Republic day 2023 perade: ಕೊನೆಗೂ ಸಿಕ್ತು ಅವಕಾಶ: ಕರ್ತವ್ಯ ಪಥದಲ್ಲಿ ಕರ್ನಾಟಕದ ಸ್ತಬ್ಧ ಚಿತ್ರ

ನವದೆಹಲಿ: (Republic day 2023 perade3) ಗಣರಾಜ್ಯೋತ್ಸವದ ಪರೇಡ್‌ ನಲ್ಲಿ ನರಾಜ್ಯದ ಸ್ತಬ್ದ ಚಿತ್ರಕ್ಕೆ ಈ ಹಿಂದೆ ಅವಕಾಶ ಕೈ ಬಿಡಲಾಗಿತ್ತು. ಕೊನೆಗೂ ಕರ್ನಾಟಕದ ಸ್ತಬ್ದ ಚಿತ್ರಕ್ಕೆ ಅವಕಾಶ ದೊರೆತಿದ್ದು, ಈ ಹಿಂದೆ ಅವಕಾಶ ನಿರಾಕರಿಸಿದ್ದಕ್ಕೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಇದೀಗ ಕೊನೆ ಕ್ಷಣದಲ್ಲಿ ಕರ್ನಾಟಕದ ನಾರಿಶಕ್ತಿ ಸ್ತಬ್ದ ಚಿತ್ರವನ್ನು ಗಣರಾಜ್ಯೋತ್ಸವ(Republic day 2023 perade)ದ ಪರೇಡ್ ನಲ್ಲಿ ಭಾಗವಹಿಸಲು ಸೇರ್ಪಡೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಈ ಹಿನ್ನಲೆಯಲ್ಲಿ ಗಣರಾಜ್ಯೋತ್ಸವದಲ್ಲಿ ಸತತ ಹದಿನಾಲ್ಕನೇ ಬಾರಿ ಕರ್ತವ್ಯ ಪಥದಲ್ಲಿ ಕರ್ನಾಟಕ ಸ್ತಬ್ದ ಚಿತ್ರ ಸಾಗಲಿದೆ.

ಕಳೆದ ಹದಿಮೂರು ವರ್ಷಗಳಿಂದ ನಿರಂತರವಾಗಿ ದೆಹಲಿಯಲ್ಲಿ ಗಣರಾಜ್ಯೋತ್ಸವದಂದು ನಡೆಯುವ ಸ್ತಬ್ದ ಚಿತ್ರ ಪರೇಡ್‌ ನಲ್ಲಿ ಕರ್ನಾಟಕ ಪ್ರತಿನಿಧಿಸುತ್ತಾ ಬಂದಿದೆ. ಆದರೆ ಈ ಬಾರಿ ಬೇರೆ ರಾಜ್ಯಗಳಿಗೆ ಅವಕಾಶ ಕಲ್ಪಿಸುವ ಸಲುವಾಗಿ ಮೊದಲು ಕರ್ನಾಟಕದ ಸ್ತಬ್ದ ಚಿತ್ರ(Republic day 2023 perade)ಕ್ಕೆ ಅನುಮತಿ ನೀಡಿರಲಿಲ್ಲ. ಕಳೆದ ಬಾರಿ ರಾಜ್ಯದ ಸ್ತಬ್ದ ಚಿತ್ರ ದ್ವಿತೀಯ ಬಹುಮಾನವನ್ನು ಪಡೆದುಕೊಂಡಿತ್ತು. ಈ ಬಾರಿ ಮಹಿಳಾ ಸಬಲೀಕರಣದ ವಿಷಯವನ್ನು ಮುಂದಿಟ್ಟುಕೊಂಡು ಕರ್ನಾಟಕ ಸ್ತಬ್ದ ಚಿತ್ರ ಪ್ರದರ್ಶನಕ್ಕೆ ಸಿದ್ದತೆ ನಡೆಸಿಕೊಂಡಿತ್ತು. ಆದರೆ ಕೇಂದ್ರ ಸರಕಾರ ಕರ್ನಾಟಕದ ಸ್ತಬ್ದ ಚಿತ್ರಕ್ಕೆ ಅನುಮತಿಯನ್ನು ನಿರಾಕರಿಸಿತ್ತು. ಇದರಿಂದಾಗಿ ರಾಜ್ಯಾದ್ಯಂತ ತೀವ್ರ ಆಕ್ರೋಶ ಕೂಡ ವ್ಯಕ್ತವಾಗಿತ್ತು.

