ಬೆಂಗಳೂರು : ಸ್ಯಾಂಡಲ್ ವುಡ್ ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಐದು ತಿಂಗಳು ಕಳೆದಿದೆ. ಆದರೂ ಇನ್ನೂ ಪುನೀತ್ ಕುಟುಂಬಕ್ಕೆ ಸಾಂತ್ವನ ಹೇಳುವವರ ಸಂಖ್ಯೆ ಕಡಿಮೆಯಾಗಿಲ್ಲ. ರಾಜ್ಯ ಪ್ರವಾಸದಲ್ಲಿರೋ ರಾಹುಲ್‌ಗಾಂಧಿ ( Rahul Gandhi) ಕೂಡ ಪುನೀತ್ ರಾಜ್ ಕುಮಾರ್ (Puneeth Raj Kumar ) ನಿವಾಸಕ್ಕೆ ಭೇಟಿ ನೀಡಿದ್ದಾರೆ.

2023 ರ ವಿಧಾನಸಭಾ ಚುನಾವಣೆ ಸಿದ್ಧತೆ ದೃಷ್ಟಿಯಿಂದ ರಾಜ್ಯಕ್ಕೆ ಭೇಟಿ ನೀಡಿರೋ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ( Rahul Gandhi) , ತುಮಕೂರು ಭೇಟಿ ಬಳಿಕ ಸದಾಶಿವ ನಗರದ ಪುನೀತ್ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಕಾಂಗ್ರೆಸ್ ನಾಯಕರಾದ ರಣದೀಪ್ ಸುರ್ಜೇವಾಲಾ, ಡಿ.ಕೆ.ಶಿವಕುಮಾರ್, ಸಿದ್ಧರಾಮಯ್ಯ ಸೇರಿದಂತೆ ಹಲವು ನಾಯಕರು ರಾಹುಲ್ ಗಾಂಧಿಗೆ ಸಾಥ್ ನೀಡಿದ್ದಾರೆ.

ಪುನೀತ್ ನಿವಾಸಕ್ಕೆ ತೆರಳಿದ ರಾಹುಲ್ ಗಾಂಧಿ, ಪುನೀತ್ ರಾಜ್ ಕುಮಾರ್ (Puneeth Raj Kumar ) ಭಾವ ಚಿತ್ರ ಕ್ಕೆ ಪುಷ್ಪ ನಮನ ಸಲ್ಲಿಸಿದರು. ಬಳಿಕ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್, ಸಹೋದರರಾದ ರಾಘವೇಂದ್ರ ರಾಜ್ ಕುಮಾರ್ ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ರಾಹುಲ್ ಗಾಂಧಿ ಡಾ.ರಾಜ್ ಕುಟುಂಬದ ಜೊತೆ ಆತ್ಮೀಯವಾದ ಒಡನಾಟ ಹೊಂದಿದ್ದಾರೆ. ಈ ಹಿಂದೆ ಡಾ.ರಾಜ್ ಕುಮಾರ್ ಪತ್ನಿ ಪಾರ್ವತಮ್ಮ ರಾಜ್ ಕುಮಾರ್ ನಿಧನರಾದ ಬಳಿಕವೂ ಡಾ.ರಾಜ್ ನಿವಾಸಕ್ಕೆ ರಾಹುಲ್ ಗಾಂಧಿ ಭೇಟಿ ನೀಡಿದ್ದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದರು.

ಈಗ ಅಕಾಲಿಕವಾಗಿ ಪುನೀತ್ ರಾಜ್ ಕುಮಾರ್ ನಿಧನದ ಬಳಿಕ ಇದೇ ಮೊದಲ ಬಾರಿಗೆ ಕರ್ನಾಟಕಕ್ಕೆ ಆಗಮಿಸಿದ ರಾಹುಲ್ ಗಾಂಧಿ ಪುನೀತ್ ನಿವಾಸಕ್ಕೆ ಭೇಟಿ ನೀಡಿದ್ದು ಕುಟುಂಬಸ್ಥ ರ ಜೊತೆ ಕೆಲಕಾಲ ಮಾತುಕತೆ ನಡೆಸಿ ಸಾಂತ್ವನ ಹೇಳಿದ್ದಾರೆ. ರಾಹುಲ್ ಗಾಂಧಿ ಅವರ ರಾಜ್ಯ ಭೇಟಿಯನ್ನು 2023 ವಿಧಾನಸಭಾ ಚುನಾವಣೆಯ ಪೂರ್ವಭಾವಿ ಭೇಟಿ ಎಂದೇ ಪರಿಗಣಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ರಾಹುಲ್ ಗಾಂಧಿ ಪುನೀತ್ ರಾಜ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿರೋದು ಮತಗಳಿಕೆಯ ತಂತ್ರ ಎಂದೇ ಬಣ್ಣಿಸಲಾಗುತ್ತಿದೆ.

ರಾಹುಲ್ ಗಾಂಧಿ ಬೆನ್ನಲ್ಲೇ, ಶುಕ್ರವಾರ ಅಮಿತ್ ಶಾ ಕೂಡ ರಾಜ್ಯಕ್ಕೆ ಭೇಟಿ ನೀಡಲಿದ್ದು ಗುರುವಾರ ತಡರಾತ್ರಿಯೇ ಶಾ ನಗರಕ್ಕೆ ಆಗಮಿಸಿದ್ದಾರೆ. ಹೀಗಾಗಿ ಅಮಿತ್ ಶಾ ಕೂಡ ಪುನೀತ್ ರಾಜ್ ಕುಮಾರ್ ನಿವಾಸ ಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಲಿದ್ದಾರೆ ಎಂದು ನೀರಿಕ್ಷಿಸಲಾಗುತ್ತಿದೆ.
ಇದನ್ನೂ ಓದಿ : ಪುನೀತ್ ನಿವಾಸಕ್ಕೆ ಸಂಜಯ್ ದತ್ : ಡಾ.ರಾಜ್ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಕೆಜಿಎಫ್-2 ವಿಲನ್
ಇದನ್ನೂ ಓದಿ : Puneeth Rajkumar statue : ಬಿಬಿಎಂಪಿ ಆವರಣದಲ್ಲಿ ಪವರ್ ಸ್ಟಾರ್ : ಪುನೀತ್ ಪುತ್ಥಳಿ ಅನಾವರಣಗೊಳಿಸಿದ ಸಿಎಂ
Rahul Gandhi Visit Puneeth Raj Kumar House