ಪುತ್ತೂರು : ದ್ವೇಷ ಭಾಷಣದ ಆರೋಪ : ಕಲ್ಲಡ್ಕ ಪ್ರಭಾಕರ್ ಭಟ್​ಗೆ ನಿರೀಕ್ಷಣಾ ಜಾಮೀನು ಮಂಜೂರು

ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ದ್ವೇಷ ಭಾಷಣ ಮಾಡಿರುವ ಆರೋಪ ಎದುರಿಸುತ್ತಿರುವ ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ್​ ಭಟ್​ಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಕಲ್ಲಡ್ಕ ಪ್ರಭಾಕರ್​ ಭಟ್ಟ ವಿರುದ್ಧ ಪ್ರಕರಣ ದಾಖಲಾದ ಸಂದರ್ಭದಲ್ಲಿ ಬಲವಂತದ ಕ್ರಮ ಬೇಡ ಎಂದು ನ್ಯಾಯಾಲಯ ಆದೇಶ ನೀಡಿತ್ತು.ಇದಾದ ಬಳಿಕ ಈ ಪ್ರಕರಣದಲ್ಲಿ ಮದ್ಯಂತರ ಜಾಮೀನನ್ನೂ ನೀಡಲಾಗಿತ್ತು. ಇದೀಗ ಕೆಲ ಷರತ್ತುಗಳನ್ನು ವಿಧಿಸಿ ಪೂರ್ಣ ಪ್ರಮಾಣದ ನಿರೀಕ್ಷಣಾ ಜಾಮೀನನ್ನು ಮಂಜೂರು ಮಾಡಿದೆ.

ಇದನ್ನೂ ಓದಿ: ಬೆಂಗಳೂರಿಗರ ಹೊಸ ವರ್ಷಾಚರಣೆ ಸಂಭ್ರಮದ ಮೇಲೆ ಆ‌ರ್ ಸಿಬಿ ದುರಂತ ಕರಿನೆರಳು : ಎಂಜಿರೋಡ್‌ನಲ್ಲಿ ಸೆಬೇಷನ್‌ಗೆ ಬೀಳುತ್ತಾ ಬ್ರೇಕ್!

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಉಪ್ಪಳಿಗೆ ಎಂಬಲ್ಲಿ ಅಕ್ಟೋಬರ್​ 20ರಂದು ದೀಪೋತ್ಸವ ಕಾರ್ಯಕ್ರಮ ನಡೆದಿತ್ತು.ಈ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಕಲ್ಲಡ್ಕ ಪ್ರಭಾಕರ್ ಭಟ್​, ಆಚೆ ಮನೆಯಲ್ಲಿ ಒಬ್ಬಳು ಬ್ಯಾರ್ದಿ ಇದ್ದಳು. ಅವಳು 6ನೇಯದ್ದು ಆಗಿ 7ನೇ ಮಗುವಿಗೆ ಗರ್ಭಿಣಿಯಾಗಿದ್ದಳು. ಅವಳಿಗೆ ಯಾರಾದ್ರೂ ಕೇಳಿದ್ರಾ ? ನೀನು ನಾಯಿ ಮರಿ ಹಾಕಿದ ಹಾಗೆ ಹಾಕ್ತಾ ಇದೀಯಾ ಎಂದು ? ಅಲ್ಲದೇ ಅವರು ನಮ್ಮ ಮಕ್ಕಳು ಅಲ್ಲಾಹುವಿಗೋಸ್ಕರ ಎಂದು ಹೇಳ್ತಾರೆ. ನೀವೇನಾದರೂ ಮಹಾಲಿಂಗೇಶ್ವರನಿಗಾಗಿ ಮಕ್ಕಳನ್ನು ಮಾಡಿಕೊಳ್ತೀರಾ ? ಎಂದು ಪ್ರಶ್ನೆ ಮಾಡಿದ್ದರು. ಅಲ್ಲದೇ ಉಳ್ಳಾಲ ವಿಧಾನಸಭಾ ಕ್ಷೇತ್ರದಲ್ಲಿ ಎಂದಿಗೂ ಹಿಂದೂಗಳು ಗೆಲ್ಲಲು ಸಾಧ್ಯವೇ ಇಲ್ಲ. ಅಲ್ಲಿ ಯಾವತ್ತಿದ್ದರೂ ಯು.ಟಿ ಖಾದರ್​ ಗೆಲ್ಲೋದು. ಏಕೆಂದರೆ ಅಲ್ಲಿ 1 ಲಕ್ಷದ 10 ಸಾವಿ ಬ್ಯಾರಿಗಳ ಮತವಿದೆ. ಹಿಂದೂಗಳು ಕೇವಲ 90 ಸಾವಿರ ಜನರಿದ್ದಾರೆ. ಇವರು ನಮ್ಮನ್ನು ಸರ್ವನಾಶ ಮಾಡ್ತಾರೆ. ಹೀಗಾಗಿ ನಮ್ಮ ಮನೆಗಳಲ್ಲಿ 3ಕ್ಕಿಂತ ಕಡಿಮೆ ಮಕ್ಕಳು ಇರಬಾರದು ಎಂದು ಕರೆ ನೀಡಿದ್ದರು. ಕಲ್ಲಡ್ಕ ಪ್ರಭಾಕರ್ ಭಟ್​ ಅವರ ಈ ಭಾಷಣದ ವಿರುದ್ಧ ಸಿಪಿಐಎಂ ಮುಖಂಡೆ ಈಶ್ವರಿ ಪದ್ಮುಂಜ ಎಂಬವರು ಪುತ್ತೂರು ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದರು.

ರಶ್ಮಿ ಎಸ್. | Rashmi S.

ರಶ್ಮಿ ಎಸ್. ನ್ಯೂಸ್‌ ನೆಕ್ಸ್ಟ್‌ ಕನ್ನಡ ( News Next Kannada) ದಲ್ಲಿ ಕಂಟೆಂಟ್‌ ರೈಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದು, ಹತ್ತು ವರ್ಷಗಳ ಕಾಲ ಕನ್ನಡ ಸುದ್ದಿ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ. ರಾಜಕೀಯ, ಕ್ರೀಡೆ, ವಾಣಿಜ್ಯ, ಸಿನಿಮಾ, ಸ್ಥಳೀಯ ಸುದ್ದಿಗಳನ್ನು ಪ್ರಕಟಿಸುತ್ತಿದ್ದಾರೆ. More »

Related Stories