ಧಾರವಾಡ : Raid on PFI and SDPI : ದೇಶಾದ್ಯಂತ ಬೆಳ್ಳಂ ಬೆಳಗ್ಗೆ ಪಿಎಫ್ಐ ಹಾಗೂ ಎಸ್ಡಿಪಿಐ ಮುಖಂಡರ ನಿವಾಸದ ಮೇಲೆ ಪೊಲೀಸರು ಇಂದು ದಾಳಿ ನಡೆಸಿದ್ದಾರೆ. ಎನ್ಐಎ ದಾಳಿಗೆ ಪ್ರತಿಕಾರ ತೀರಿಸಿಕೊಳ್ಳಬೇಕೆಂದು ಮುಂದಾಗಿದ್ದ ಪಿಎಫ್ಐ ಸಂಘಟನೆಗಳ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ಪಡೆದ ಬೆನ್ನಲ್ಲೇ ಇಂದು ಪೊಲೀಸರು ಪಿಎಫ್ಐ ಹಾಗೂ ಎಸ್ಡಿಪಿಐ ಸಂಘಟನೆಗಳ ಮೇಲೆ ದಾಳಿ ನಡೆಸಿದ್ದಾರೆ.
ಇಂದು ರಾಜ್ಯಾದ್ಯಂತ ಪಿಎಫ್ಐ ಹಾಗೂ ಎಸ್ಡಿಪಿಐ ಮುಖಂಡರ ನಿವಾಸದ ಮೇಲೆ ದಾಳಿ ನಡೆದಿದೆ. ಇದರಲ್ಲಿ ಧಾರವಾಡದಲ್ಲಿ 10ಕ್ಕೂ ಅಧಿಕ ಪಿಎಫ್ಐ ಹಾಗೂ ಎಸ್ಡಿಪಿಐ ಮುಖಂಡರನ್ನು ಇಂದು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಧಾರವಾಡ ಜಿಲ್ಲೆಯ ಹಳೇ ಹುಬ್ಬಳ್ಳಿಯ ಕಸಬಾ ಪೇಟೆ, ಕಲಘಟಗಿ , ಹುಬ್ಬಳ್ಳಿ ಗ್ರಾಮೀಣ ಹಾಗೂ ಧಾರವಾಡ ಗ್ರಾಮೀಣ ಭಾಗಗಳಲ್ಲಿದ್ದ ಪಿಎಫ್ಐ ಹಾಗೂ ಎಸ್ಡಿಪಿಐ ಕಾರ್ಯಕರ್ತರನ್ನು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದ ಕಾರ್ಯಾಚರಣೆಯಲ್ಲಿ ವಶಕ್ಕೆ ಪಡೆದಿದ್ದಾರೆ.
ಹುಬ್ಬಳ್ಳಿ ಗ್ರಾಮೀಣ ಠಾಣಾ ವ್ಯಾಪ್ತಿಯ ಅದರಗುಂಚಿ ಗ್ರಾಮದ ಅಬ್ಬಾಸ್ ಅಲಿ ಮಂಟಗಣಿ ಎಂಬಾತನನ್ನು ಸಿಪಿಐ ರಮೇಶ್ ಗೋಕಾಕ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ವಶಕ್ಕೆ ಪಡೆಯಲಾಗಿದೆ. ಸಿಆರ್ ಪಿಸಿ 107, 151 ಅಡಿಯಲ್ಲಿ ಅಬ್ಬಾಸ್ ಅಲಿಯನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.ಇದರ ಜೊತೆಯಲ್ಲಿ ಧಾರವಾಡ ಜಿಲ್ಲೆಯ ಕಲಘಟಕಿ ತಾಲೂಕಿನ ಮಿಶ್ರಿಕೋಟಿ ಗ್ರಾಮದ ಪಿಎಫ್ಐ ಕಾರ್ಯಕರ್ತ ಸಿಕಂದರ್ ಶಾಲಗಾರ್ನನ್ನೂ ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸ್ತಿದ್ದಾರೆ.
ಇನ್ನು ಪಿಎಫ್ಐ ಹಾಗೂ ಎಸ್ಡಿಪಿಐ ಕಾರ್ಯಕರ್ತರ ಬಂಧನವನ್ನು ಖಂಡಿಸಿ ಹುಬ್ಬಳ್ಳಿಯಲ್ಲಿ ಪಿಎಫ್ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ಸಂದರ್ಭದಲ್ಲಿ ಕೆಲ ಕಾಲ ಗೊಂದಲದ ವಾತಾವರಣ ಕೂಡ ನಿರ್ಮಾಣವಾಗಿದೆ.
ಇದನ್ನು ಓದಿ : Again Raid On PFI: ಸೇಡು ತೀರಿಸಿಕೊಳ್ಳಲು ಸ್ಕೆಚ್.. PFI ಮೇಲೆ ಮತ್ತೆ ರೇಡ್
Raid on PFI and SDPI organization in Hubli too: One SDPI leader arrested