SC ST Reservation: ಎಸ್ ಸಿ, ಎಸ್ ಟಿ ಸಮುದಾಯಕ್ಕೆ ಭರ್ಜರಿ ಗಿಫ್ಟ್ , ಬಿಜೆಪಿ ಮೀಸಲಾತಿ ಬ್ರಹ್ಮಾಸ್ತ್ರ

ಬೆಂಗಳೂರು : SC ST Reservation ರಾಜ್ಯದಲ್ಲಿ ಎಸ್ ಸಿ ಪರಿಶಿಷ್ಟ ಜಾತಿ ಮತ್ತು ಎಸ್ ಟಿ ಪರಿಶಿಷ್ಟ ಪಂಗಡಗಳಿಗೆ ಬಿಜೆಪಿ ಸರ್ಕಾರ ದೀಪಾವಳಿ ಹಬ್ಬದ ಮೊದಲೇ ಭರ್ಜರಿ ಗಿಫ್ಟ್ ನೀಡಿದೆ. ಅಂದ್ರೆ SC, ST ಸಮುದಾಯಗಳ ಮೀಸಲಾತಿ ಹೆಚ್ಚಳಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಶುಕ್ರವಾರ ನಡೆದ ಸರ್ವ ಪಕ್ಷ ಸಭೆಯಲ್ಲಿ ಒಮ್ಮತದ ನಿರ್ಣಯ ಕೈಗೊಳ್ಳಲಾಗಿದೆ.

ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಗಳ ಮೀಸಲಾತಿಯನ್ನ ಹೆಚ್ಚಿಸಬೇಕೆಂದು ಹಲವು ವರ್ಷಗಳಿಂದ ಬೇಡಿಕೆ ಇತ್ತು. ಅದ್ರಲ್ಲೂ ಎಸ್ ಟಿ ಸಮುದಾಯದ ವಾಲ್ಮೀಕಿ ಪೀಠದ ಜಗದ್ಗುರು ಪ್ರಸನ್ನನಾಂದಪುರಿ ಶ್ರೀಗಳು 240 ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮೀಸಲಾತಿ ಹೆಚ್ಚಳ ಸಂಬಂಧ ಧರಣಿ ನಡೆಸಿದ್ರು. ದಲಿತ ಸಮುದಾಯದ ಹೋರಾಟಕ್ಕೆ ಮಣಿದಿರುವ ಸರ್ಕಾರ ಶುಕ್ರವಾರ ಮೀಸಲಾತಿ ಹೆಚ್ಚಳ ಸಂಬಂಧ ಸರ್ವ ಪಕ್ಷ ಸಭೆ ನಡೆಸಿತು. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಜೆಡಿಎಲ್ ಪಿ ನಾಯಕ ಹೆಚ್.ಡಿ.ಕುಮಾರಸ್ವಾಮಿ,ಅಡ್ವೊಕೇಟ್ ಜನರಲ್ ಪ್ರಭುಲಿಂಗ್ ನಾವಡಗಿ, ಸಚಿವರಾದ ಆರ್.ಅಶೋಕ್, ಶ್ರೀರಾಮುಲು, ಮಾಧುಸ್ವಾಮಿ ಕೋಟಾ ಶ್ರೀನಿವಾಸ ಪೂಜಾರಿ, ಎಸ್ ಅಂಗಾರ ಸೇರಿದಂತೆ ಹಲವರು ಉಪಸ್ಥಿತರಿದ್ರು.

ಸಭೆಯ ನಿರ್ಣಯ : ಶುಕ್ರವಾರ ನಡೆದ ಸಭೆಯಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಸಮುದಾಯದ ಬಹುದಿನದ ಬೇಡಿಕೆಯಾಗಿದ್ದ ಜಸ್ಟಿಸ್ ನಾಗಮೋಹನ್ ದಾಸ್ ಸಮಿತಿಯ ವರದಿ ಅನುಷ್ಠಾನಕ್ಕೆ ನಿರ್ಧರಿಸಲಾಗಿದೆ. ಪರಿಶಿಷ್ಟ ಜಾತಿ ಮೀಸಲಾತಿಯನ್ನು ಶೇ.15 ರಿಂದ ಶೇ. 17ಕ್ಕೆ ಹಾಗೂ ಪರಿಶಿಷ್ಟ ಪಂಗಡ ಮೀಸಲಾತಿಯನ್ನು ಶೇ. 3 ರಿಂದ ಶೇ.7 ಕ್ಕೆ ಏರಿಸಲು ನಿರ್ಣಯಿಸಲಾಗಿದೆ. ಅಲ್ದೆ ಇಂದು ಸಚಿವ ಸಂಪುಟ ಸಭೆ ನಡೆಸಿ ಮೀಸಲಾತಿ ಹೆಚ್ಚಳ ಸಂಬಂಧ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಅಂತಾ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ರು.

