾಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಈ ಆದೇಶ ಪಾಲನೆಯಾಗಲಿದೆ. ಸರ್ಕಾರಿ ಕಚೇರಿಗಳಿಗೆ ಆಗಮಿಸುವ ಕೆಲವು ಸಾರ್ವಜನಿಕರು ತಮ್ಮ ಕೆಲಸಗಳನ್ನು ಮಾಡಿಸಿಕೊಳ್ಳುವುದರ ಜೊತೆಯಲ್ಲಿ ಕರ್ತವ್ಯದ ಅವಧಿಯಲ್ಲಿ ಸರ್ಕಾರಿ ಕಚೇರಿಯ ಒಳಗಡೆ ಫೊಟೋ ಹಾಗೂ ವಿಡಿಯೋಗಳನ್ನು ಶೂಟ್​ ಮಾಡಿ ಸೋಶಿಯಲ್​ ಮೀಡಿಯಾದಲ್ಲಿ ಹರಿಬಿಡುತ್ತಿದ್ದಾರೆ. ಇದು ಸರ್ಕಾರಿ ಸಿಬ್ಬಂದಿ ಇನ್ನೂ ಮುಖ್ಯವಾಗಿ ಮಹಿಳಾ ಸಿಬ್ಬಂದಿಗೆ ಇರಿಸು ಮುರಿಸು ಉಂಟು ಮಾಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿದೆ.


ಸರ್ಕಾರಿ ಕಚೇರಿಗಳಲ್ಲಿ ಫೋಟೋ ಹಾಗೂ ವಿಡಿಯೋಗಳನ್ನು ಕ್ಲಿಕ್ಕಿಸಿ ಅದನ್ನು ಸೋಶಿಯಲ್​ ಮೀಡಿಯಾಗಳಲ್ಲಿ ದುರ್ಬಳಕೆ ಮಾಡಿಕೊಳ್ಳುವ ಮೂಲಕ ಸರ್ಕಾರದ ಘನತೆಗೆ ಕುಂದು ಉಂಟು ಮಾಡಲಾಗ್ತಿದೆ. ಇದರಿಂದ ಮಹಿಳಾ ನೌಕರರಿಗೆ ಸಮಸ್ಯೆ ಆಗುತ್ತಿರುವುದು ಕೂಡ ಸರ್ಕಾರದ ಗಮನಕ್ಕೆ ಬಂದಿದೆ. ಈ ಬಗ್ಗೆ ಕೂಲಕುಂಷವಾಗಿ ಗಮನ ಹರಿಸಿರುವ ಸರ್ಕಾರವು ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಕಚೇರಿ ವೇಳೆಯಲ್ಲಿ ಸಾರ್ವಜನಿಕರು ಫೊಟೋ ಹಾಗೂ ವಿಡಿಯೋಗಳನ್ನು ಮಾಡದಂತೆ ನಿರ್ಬಂಧ ಹೇರುವುದು ಅವಶ್ಯಕವಾಗಿದೆ ಎಂದು ರಾಜ್ಯ ಸರ್ಕಾರ ಆದೇಶ ಪ್ರತಿಯಲ್ಲಿ ತಿಳಿಸಿದೆ.

ಇದನ್ನು ಓದಿ : Virat Kohli Dropped : ವಿಂಡೀಸ್ ಟಿ20 ಸರಣಿಗೆ ಟೀಮ್ ಇಂಡಿಯಾ ಪ್ರಕಟ ; ಇದೇ ಮೊದಲ ಬಾರಿ ಭಾರತ ತಂಡದಿಂದ ವಿರಾಟ್ ಕೊಹ್ಲಿ ಡ್ರಾಪ್

ಇದನ್ನೂ ಓದಿ : Robin Uthappa blessed with a baby girl : ರಾಬಿನ್ ಉತ್ತಪ್ಪಗೆ ಹೆಣ್ಣು ಮಗು, 2ನೇ ಮಗುವಿಗೆ ತಂದೆಯಾದ ಕೊಡಗಿನ ವೀರ

private individuals cannot take photos videos during office hours of all state government departments state govt

Comments are closed.