Yellow alert announced : ಕರ್ನಾಟಕದಲ್ಲಿ ಮಳೆ ಮುಂದುವರಿಕೆ : ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು : ( Yellow alert announced ) ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನಲೆಯಲ್ಲಿ ಕರ್ನಾಟಕರ ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಮಳೆಯಾಗುವ ಸಾಧ್ಯತೆಯಿದೆ. ಹಾಸನ, ಮೈಸೂರು, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಇಂದು ʼಯೆಲ್ಲೋ ಅಲರ್ಟ್‌ʼ ಘೋಷಿಸಲಾಗಿದೆ.

ಬೆಂಗಳೂರು ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಅಧಿಕ ಮಳೆಯಾಗಲಿದ್ದು, ಉತ್ತರ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಚಳಿಯ ವಾತಾವರಣ ಹೆಚ್ಚಾಗಿದೆ. ಬೆಣಗಳೂರು , ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕೊಂಚ ಹೆಚ್ಚು ಮಳೆಯಾಗುವ ( Yellow alert announced ) ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಕೆಲವೊಂದು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಇದನ್ನೂ ಓದಿ : Uttarakhand avalanche: ಉತ್ತರಾಖಂಡ ಹಿಮಪಾತದಲ್ಲಿ ಸಿಲುಕಿದ ಕನ್ನಡಿಗರು

ಇದನ್ನೂ ಓದಿ : Bus Falls In Gorge: ಪ್ರಪಾತಕ್ಕೆ ಬಿದ್ದ ಬಸ್.. 25ಕ್ಕೂ ಹೆಚ್ಚು ಬಲಿ.. ಮದುವೆ ಖುಷಿಯಲ್ಲಿದ್ದವರು ಮಸಣಕ್ಕೆ

ಇದನ್ನೂ ಓದಿ : Wednesday Horoscope : ಹೇಗಿದೆ ಬುಧವಾರದ ದಿನಭವಿಷ್ಯ (05.10.2022)

ಚಿಕ್ಕಮಗಳೂರು , ಚಾಮರಾಜನಗರ , ಹಾಸನ, ಕೊಡಗು, ಶಿವಮೊಗ್ಗ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಗಳು ಹೆಚ್ಚಿರುವುದರಿಂದ ʼಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆʼ. ದಕ್ಷಿಣ ಒಳನಾಡಿನಲ್ಲಿ ಇಂದು ವ್ಯಾಪಕ ಮಳೆಯಾಗಲಿದ್ದು, ರಾಜ್ಯದ ಬೇರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಸೂಚಿಸಲಾಗಿದೆ.

ಯಾವ ರಾಜ್ಯಗಳಲ್ಲಿ ಇಂದು ಮಳೆಯಾಗಲಿದೆ ?
ಕರ್ನಾಟಕ ಮಾತ್ರವಲ್ಲದೇ ಭಾರತದ ಹಲವು ರಾಜ್ಯಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ಉತ್ತರ ಪ್ರದೇಶದ ಪಶ್ಚಿಮ ಭಾಗದಲ್ಲಿ ಅಕ್ಟೋಬರ್‌ 6 ಮತ್ತು 7 ರಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳು ಇವೆ. ಇಂದು ಬಿಹಾರ ಮತ್ತು ಮಧ್ಯಪ್ರದೇಶದ ಅಲ್ಲಲ್ಲಿ ವ್ಯಾಪಕ ಮಳೆಯಾಗುವ ಕುರಿತು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Many districts of Karnataka are also likely to receive rain today in the wake of a surface cyclone in the Bay of Bengal.

Comments are closed.