ಬೆಂಗಳೂರು : ಕೊರೊನಾ ಸಂಕಷ್ಟದ ನಡುವಲ್ಲೇ ಗ್ರಾಮೀಣ ಭಾಗದ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಎದುರಾಗಿತ್ತು. ಆದರೀಗ ರಾಜ್ಯ ಸರಕಾರ ವೈದ್ಯರನ್ನು ನೇಮಕ ಮಾಡುವ ಮೂಲಕ ಆಸ್ಪತ್ರೆಗಳಿಗೆ ವೈದ್ಯರ ಭಾಗ್ಯ ಕರುಣಿಸಿದೆ.
ರಾಜ್ಯ ಸರಕಾರ ಆರೋಗ್ಯ ಕ್ಷೇತ್ರದ ಸುಧಾರಣೆಗಾಗಿ ಒಟ್ಟು 1,763 ವೈದ್ಯರು ಹಾಗೂ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಗಳನ್ನು ನೇಮಕ ಮಾಡಿದೆ. 715 ತಜ್ಞರು, 75 ಜನರಲ್ ಮೆಡಿಸಿನ್, 57 ಜನರಲ್ ಸರ್ಜನ್, 145 ಗೈನಕಾಲಜಿಸ್ಟ್, 40 ಇಎನ್ ಟಿ, 35 ಚರ್ಮರೋಗ ತಜ್ಞರು, 142 ಅರವಳಿಕೆ ತಜ್ಞರು, 153 ಮಕ್ಕಳ ತಜ್ಞರು, 17 ರೇಡಿಯಾ ಲಜಿಸ್ಟ್ ಹಾಗೂ 1,048 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಗಳನ್ನು ನೇಮಕ ಮಾಡಲಾಗಿದೆ.
ಪ್ರಮುಖವಾಗಿ ಮೈಸೂರು, ಚಾಮರಾಜನಗರ, ಗದಗ, ಬೆಳಗಾವಿ, ಹುಬ್ಬಳ್ಳಿ,, ಗದಗ, ರಾಯಚೂರು ಸೇರಿದಂತೆ ವೈದ್ಯರ ಕೊರತೆ ಎದುರಿಸುತ್ತಿರುವ ಗ್ರಾಮೀಣ ಭಾಗದ ಸರಕಾರಿ ಆಸ್ಪತ್ರೆಗಳಿಗೆ ನೇಮಕ ಮಾಡಲಾಗಿದೆ. ಇದರಿಂದಾಗಿ ಗ್ರಾಮೀಣ ಭಾಗದ ಜನರಿಗೆ ಹೆಚ್ಚಿನ ಆರೋಗ್ಯ ಸೇವೆ ಒದಗಿಸಲು ಸಹಕಾರಿಯಾಗಲಿದೆ.