amarnath yatra : ಅಮರನಾಥ ಗುಹೆಯಲ್ಲಿ ಮೇಘಸ್ಫೋಟ : ಕನ್ನಡಿಗರ ರಕ್ಷಣೆಗೆ ಸಹಾಯವಾಣಿ ಆರಂಭ

ಬೆಂಗಳೂರು : amarnath yatra : ದಕ್ಷಿಣ ಕಾಶ್ಮೀರದ ಅಮರನಾಥ ಗುಹೆಯ ಬಳಿ ಸಂಭವಿಸಿದ ಮೇಘ ಸ್ಫೋಟದಿಂದಾಗಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು ಈಗಾಗಲೇ 15 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಅಮರನಾಥದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ರಾಜ್ಯ ಸರ್ಕಾರ ಸಹಾಯವಾಣಿಯನ್ನು ತೆರೆದಿದೆ . ಈ ಸಂಬಂಧ ಕಂದಾಯ ಸಚಿವ ಆರ್​.ಅಶೋಕ್​ ಟ್ವೀಟ್​ ಮಾಡಿದ್ದು, ಅಮರನಾಥ ಯಾತ್ರೆಯಲ್ಲಿ ಸಿಲುಕಿರುವ ಯಾವುದೇ ಕನ್ನಡಿಗರು ರಾಜ್ಯ ತುರ್ತು ನಿಯಂತ್ರಣ ಕೊಠಡಿಯ ಈ ಸಹಾಯವಾಣಿಗಳಿಗೆ ಕರೆ ಮಾಡಿ ಎಂದು ಸೂಚನೆ ನೀಡಿದ್ದಾರೆ.


ಅಮರನಾಥ ಯಾತ್ರೆಯಲ್ಲಿ ಸಿಲುಕಿರುವ ಯಾತ್ರಾರ್ಥಿಗಳ ರಕ್ಷಣೆಗಾಗಿ ಜಮ್ಮು ಕಾಶ್ಮೀರದ ಪೊಲೀಸರು, ಎನ್‌ಡಿಆರ್‌ಎಫ್, ಐಟಿಬಿಪಿ, ಭಾರತೀಯ ಸೇನೆ, ಸಿಆರ್‌ಪಿಎಫ್, ಬಿಎಸ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ಪಡೆಗಳು ಸ್ಥಳದಲ್ಲಿ ಜಮಾಯಿಸಿವೆ. ಈಗಾಗಲೇ ಮೃತದೇಹಗಳನ್ನು ಹೊರಗೆ ತೆಗೆಯುವ ಕಾರ್ಯವನ್ನು ಮಾಡಲಾಗ್ತಿದೆ. ನಿನ್ನೆ ಸಂಜೆ ಐದು ಮೂವತ್ತರ ಸುಮಾರಿಗೆ ಅಮರನಾಥದಲ್ಲಿ ಮೇಘ ಸ್ಫೋಟ ಉಂಟಾದ ಪರಿಣಾಮವಾಗಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿತ್ತು.


ಅಮರನಾಥ ಯಾತ್ರೆಯಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರವು 080-1070, 22340676 ಸಹಾಯವಾಣಿ ಸಂಖ್ಯೆಯನ್ನು ನೀಡಿದೆ. ಅಲ್ಲದೇ ಅಮರನಾಥ ಯಾತ್ರೆಯಲ್ಲಿ ಸಿಲುಕಿರುವ ಎಲ್ಲಾ ಕನ್ನಡಿಗರ ರಕ್ಷಣೆಯನ್ನು ಮಾಡಲಾಗುತ್ತದೆ ಎಂಬ ಭರವಸೆಯನ್ನೂ ರಾಜ್ಯ ಸರ್ಕಾರ ನೀಡಿದೆ.


ಈ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್​ ಮಾಡಿದ್ದರು, ಮೇಘಸ್ಫೋಟದಿಂದಾಗಿ ಪವಿತ್ರ ಅಮರನಾಥ ಯಾತ್ರೆಯಲ್ಲಿ ಭಾಗಿಯಾಗಿದ್ದ 12 ಯಾತ್ರಿಕರು ಬಲಿಯಾದ ಸುದ್ದಿಯನ್ನು ಕೇಳಿ ತೀವ್ರ ದುಃಖವಾಗಿದೆ. ಅಗಲಿದ ಆತ್ಮಗಳಿಗೆ ಶಾಂತಿ ಸಿಗಲಿ, ಮೃತರ ಕುಟುಂಬಗಳಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವೆ ಎಂದು ಬರೆದುಕೊಂಡಿದ್ದಾರೆ.

ಇದನ್ನು ಓದಿ : Mad Dog Bitten : ಕೋಟದಲ್ಲಿ ಹುಚ್ಚುನಾಯಿ ಭೀತಿ : ಹತ್ತಕ್ಕೂ ಅಧಿಕ ಮಂದಿಗೆ ಕಚ್ಚಿದ ನಾಯಿ

ಇದನ್ನೂ ಓದಿ : ಬಿಸಿಸಿಐ= ಬೋರ್ಡ್ ಆಫ್ ಚೇಂಜಿಂಗ್ ಕ್ಯಾಪ್ಟನ್ಸ್ ಇನ್ ಇಂಡಿಯಾ !

ಇದನ್ನೂ ಓದಿ : Vikram Is Fine : ತಮಿಳು ನಟ ವಿಕ್ರಮ್​ಗೆ ಹೃದಯಾಘಾತವಾಗಿಲ್ಲ : ವದಂತಿಗಳಿಗೆ ಕಿವಿಗೊಡಬೇಡಿ ಎಂದ ಮ್ಯಾನೇಜರ್​

ಇದನ್ನೂ ಓದಿ : Amarnath cloudburst : ಅಮರನಾಥ ಗುಹೆಯ ಬಳಿ ಮೇಘಸ್ಫೋಟ : ಇಬ್ಬರ ಮೃತದೇಹ ಪತ್ತೆ

r ashok tweet on amarnath yatra cloud burst

Comments are closed.