ಇದನ್ನೂ ಓದಿ : Panipat Cylinder Blast‌ : ಗ್ಯಾಸ್ ಸಿಲಿಂಡರ್ ಸ್ಫೋಟ ಮನೆಗೆ ಬೆಂಕಿ : ಒಂದೇ ಕುಟುಂಬದ 6 ಮಂದಿ ಸಾವು

ಇದನ್ನೂ ಓದಿ : Aravanam prasada: ಶಬರಿಮಲೆಯಲ್ಲಿ ಅರವಣ ಪ್ರಸಾದಕ್ಕೆ ತಡೆಯಾಜ್ಞೆ ನೀಡಿದ ಹೈಕೋರ್ಟ್‌

ಇದನ್ನೂ ಓದಿ : ವಿಶ್ವದ ಅತ್ಯಂತ ಶಕ್ತಿಶಾಲಿ ಪಾಸ್ ಪೋರ್ಟ್ ಪಟ್ಟಿ 2023 : ಭಾರತಕ್ಕೆ ಎಷ್ಟನೇ ಸ್ಥಾನ ?

ಜೊತೆಗೆ ಕೇರಳ, ತಮಿಳುನಾಡು ಸೇರಿದಂತೆ ದೇಶದ ಹದಿಮೂರು ರಾಜ್ಯಗಳನ್ನು ಗಣರಾಜ್ಯೋತ್ಸವ ಪರೇಡ್‌ನ ಸ್ತಬ್ದ ಚಿತ್ರ ಪ್ರದರ್ಶನಕ್ಕೆ ಆಯ್ಕೆ ಮಾಡಲಾಗಿತ್ತು. ಕರ್ನಾಟಕ ಜಿಲ್ಲೆಯು ಮಹಿಳಾ ಸಬಲೀಕರಣವನ್ನು ಸಾರುವ ನಿಟ್ಟಿನಲ್ಲಿ ಒಟ್ಟು ನಾಲ್ಕು ವಿಷಯಗಳನ್ನು ಕೇಂದ್ರಕ್ಕೆ ಕಳುಹಿಸಿಕೊಟ್ಟಿತ್ತು. ಕರ್ನಾಟಕದ ಸ್ತಬ್ದ ಚಿತ್ರ ಕಲ್ಪನೆಗೆ ಮೆಚ್ಚುಗೆಯೂ ಕೂಡ ವ್ಯಕ್ತವಾಗಿತ್ತು. ಆದರೆ ಕೊನೆಯ ಹಂತದಲ್ಲಿ ಕರ್ನಾಟಕ ಸ್ತಬ್ದ ಚಿತ್ರಕ್ಕೆ ಅವಕಾಶ ನಿರಾಕರಿಸಲಾಗಿತ್ತು. ಆದರೆ ಇದೀಗ ಮತ್ತೆ ಗಣರಾಜ್ಯೋತ್ಸವದ ಪೆರೇಡ್‌ ನಲ್ಲಿ ಕರ್ನಾಟಕದ ಸ್ತಬ್ದ ಚಿತ್ರ ಪ್ರದರ್ಶನಕ್ಕೆ ಕೇಂದ್ರ ಸರಕಾರ ಅನುಮತಿ ನೀಡಿದ್ದು, ಸತತ ಹದಿನಾಲ್ಕನೇ ಬಾರಿ ಕರ್ತವ್ಯ ಪಥದಲ್ಲಿ ಕರ್ನಾಟಕದ ಸ್ತಬ್ದ ಚಿತ್ರ ಸಾಗಲಿದೆ.

Republic day 2023: Finally got a chance: A quiet film of Karnataka on duty

Comments are closed.