ಸಿಎಂ ಬೊಮ್ಮಾಯಿ ಹೇಳಿದ್ದೇನು..? :ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಹೆಚ್ಚಳ ಸಂಬಂಧಿಸಿದಂತೆ ಸರ್ವ ಪಕ್ಷ ಸಭೆಯಲ್ಲಿ ಕಾನೂನು ಮತ್ತು ಸಂವಿಧಾನಾತ್ಮಕವಾಗಿ ಮೀಸಲಾತಿ ಹೆಚ್ಚಿಸುವ ಕುರಿತು ಸರ್ವಸಮ್ಮತ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದಲ್ಲಿನ ಇತರ ಹಿಂದುಳಿದ ವರ್ಗಗಳ ಮೀಸಲಾತಿ ಸಂಬಂಧಿಸಿದಂತೆ ಈಗಾಗಲೇ ಸಮಿತಿಗಳು ಮತ್ತು ಆಯೋಗಗಳು ಸಮಗ್ರ ಮಾಹಿತಿಯನ್ನು ಕಲೆ ಹಾಕುತ್ತಿದ್ದು, ಆ ಆಯೋಗಗಳು ಅಂತಿಮ ವರದಿ ಸಲ್ಲಿಸಿದ ನಂತರ, ಯಾವ ಸಮುದಾಯಕ್ಕೂ ಅನ್ಯಾಯವಾಗದಂತೆ ಕಾನೂನಾತ್ಮಕವಾಗಿ ಮತ್ತು ಸಂವಿಧಾನಾತ್ಮಕವಾಗಿ ಮೀಸಲಾತಿ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ.

ಚುನಾವಣೆಗೆ ಎಲೆಕ್ಷನ್ ಬ್ರಹ್ಮಾಸ್ತ್ರ : ರಾಜ್ಯ ಸರ್ಕಾರದ ಮೀಸಲಾತಿ ಹೆಚ್ಚಳದ ನಿರ್ಧಾರದ ಹಿಂದೆ ವಿಧಾನಸಭೆ ಚುನಾವಣೆ ಗೆಲುವಿನ ರಣತಂತ್ರವೂ ಅಡಗಿದೆ ಅನ್ನೋ ವಿಶ್ಲೇಷಣೆ ರಾಜ್ಯ ರಾಜಕೀಯದಲ್ಲಿ ಶುರುವಾಗಿದೆ. ಈಗಾಗಲೇ ಕಾಂಗ್ರೆಸ್ ಮಾಡಿರುವ 40 ಪರ್ಸೆಂಟ್ ಕಮಿಷನ್, ಪಿಎಸ್ ಐ ನೇಮಕಾತಿ ಅಕ್ರಮ, ಪೇ ಸಿಎಂ ಕ್ಯಾಂಪೇನ್ ನಿಂದಾಗಿ ಬಿಜೆಪಿ ರಾಷ್ಟ್ರ ಮಟ್ಟದಲ್ಲಿ  ಮುಜುಗರ ಅನುಭವಿಸುವಂತಾಗಿದೆ. ಇದಲ್ಲದೇ ರಾಹುಲ್ ಗಾಂಧಿ ಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರೆ ನಡೆಸುತ್ತಿದ್ದು, ಕಾಂಗ್ರೆಸ್ ವರ್ಚಸ್ಸು ಮತ್ತಷ್ಟು ಹೆಚ್ಚುವಂತೆ ಮಾಡಿದೆ. ಕಾಂಗ್ರೆಸ್ ಆರೋಪಕ್ಕೆ ಪ್ರತ್ಯುತ್ತರ ಕೊಡುವಲ್ಲಿ ವಿಫಲವಾಗಿರೋ ಬಿಜೆಪಿ ಈಗ ರಾಜ್ಯದಲ್ಲಿ ಅತಿ ದೊಡ್ಡ ಸಮುದಾಯಗಳನ್ನ ಹೊಂದಿರೋ SC,ST ಗೆ ಮೀಸಲಾತಿ ಕೋಡುವುದರ ಮೂಲಕ, ಕಾಂಗ್ರೆಸ್ ಗೆ ಮಾಸ್ಟರ್ ಸ್ಟ್ರೋಕ್ ಕೊಡೋದಕ್ಕೆ ಸಜ್ಜಾಗಿದೆ.

ಇದನ್ನೂ ಓದಿ : ರಾಜ್ಯ ಸರಕಾರಿ ನೌಕರರಿಗೆ ಗುಡ್ ನ್ಯೂಸ್ : ‘ತುಟ್ಟಿಭತ್ಯೆ’ ಹೆಚ್ಚಳಕ್ಕೆ ಸಿಎಂ ಬೊಮ್ಮಾಯಿ ಅನುಮೋದನೆ

ಇದನ್ನೂ ಓದಿ : Rashmika Mandanna – Vijay Devarakonda : ಒಂದೇ ವಿಮಾನದಲ್ಲಿ ಒಟ್ಟಿಗೆ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ- ವಿಜಯ ದೇವರಕೊಂಡ

SC ST Reservation Government decided to implement the report of Justice Nagmohan Das Committee SC reservation report

Comments are closed.