ಹಿಂದುಳಿದ ವರ್ಗದವರಿಗೆ ಗುಡ್ ನ್ಯೂಸ್: 1.41 ಲಕ್ಷ ಫಲಾನುಭವಿಗಳಿಗೆ ಸಹಾಯಧನ ಬಿಡುಗಡೆ ಮಾಡಿದ ಸಿಎಂ ಬೊಮ್ಮಾಯಿ

ಬೆಂಗಳೂರು : (Release of subsidy) ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಮೇಲೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ವಿವಿಧ ಕಟ್ಟಡ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ವಿವಿಧ ಅಭಿವೃದ್ಧಿ ನಿಗಮದ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿದ್ದು, ಹಿಂದುಳಿದ ವರ್ಗಗಳ ವಿವಿಧ ನಿಗಮಗಳ ವತಿಯಿಂದ 1.14 ಲಕ್ಷ ಫಲಾನುಭವಿಗಳಿಗೆ 900 ಕೋಟಿ ರೂ.ಗಳನ್ನು ಇಂದು ಬಿಡುಗಡೆ ಮಾಡಿದರು.

ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಮೇಲೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ವಿವಿಧ ಕಟ್ಟಡ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ವಿವಿಧ ಅಭಿವೃದ್ಧಿ ನಿಗಮದ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದ ಅವರು, ಯಾರಿಗೋಸ್ಕರ ಈ ಶಕ್ತಿ ಸೌಧ ಕಟ್ಟಿದ್ದಾರೆ ಅವರು ಸರ್ಕಾರದ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಅದರ ಲಾಭವನ್ನು ಪಡೆಯುವ ವ್ಯವಸ್ಥೆ ನಿಜವಾದ ಪ್ರಜಾಪ್ರಭುತ್ವದ ವ್ಯವಸ್ಥೆ ಎಂದರು.

ಹಿಂದುಳಿದವರ ಬದುಕು ಹಸನಾದಾಗ ಮಾತ್ರವೇ ಪ್ರಜಾಪ್ರಭುತ್ವ ಗೆಲುವು ಸಾಧಿಸುತ್ತದೆ. ಸರ್ಕಾರ ಜನರಿಂದ ಸ್ಥಾಪಿತವಾಗಿದ್ದು, ಇದರ ಅರಿವನ್ನಿಟ್ಟುಕೊಂಡು ಈ ಸೌಧದಲ್ಲಿ ಕೆಲಸ ಮಾಡಬೇಕು. ನ್ಯಾಯ ಕೊಡುವ ಭ್ರಮೆ ಹುಟ್ಟಿಸುವುದರಿಂದ ಬದುಕು ಬಂಗಾರವಾಗಲ್ಲ. ವಸ್ತುನಿಷ್ಠವಾಗಿ ಬದುಕಿನಲ್ಲಿ ಸ್ವಾಭಿಮಾನ ಬದುಕನ್ನ ಬದಕಲು ಸಾಧ್ಯವೆಂದು ಮನಗಂಡು ಸರ್ಕಾರ ಕಾರ್ಯಕ್ರಮ ರೂಪಿಸಿದಾಗ ಮಾತ್ರ ಬದಲಾವಣೆ ಸಾಧ್ಯ ಎಂದರು.

ಜನರಿಗೆ ಗಂಗಕಲ್ಯಾಣ, 50 ಕನಕದಾಸ ಹಾಸ್ಟೆಲ್, ಸ್ವಯಂ ಉದ್ಯೋಗ, ಹೊಲಿಗೆ ತರಬೇತಿ ನೀಡಲಾಗುತ್ತಿದೆ. ವಿದ್ಯಾಸಿರಿ ಯೋಜನೆ ಹಾಗೂ ಹಾಸ್ಟೆಲ್ ಮೂಲಕ ಸುಮಾರು ಒಂದು ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಹಿಂದುಳಿದ ವರ್ಗದ ಮಕ್ಕಳು ವಿದ್ಯಾವಂತರಾಗಿ ಎಲ್ಲರಂತೆ ಅವರೂ ಮುಂದೆ ಬರಬೇಕು. ಹಳ್ಳಿಗಳಲ್ಲಿ ಹಿಂದುಳಿದ ವರ್ಗದವರಿಗೆ ಕಾಯಕ ಕಾರ್ಯಕ್ರಮದ ಮೂಲಕ 50 ಸಾವಿರದವರೆಗೂ ನೀಡಲಾಗುತ್ತಿದೆ. ಅವಶ್ಯಕತೆಗೆ ಅನುಸಾರವಾಗಿ 33 ಸಾವಿರ ಮಕ್ಕಳಿಗೆ ವಿದ್ಯಾರ್ಥಿನಿಲಯದ ಸೌಕರ್ಯವನ್ನು ಕಲ್ಪಿಸಲಾಗಿದೆ. ಈ ವರ್ಷ ಹೆಚ್ಚುವರಿಯಾಗಿ ಒಂದು ಲಕ್ಷ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ ಎಂದರು.

