Heavy Rain : ಮಂಗಳೂರು : ಕಳೆದ ಮೂರು ದಿನಗಳಿಂದಲೂ ಧಾರಾಕಾರ ಮಳೆ (Heavy Rain) ಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡದಲ್ಲಿ ನಾಳೆಯೂ (ಜೂನ್ 28) ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಲ್ಲದೇ ನಾಳೆಯೂ ಭಾರೀ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದ್ದು, ದಕ್ಷಿಣ ಕನ್ನಡ ಜಿಲ್ಲಾಡಳಿತ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ (Red Alert) ಘೋಷಣೆ ಮಾಡಿದೆ.

ಭಾರೀ ಮಳೆಯ ಹಿನ್ನೆಲೆಯಲ್ಲಿ ಇಂದು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಇದೀಗ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ನಾಳೆ ಜಿಲ್ಲೆಯ ಎಲ್ಲಾ ಅಂಗನವಾಡಿ, ಅನುದಾನಿತ, ಅನುದಾನ ರಹಿತ, ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜು ಗಳಿಗೆ ರಜೆ ಘೊಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಮೀನುಗಾರರು ಯಾವುದೇ ಕಾರಣಕ್ಕೂ ನದಿ ಹಾಗೂ ಸಮುದ್ರಕ್ಕೆ ಇಳಿಯದಂತೆ ಸೂಚಿಸಿದ್ದಾರೆ.
ಇದನ್ನೂ ಓದಿ : Sleeping Tips : ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಿದ್ರೆ ಏನಾಗುತ್ತೆ ? ಯಾವ ದಿಕ್ಕಿಗೆ ಮಲಗೋದು ಸೂಕ್ತ, ಇಲ್ಲಿದೆ ವೈಜ್ಞಾನಿಕ ಕಾರಣ
ಆರಿದ್ರ ಮಳೆ ಕರಾವಳಿಯಲ್ಲಿ ಆರ್ಭಟಿಸುತ್ತಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಸೃಷ್ಟಿಸಿದ ಅವಾಂತರ ಅಷ್ಟಿಷ್ಟಲ್ಲ. ಅದ್ರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಪುತ್ತೂರು, ಕಡಬ, ಬೆಳ್ತಂಗಡಿ, ಬಂಟ್ವಾಳ, ಮೂಡಬಿದಿರೆ, ಮಂಗಳೂರು ತಾಲೂಕು ಸೇರಿದಂತೆ ಜಿಲ್ಲೆಯ ಹಲವು ಕಡೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ನಿರಂತರವಾಗಿ ಎಡಬಿಡದೆ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಜೀವ ನದಿಗಳಾದ ನೇತ್ರಾವತಿ, ಕುಮಾರಧಾರ ನದಿಗಳು ತುಂಬಿ ಹರಿಯುತ್ತಿದ್ದು, ಹಲವು ಪ್ರದೇಶಗಳು ಜಲಾವೃತವಾಗಿದೆ.

ಕುಮಾರಧಾರ ನದಿ ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಪ್ರಮುಖ ಯಾತ್ರಾಸ್ಥಳವಾಗಿರುವ ಕುಕ್ಕೆ ಸುಬ್ರಹ್ಮಣ್ಯದಲ್ಲಿನ ಸ್ನಾನಘಟ್ಟ ಭರ್ತಿಯಾಗಿದೆ. ಅಲ್ಲದೇ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದಲ್ಲಿಯೂ ನೀರಿನ ಪ್ರಮಾಣ ಅತ್ಯಧಿಕವಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲದೇ ಉಡುಪಿ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಉಡುಪಿ ಜಿಲ್ಲೆಯ ಬೈಂದೂರು, ಬ್ರಹ್ಮಾವರ, ಉಡುಪಿ, ಕುಂದಾಪುರ, ಹೆಬ್ರಿ, ಕಾಪು, ಕಾರ್ಕಳ ತಾಲೂಕಿನಾದ್ಯಂತ ಬಾರೀ ಮಳೆಯಾಗಿದೆ.
ಇದನ್ನೂ ಓದಿ : Karnataka New Schools : ಹೊಸ ಶಾಲೆಗಳಿಗೆ ಇನ್ನಿಲ್ಲದ ಬೇಡಿಕೆ: ಅನುಮತಿ ಕೋರಿ ಸಲ್ಲಿಕೆಯಾಗಿದೆ ಸಾವಿರಾರು ಅರ್ಜಿ
School Holiday June 28 in Dakshina Kannada for Heavy Rain Red Alert Declared Mangalore News in Kannada