Reservation Ordinance : ಎಸ್ ಸಿ, ಎಸ್ ಟಿ ಸಮುದಾಯಕ್ಕೆ ದೀಪಾವಳಿ ಗಿಫ್ಟ್: ಮೀಸಲಾತಿ ಸುಗ್ರೀವಾಜ್ಞೆ ಗೆ ರಾಜ್ಯಪಾಲರ ಅಂಕಿತ

ಬೆಂಗಳೂರು : ( Reservation Ordinance) ದೀಪಾವಳಿ ಹೊತ್ತಿನಲ್ಲಿ ಮೀಸಲಾತಿ ಹೆಚ್ಚಳಕ್ಕೆ ಬೇಡಿಕೆ ಇಟ್ಟಿದ್ದ ಎಸ್ ಸಿ ಎಸ್ ಟಿ ಸಮುದಾಯಕ್ಕೆ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಭರ್ಜರಿ ಗಿಫ್ಟ್ ನೀಡಿದೆ. ಮೀಸಲಾತಿ ಹೆಚ್ಚಳಕ್ಕೆ ಸರ್ಕಾರ ಸುಗ್ರೀವಾಜ್ಞೆ(Reservation Ordinance) ಹೊರಡಿಸಿದ್ದು, ಇದಕ್ಕೆ ರಾಜ್ಯಪಾಲರ ಅಂಕಿತವೂ ಬಿದ್ದಿದ್ದು ಎಸ್ ಸಿ ಹಾಗೂ ಎಸ್ ಟಿ ಸಮುದಾಯ ಸಂಭ್ರಮದಲ್ಲಿದೆ.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಸಮುದಾಯಕ್ಕೆ ಮೀಸಲಾತಿ ಪ್ರಮಾಣ(Reservation Ordinance)ವನ್ನು ಹೆಚ್ಚಿಸಬೇಕೆಂಬ ಬೇಡಿಕೆ ಹಲವು ವರ್ಷಗಳಿಂದ ಕೇಳಿಬಂದಿತ್ತು. 2011 ರ ಜನಗಣತಿ ಅನುಗುಣವಾಗಿ ಮೀಸಲಾತಿ ಹೆಚ್ಚಿಸಬೇಕೆಂದು ಆಗ್ರಹಿಸಲಾಗಿತ್ತು. ಇದಕ್ಕೆ ಪೂರಕವಾಗಿ ಹರಿಹರದ ವಾಲ್ಮೀಕಿ ಪೀಠದ ಪ್ರಸನ್ನಾನಂದ ಸ್ವಾಮೀಜಿ ಕಳೆದ 250ಕ್ಕೂ ಹೆಚ್ಚು ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಧರಣಿ ನಡೆಸಿದ್ದಾರೆ. ಸ್ವಾಮೀಜಿ ಪ್ರತಿಭಟನೆ ಹಾಗೂ ಸಮುದಾಯದ ಹೋರಾಟಕ್ಕೆ ಬೆಚ್ಚಿದ ಸರ್ಕಾರ ಕೊನೆಗೂ ಎಸ್ ಸಿ ಸಮುದಾಯದ ಮೀಸಲಾತಿಯನ್ನು ಶೇಕಡಾ 15 ರಿಂದ ಶೇ 17 ಕ್ಕೆ ಹಾಗೂ ಎಸ್ ಟಿ ಮೀಸಲಾತಿ ಶೇ.3 ರಿಂದ ಶೇಕಡಾ 7 ಹೆಚ್ಚಿಸಲು ಸರ್ಕಾರ ಒಪ್ಪಿಗೆ ಸೂಚಿಸಿತ್ತು. ಈಗ ದೀಪಾವಳಿ ಹೊತ್ತಿನಲ್ಲಿ ಸರ್ಕಾರ ಅಧಿಕೃತವಾಗಿ ಸುಗ್ರೀವಾಜ್ಞೆ ಹೊರಡಿಸಿದೆ.

