ಬೆಂಗಳೂರು : ಪಡಿತರ ಚೀಟಿಯನ್ನು ಹೊಂದಿರುವ ಕುಟುಂಬಗಳಿಗೆ ರಾಜ್ಯ ಸರಕಾರ ಗುಡ್ ನ್ಯೂಸ್ ಕೊಟ್ಟಿದೆ. ಪಡಿತರ ಚೀಟಿ ಸಂಖ್ಯೆಯನ್ನೇ ಕುಟುಂಬದ ಗುರುತಿನ ಸಂಖ್ಯೆಯನ್ನಾಗಿ ಪರಿಗಣಿಸುವ ಕುರಿತಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ಪ್ರತೀ ಕುಟುಂಬಕ್ಕೆ ಕುಟುಂಬದ ಗುರುತಿನ ಚೀಟಿ ನೀಡುವ ಯೋಜನೆಯ ಕುರಿತಾಗಿ ಸರ್ಕಾರದ ಹಿರಿಯ ಅಧಿಕಾರಿಗಳ ಜೊತೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚರ್ಚೆ ನಡೆಸಿದ್ದಾರೆ. ಸರ್ಕಾರದ ಯೋಜನೆಗಳ ಪ್ರಯೋಜನ ಪಡೆಯುತ್ತಿರುವ ಫಲಾನುಭವಿಗಳ ಸಮಗ್ರ ಮಾಹಿತಿ ಪಡೆಯಲು ಮತ್ತು ಅರ್ಹ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸಲು ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಚರ್ಚೆ ನಡೆಸಲಾಗಿದೆ.
ವಿವಿಧ ಯೋಜನೆಗಳ ಸೌಲಭ್ಯವನ್ನು ಗುರುತಿಸುವ ಉದ್ದೇಶದಿಂದ ಕುಟುಂಬದ ಗುರುತಿನ ಚೀಟಿಯನ್ನಾಗಿ ಪಡಿತರ ಚೀಟಿಯನ್ನು ಬಳಸಲು ನಿರ್ಧರಿಸಲಾಗಿದೆ. ಯೋಜನೆಗಳನ್ನು ಅರ್ಹರಿಗೆ ತಲುಪಿಸಲು ಇದರಿಂದ ಅನುಕೂಲವಾಗುತ್ತದೆ.
ಪಡಿತರ ಚೀಟಿ ಸಂಖ್ಯೆಯನ್ನೇ ಕುಟುಂಬದ ಗುರುತಿನ ಸಂಖ್ಯೆಯನ್ನು ಪರಿಗಣಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಇನ್ನು ಪಡಿತರ ಚೀಟಿ ಇಲ್ಲದವರು ಆನ್ ಲೈನ್ ಮೂಲಕ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿ ಗುರುತಿನ ಸಂಖ್ಯೆ ಪಡೆಯಬಹುದಾಗಿದೆ ಎಂದು ಹೇಳಲಾಗಿದೆ.