ಗಂಗಾ ಕಲ್ಯಾಣ ಯೋಜನೆಯಡಿ 19 ಸಾವಿರ ಫಲಾನುಭವಿಗಳಿಗೆ ಬೇರೆ ಬೇರೆ ನಿಗಮಗಳ ವತಿಯಿಂದ ಕೊಳವೆಬಾವಿ ಮಂಜೂರು, ಮೊದಲ ಕಂತಿನಲ್ಲಿ 75 ಸಾವಿರ ಹಣವನ್ನ ನೇರವಾಗಿ ಖಾತೆಗಳಿಗೆ ವರ್ಗಾವಣೆ, ಗಂಗಾ ಕಲ್ಯಾಣ ಯೋಜನೆಯಡಿ 19 ಸಾವಿರ ಫಲಾನುಭವಿಗಳಿಗೆ ಅನುದಾನ, ಹದಗೆಟ್ಟಿದ್ದ ವ್ಯವಸ್ಥೆಯನ್ನು ಸರಿಪಡಿಸಿದ್ದೇವೆ ಜೊತೆಗೆ ಕೇವಲ ಐದು ತಿಂಗಳಲ್ಲೇ ಗಂಗಾ ಕಲ್ಯಾಣ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದ್ದೇವೆ ಎಂದರು.

ಇದನ್ನೂ ಓದಿ : ಪ್ರತ್ಯೇಕ ಹಾಲು ಒಕ್ಕೂಟ ಬೇಡಿಕೆ ಈಡೇರಿಕೆ: ನೂತನ ಯುಎಚ್‌ಟಿ ಹಾಲು ಸಂಸ್ಕರಣಾ ಘಟನೆ ಲೋಕಾರ್ಪಣೆ

ರೈತ ಕಾರ್ಮಿಕರಿಗೆ ವಿದ್ಯಾ ನಿಧಿ ವಿಸ್ತರಣೆ, ಸಫಾಯಿ ಕರ್ಮಚಾರಿಗಳಿಗೆ 11, 141 ಜನರೊಳಗೆ ಖಾಯಂ ಗೊಳಿಸಿ ಒಟ್ಟು 24 ಸಾವಿರ ಪೌರ ಕಾರ್ಮಿಕರನ್ನು ಖಾಯಂ ಮಾಡಲಾಗಿದ್ದು, ಸ್ಮಶಾನ ಕಾರ್ಮಿಕರ ಜೀವನಕ್ಕೆ ಭದ್ರತೆ, ಕುರಿಗಾಹಿಗಳಿಗೆ 350 ಕೋಟಿ ವೆಚ್ಚದಲ್ಲಿ ಸಹಾಯ, ಲಮಾಣಿ ಜನಾಂಗಕ್ಕೆ ಹಕ್ಕು ಪತ್ರ ನೀಡಿದೆ. ಕುರುಬರಹಟ್ಟಿ ಗೊಲ್ಲರ ಹಟ್ಟಿ ಲಮಾಣಿ ಸಮುದಾಯಕ್ಕೆ ಇನ್ನೂ ಒಂದು ವಾರದೊಳಗೆ 1.ಲಕ್ಷ ಜನರಿಗೆ ಹಕ್ಕು ಪತ್ರ ನೀಡಲಾಗುವುದು. ಹೊಲದಲ್ಲಿ ಕೆಲಸ ಮಾಡುವ ಮಹಿಳೆಯರಿಗೆ 1 ಸಾವಿರ ರೂಪಾಯಿ ಕೊಡುತ್ತೇವೆ ಎಂದರು. ವಿದ್ಯಾರ್ಥಿನಿಯರಿಗೆ ಉಚಿತ ಪಾಸ್ ನೀಡುವ ಕಾರ್ಯಕ್ರಮ ಈಗಾಗಲೇ ಜಾರಿಯಾಗಿದ್ದು, ಬಜೆಟ್ ನಂತರ 850 ಕೋಟಿ ರೂಪಾಯಿಯನ್ನು ಎಲ್ಲಾ ನಿಗಮಗಳಿಗೆ ನೀಡಲಾಗಿದೆ ಎಂದರು.

Release of subsidy: Good news for backward classes: CM Bommai released subsidy for 1.41 lakh beneficiaries.

Comments are closed.