PSI recruitment Scam : ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣ : 12 ಅಭ್ಯರ್ಥಿಗಳು ಅರೆಸ್ಟ್

ಬೆಂಗಳೂರು : ದೇಶದಾದ್ಯಂತ ತಲ್ಲಣ ಮೂಡಿಸಿರುವ ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ (PSI recruitment Scam ) ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಂಗ್‌ ಪಿನ್‌ ದಿವ್ಯಾ ಹಾಗರಗಿ ಸೇರಿದಂತೆ ಇಪ್ಪತ್ತು ಅಧಿಕ ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಇದೀಗ ಬೆಂಗಳೂರಲ್ಲಿ ಪೊಲೀಸರು ಮತ್ತೆ 12 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಕಲಬುರಗಿಯಲ್ಲಿ ಬಯಲಾಗಿತ್ತು. ಇದೀಗ ಬೆಂಗಳೂರಲ್ಲಿಯೂ ಅಕ್ರಮದ ಶಂಕೆಯ ಹಿನ್ನೆಲೆಯಲ್ಲಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಬೆಂಗಳೂರಿನ ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ನಡೆದಿರುವ ಅನುಮಾನ ವ್ಯಕ್ತವಾಗಿದೆ. ಸುಮಾರು 22 ಅಭ್ಯರ್ಥಿಗಳ ಒಎಂಆರ್ ಪ್ರತಿಯಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ 12 ಜನರ ಬಂಧಿಸಿದ್ದು, ಉಳಿದವರಿಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಬಂಧಿತ 12 ಮಂದಿಯನ್ನು 10 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಸಿಐಡಿ ಡಿಎಸ್ಪಿ ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣವನ್ನೂ ಸಹ ಸಿಐಡಿಗೆ ವರ್ಗಾಯಿಸಲಾಗಿದೆ. ಪಿಎಸ್‌ಐ ನೇಮಕಾತಿ ಪ್ರಕರಣ ದಿನೇ ದಿನೇ ಕಗ್ಗಂಟಾಗುತ್ತಿದೆ. ರಾಜ್ಯ ಸರಕಾರದ ವಿರುದ್ದ ಪ್ರತಿಪಕ್ಷಗಳು ಮುಗಿಬಿದ್ದ ಬೆನ್ನಲ್ಲೇ ಪ್ರಕರಣದ ಕಿಂಗ್‌ ಪಿನ್‌ ಬಿಜೆಪಿ ಮುಖಂಡರಾದ ದಿವ್ಯಾ ಹಾಗರಗಿಯನ್ನು ಪೊಲೀಸರು ಬಂಧಿಸಿದ್ದರು. ಇದೀಗ ಅಭ್ಯರ್ಥಿಗಳು ಕೂಡ ಅಕ್ರಮದಲ್ಲಿ ಬಾಗಿಯಾಗಿರುವ ಹಿನ್ನೆಲೆಯಲ್ಲಿ ಅವರನ್ನೂ ಕೂಡ ವಶಕ್ಕೆ ಪಡೆಯುವ ಸಾಧ್ಯತೆಯಿದೆ.

ಈಗಾಗಲೇ ಸುಮಾರು ಮೂವತ್ತಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಇನ್ನಷ್ಟು ಮಂದಿಯನ್ನು ಬಂಧಿಸುವ ಸಾಧ್ಯತೆಯಿದೆ. ತಲೆ ಮರೆಯಿಸಿಕೊಂಡಿರುವ ಇತರ ವಿದ್ಯಾರ್ಥಿಗಳಿಗಾಗಿ ಪೊಲೀಸರು ಹುಡುಕಾಟವನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ : ಒಕ್ಕಲಿಗ ನಾಯಕನಿಗೆ ಪಕ್ಷದಲ್ಲಿ ಪ್ರಬಲ ಸ್ಥಾನ ನೀಡಲು ಮುಂದಾದ ಬಿಜೆಪಿ

ಇದನ್ನೂ ಓದಿ : ಲಿಖಿತ ಪರೀಕ್ಷೆಯಂತೆ ದೈಹಿಕ ಪರೀಕ್ಷೆಯನ್ನೂ ರದ್ದುಗೊಳಿಸುವಂತೆ ಶಾಸಕ ಪ್ರಿಯಾಂಕ್​ ಖರ್ಗೆ ಆಗ್ರಹ

PSI recruitment Scam 12 candidates arrested in Bangalore

Comments are closed.