ಇದನ್ನೂ ಓದಿ : Anushka Sharma Virat Kohli : ಪಾಕ್ ವಿರುದ್ದ ಗೆಲುವು ತಂದುಕೊಟ್ಟ ವಿರಾಟ್ ಕೊಹ್ಲಿಗೆ ಪತ್ನಿ ಅನುಷ್ಕಾ ಶರ್ಮಾ ಭಾವುಕ ಮೆಸೇಜ್

ಇದನ್ನೂ ಓದಿ : Modi in Ayodhya: ರಾಮನ ಜನ್ಮಭೂಮಿಯಲ್ಲಿ ದೀಪಗಳದ್ದೇ ಚಿತ್ತಾರ;ಸರಯೂ ನದಿತೀರದಲ್ಲಿ ‘ನಮೋ’ ಪೂಜೆ .!

ಈ ಬಗ್ಗೆ ಮಾಹಿತಿ ನೀಡಿರೋ ಸಿಎಂ, ಕರ್ನಾಕಟದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸಲು ನ್ಯಾಯಮೂರ್ತಿ ನಾಹಮೋಹನದಾಸ ಅವರ ಶಿಫಾರಸ್ಸನ್ನು ಒಪ್ಪಿ ಆಧ್ಯಾದೇಶವನ್ನು ಮಾಡಲು ಸಚಿವ ಸಂಪುಟ ತೀರ್ಮಾನ ತೆಗೆದುಕೊಂಡಿರುವುದು ಗೊತ್ತಿದೆ. ಇದಕ್ಕೆ ಇಂದು ರಾಜ್ಯಪಾಲರು ಒಪ್ಪಿಗೆ ಸೂಚಿಸಿರುವುದು ಸಂತಸದ ಸಂಗತಿ. ಈ ಕುರಿತು ಇಂದು ಅಧಿಕೃತವಾದ ವಿಶೇಷ ರಾಜ್ಯಪತ್ರವನ್ನು ಪ್ರಕಟಿಸಲಾಗಿದೆ. ಇದರಿಂದ ಇನ್ನು ಮುಂದೆ ಅನುಸೂಚಿತ ಜಾತಿಯ ಮೀಸಲಾತಿ ಪ್ರಮಾಣ 15 ರಿಂದ 17 ಕ್ಕೆ ಏರಲಿದ್ದು, ಅನುಸೂಚಿತ ಪಂಗಡಗಳ ಮೀಸಲಾತಿ ಪ್ರಮಾಣ ಶೇ 3 ರಿಂದ 7 ಕ್ಕೆ ಏರಿಸಲಾಗಿದೆ.

ಇದನ್ನೂ ಓದಿ : UP Shocker: ಕಂಬಕ್ಕೆ ಕಟ್ಟಿ ಥಳಿಸಿದ್ರು, ನೀರು ಕೇಳಿದರೆ ಬಾಯಿಗೆ ಕಾರದ ಪುಡಿ ತುಂಬಿದ್ರು : 10 ವರ್ಷದ ಬಾಲಕನ ಮೇಲೆ ಕ್ರೌರ್ಯ ಮೆರೆದ ದುಷ್ಕರ್ಮಿಗಳು

ನಮ್ಮ ಸರ್ಕಾರವು ಮೀಸಲಾತಿ ಪ್ರಮಾಣ ಹೆಚ್ಚಿಸಿ ಬದ್ದತೆಯಿದ ನಡೆದುಕೊಂಡಿದೆ. ಈ ಮೂಲಕ ಅನುಸೂಚಿತ ಜಾತಿ ಮತ್ತು ಪಂಗಡಗಳ ಜನಾಂಗಕ್ಕೆ ನಮ್ಮ ಸರ್ಕಾರ ದೀಪಾವಳಿ ಕೊಡುಗೆ ಕೊಟ್ಟಿದೆ.ರಾಜ್ಯ ಸರ್ಕಾರದ ಸುಗ್ರೀವಾಜ್ಞೆಗೆ ಅಂಕಿತ ಹಾಕಿರುವ ಘನವೆತ್ತ ರಾಜ್ಯಪಾಲರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ಈ ಆಧ್ಯಾದೇಶಕ್ಕೆ ವಿಧಾನ ಮಂಡಲದ ಎರಡೂ ಸದನದಲ್ಲಿ ಮಂಡಿಸಿ ಒಪ್ಪಿಗೆ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಳಿಸಿದ್ದಾರೆ.

(Reservation Ordinance) The BJP government led by Basavaraj Bommai has given a huge gift to the SCST community who had demanded an increase in reservation during Diwali. The SC and ST community is celebrating the fact that the government has issued a reservation ordinance for the increase in reservation, and the Governor’s signature has also been given to it.

Comments are closed.