ಚಾಮರಾಜನಗರ : ಗಣಿಗಾರಿಕೆ ನಡೆಯುತ್ತಿದ್ದ ವೇಳೆಯಲ್ಲಿ ಬಂಡೆ ಕುಸಿದು (Rock fall) ಇಬ್ಬರು ಕಾರ್ಮಿಕರು ಸಾವನ್ನಪ್ಪಿ, ಆರಕ್ಕೂ ಅಧಿಕ ಮಂದಿ ಮಣ್ಣಿನಡಿಯಲ್ಲಿ ಸಿಲುಕಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಬಳಿಯಲ್ಲಿರುವ ಗುಮ್ಮಕಲ್ಲು ಗುಡ್ಡದಲ್ಲಿ ನಡೆದಿದೆ.
ಗುಮ್ಮಕಲ್ಲು ಗುಡ್ಡದಲ್ಲಿ ಸುಮಾರು 60 ಅಡಿ ಆಳದಲ್ಲಿ ಕಲ್ಲು ಗಣಿಗಾರಿಕೆ ನಡೆಯುತ್ತಿತ್ತು. ಈ ವೇಳೆಯಲ್ಲಿ ಏಕಾಏಕಿಯಾಗಿ ಬಂಡೆ ಕುಸಿದು ಟಿಪ್ಪರ್ ಮೇಲೆ ಬಿದ್ದಿದೆ. ಮೃತಪಟ್ಟ ವರನ್ನು ಪಶ್ಚಿಮ ಬಂಗಾಳ ಮೂಲದ ಕಾರ್ಮಿಕರು ಎಂದು ತಿಳಿದು ಬಂದಿದೆ. ನಾಪತ್ತೆಯಾಗಿರುವ ಕಾರ್ಮಿಕರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಸ್ಥಳದಲ್ಲಿ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆಯನ್ನು ಮುಂದುವರಿಸಿದ್ದಾರೆ. ಮಹೇಂದ್ರಪ್ಪ ಎಂಬುವವರ ಜಾಗವನ್ನು ಗುತ್ತಿಗೆಗೆ ಪಡೆದು ಹಕೀಮ್ ಎಂಬವರು ಒಂದು ಎಕರೆ ಜಾಗದಲ್ಲಿ ಗಣಿಗಾರಿಕೆಯನ್ನು ನಡೆಸುತ್ತಿದ್ದರು.
ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳೀಯರ ಸಹಕಾರೊಂದಿಗೆ ಕಾರ್ಯಾಚರಣೆ ಯನ್ನು ನಡೆಸುತ್ತಿದ್ದಾರೆ. ಗಣಿಗಾರಿಕೆಯಲ್ಲಿ ಒಟ್ಟು ಎಷ್ಟು ಮಂದಿ ಕಾರ್ಯನಿರ್ವಹಿಸುತ್ತಿದ್ದಾರೆ ಅನ್ನೋ ಮಾಹಿತಿ ಇನ್ನೂ ದೃಢಪಟ್ಟಿಲ್ಲ.
ಇದನ್ನೂ ಓದಿ : ukraine crisis : ಉಕ್ರೇನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಗುಂಡೇಟು : ವಿಕೆ ಸಿಂಗ್ ಮಾಹಿತಿ
ಇದನ್ನೂ ಓದಿ : ಬ್ರಹ್ಮಾವರದ ದೇವಸ್ಥಾನದಲ್ಲಿ ಕಳವಿಗೆ ಯತ್ನ, ಕಳ್ಳರು ಪರಾರಿ
(Rock fall on tipper in Chamarajanagar 2 workers dead, 6 more persons missing)