ಬೆಂಗಳೂರು : ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ಬೆನ್ನಲ್ಲೇ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ವರ್ಗಾವಣೆ ತಡೆಹಿಡಿಯುವಂತೆ ಮನವಿ ಮಾಡಿದ್ದಾರೆ.
ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ನಡುವಿನ ಸಂಘರ್ಷಕ್ಕೆ ಇಬ್ಬರು ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿತ್ತು. ಇದರ ಬೆನ್ನಲ್ಲೇ ಇದೀಗ ರೋಹಿಣಿ ಸಿಂಧೂರಿ ಅವರು ಸಿಎಂ ಭೇಟಿ ಮಾಡಿರುವ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವ ರೋಹಿಣಿ ಸಿಂಧೂರಿ ಅವರು ಸುಮಾರು ಅರ್ಧ ಗಂಟೆಗೂ ಅಧಿಕ ಕಾಲ ಮಾತುಕತೆ ನಡೆಸಿದ್ದಾರೆ. ಪ್ರಕರಣದಲ್ಲಿ ತಮ್ಮದೇನು ತಪ್ಪಿಲ್ಲ ಹೀಗಾಗಿ ವರ್ಗಾವಣೆಯನ್ನು ತಡೆ ಹಿಡಿಯುವಂತೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಸಿಎಂ ಇದಕ್ಕೆ ಒಪ್ಪಿಗೆ ಸೂಚಿಸಿಲ್ಲ ಎನ್ನಲಾಗುತ್ತಿದೆ.