School Holiday Red alert : ಮಂಗಳೂರು (Mangalore) ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ನಾಳೆಯೂ ಮಳೆಯ ಆರ್ಭಟ ಹೆಚ್ಚಿರಲಿದ್ದು, ರೆಡ್ ಅಲರ್ಟ್ (Red Alert) ಘೋಷಣೆ ಮಾಡಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇ 31 ರಂದು ಎಲ್ಲಾ ಅಂಗನವಾಡಿ ಕೇಂದ್ರ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ಸೇರಿದಂತೆ ಸರಕಾರಿ, ಅನುದಾನಿತ, ಖಾಸಗಿ ವಿದ್ಯಾ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಳ್ಳೈ ಮುಗಿಲನ್ ಅವರು ಆದೇಶ ಹೊರಡಿಸಿದ್ದಾರೆ.
ಕಳೆದ ಹತ್ತು ದಿನಗಳಿಂದಲೂ ಕರಾವಳಿ ಭಾಗಗಳಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯ ಆರ್ಭಟ ಜೋರಾಗಿದೆ. ಮೇ 30 ರಂದು ಭಾರೀ ಮಳೆ ಸುರಿದ ಹಿನ್ನೆಲೆಯಲ್ಲಿ ಸಾಕಷ್ಟು ಹಾನಿ ಉಂಟಾಗಿದ್ದು, ಎರಡು ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. ವಿದ್ಯುತ್ ಶಾಕ್ ತಗುಲಿ ಬೆಳ್ತಂಗಡಿಯಲ್ಲಿ ಮೆಸ್ಕಾಂ ಸಿಬ್ಬಂದಿ ಸಾವನ್ನಪ್ಪಿದ್ದರು. ಮೇ 30 ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿತ್ತು.
ಇದನ್ನೂ ಓದಿ : ಕರ್ನಾಟಕ ಬ್ಯಾಂಕ್ ನೇಮಕಾತಿ 2025: ಪದವಿಧರರಿಗೆ ಉದ್ಯೋಗ, ರೂ. 82920 ವೇತನ
ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶುಕ್ರವಾರ ಭಾರೀ ಮಳೆಯಾಗಿದ್ದು, ತಗ್ಗು ಪ್ರದೇಶಗಳ ಮನೆಗೆ ನೀರು ನುಗ್ಗಿದೆ. ಹಲವು ಕಡೆಗಳಲ್ಲಿ ಮನೆ ಕುಸಿತ, ಭೂಕುಸಿತ ಉಂಟಾಗಿದೆ. ಮೇ 31 ರಂದು ಜಿಲ್ಲೆಯಲ್ಲಿ ಮಳೆ ಮುಂದುವರಿಕೆ ಆಗುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನು ಕೈಗೊಂಡಿದೆ.
ಇದನ್ನೂ ಓದಿ : Ujjwala Yojana : ಉಜ್ವಲ ಯೋಜನೆ : ಕೇವಲ 300 ರೂ.ಗೆ ಸಿಗಲಿದೆ ಎಲ್‌ಪಿಜಿ ಸಿಲಿಂಡರ್
School Holiday in Dakshina Kannada on May 31st Red alert declared for heavy rain Kannada News