ಉಡುಪಿ, ದ.ಕ. ಜಿಲ್ಲೆಯಲ್ಲಿ ರೆಡ್ ಅಲರ್ಟ್‌ : ಜುಲೈ 11 ರಂದು ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು : ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ರೆಡ್‌ ಅಲರ್ಟ್‌ ಮುಂದುವರಿಕೆ ಮಾಡಲಾಗಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಜುಲೈ ಜು.11 ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ (Udupi Dakshina Kannada Holiday) ಮಾಡಿ ಜಿಲ್ಲಾಡಳಿತಗಳು ಆದೇಶ ಹೊರಡಿಸಿವೆ.

ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಾತ್ರವೇ ರಜೆಯನ್ನು ಘೋಷಣೆ ಮಾಡಲಾಗಿದ್ದು, ಪಿಯುಸಿ, ಪದವಿ ಹಾಗೂ ಇತರ ವೃತ್ತಿಪರ ಸಂಸ್ಥೆಗಳಿಗೆ ಈ ರಜೆ ಅನ್ವಯ ಆಗುವುದಿಲ್ಲ ಎಂದು ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆದೇಶ ಹೊರಡಿಸಿದ್ದಾರೆ. ಕಳೆದ ಒಂದು ವಾರದಿಂದಲೂ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಮಳೆ ಇನ್ನಷ್ಟು ದಿನಗಳ ಕಾಲ ಮುಂದುವರಿಕೆಯಾಗುವ ಸಾಧ್ಯತೆಯಿದೆ.‌

ಇನ್ನೂ ಉಡುಪಿ ಜಿಲ್ಲೆಯಲ್ಲಿಯೂ ಮಳೆ ಮುಂದುವರಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆಯನ್ನು ಮುಂದುವರಿಕೆ ಮಾಡಲಾಗಿದೆ. ಆದ್ರೆ ಪದವಿ ಪೂರ್ವ ಕಾಲೇಜು, ಪದವಿ ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಉಡುಪಿ ಜಿಲ್ಲೆಯ ಕುಂದಾಪುರ, ಬೈಂದೂರು, ಬ್ರಹ್ಮಾವರ, ಕಾರ್ಕಳ ಹಾಗೂ ಉಡುಪಿ ತಾಲೂಕಿನಾದ್ಯಂತ ಮಳೆ ಆರ್ಭಟಿಸುತ್ತಿದೆ. ಆಗುಂಬೆ ಘಾಟಿಯಲ್ಲಿ ಭೂ ಕುಸಿತವಾಗಿದ್ದು, ರಸ್ತೆ ಸಂಪೂರ್ಣವಾಗಿ ಬಂದ್‌ ಆಗಿದೆ. ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ : ಕರ್ನಾಟಕಕ್ಕೆ ಮಳೆ ಕಂಟಕ

ಬೆಂಗಳೂರು : ಕಳೆದ ಒಂದು ವಾರದಿಂದಲೂ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕರಾವಳಿ, ಮಲೆನಾಡಿನ ಭಾಗದ ಜನತೆ ತತ್ತರಿಸಿ ಹೋಗಿದ್ದಾರೆ. ಈ ನಡುವಲ್ಲೇ ಅರಬ್ಬಿ ಸಮುದ್ರ ಹಾಗೂ ಒಡಿಶಾದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ ಸುರಿಯಲಿದೆ.

ಅರಬ್ಬಿ ಸಮುದ್ರ ಹಾಗೂ ಒಡಿಶಾದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ ಸುರಿಯುವ ಕುರಿತು ಮುನ್ಸೂಚನೆಯನ್ನು ನೀಡಿದೆ. ಈಗ ಸುರಿಯುತ್ತಿರುವ ಮಳೆಗಿಂತಲೂ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಲ್ಲದೇ ಅಪಾರ ಪ್ರಮಾಣದಲ್ಲಿ ಅನಾಹುತ ಸಂಭವಿಸುವ ಭೀತಿ ಎದುರಾಗಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ : Hudugi movie : ಕನ್ನಡದಲ್ಲೂ ಬರ್ತಿದೆ ರಾಮ್ ಗೋಪಾಲ್ ವರ್ಮಾ ಸಿನಿಮಾ : ಬೆಂಗಳೂರಿನಲ್ಲಿ ಹುಡುಗಿ ಚಿತ್ರದ ಪ್ರಚಾರ

ಇದನ್ನೂ ಓದಿ : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ : ಕರ್ನಾಟಕಕ್ಕೆ ಮಳೆ ಕಂಟಕ : ಈ ಜಿಲ್ಲೆಯ ಶಾಲೆ, ಕಾಲೇಜಿಗೆ ಮತ್ತೆರಡು ದಿನ ರಜೆ

Red alert in Udupi Dakshina Kannada Holiday announced for primary and high schools on July 11

Comments are closed.