Schools-colleges closed: ಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ನಾಳೆ ಶಾಲಾ-ಕಾಲೇಜುಗಳು ಬಂದ್‌

ಬೆಂಗಳೂರು: (Schools-colleges closed) ೨೮ ನೇ ವೇತನ ಪರಿಷ್ಕರಣೆಗೆ ಆಗ್ರಹಿಸಿ ಹಾಗೂ ೭ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ನಾಳೆ ಅಂದರೆ ಮಾರ್ಚ್‌ ೧ ರಿಂದ ರಾಜ್ಯ ಸರಕಾರಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದು, ನಾಳೆ ಸರಕಾರಿ ಸಂಬಂಧಿತ ಬಹುತೇಕ ಸೇವೆಗಳು ವ್ಯತ್ಯಯವಾಗಲಿದ್ದು, ಶಾಲಾ ಕಾಲೇಜುಗಳು ಬಂದ್‌ ಆಗಲಿವೆ.

ಈ ಬಾರಿ ಮಂಡಿಸಿದ ಬಜೆಟ್‌ ನಲ್ಲಿ ಸರಕಾರಿ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಜ್ಯ ಸರಕಾರ ಯಾವುದೇ ಪ್ರಸ್ತಾಪ ಮಾಡಿಲ್ಲದ ಕಾರಣ ಮತ್ತು ಹೊಸ ಪಿಂಚಣಿ ನೀತಿ ರದ್ದತಿಗೆ ಆಗ್ರಹಿಸಿ ಸರಕಾರಿ ನೌಕರರು ನಾಳೆಯಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಯಲಿದೆ.ನೌಕರರ ಸಂಘ ಕರೆ ನೀಡಿರುವ ಮುಷ್ಕರಕ್ಕೆ ಗ್ರಾಮ ಪಂಚಾಯತಿ ಸಿಬ್ಭಂದಿ, ನಗರ ಸ್ಥಳೀಯ ಸಂಸ್ಥೆಗಳು, ಬಿಬಿಎಂಪಿ ಕಾಯಂ ಪೌರ ಕಾರ್ಮಿಕರು, ಉಪ ನೋಂದಣಾಧಿಕಾರಿ ಕಚೇರಿ ಸಿಬ್ಬಂದಿಗಳು ಈ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಗ್ರಾಮ ಲೆಕ್ಕಿಗರಿಂದ ಹೆಚ್ಚುವರಿ ಜಿಲ್ಲಾಧಿಕಾರಿಗಳ ವರೆಗೆ ಸಿಬ್ಬಂದಿ ಕರ್ತವ್ಯಕ್ಕೆ ಗೈರು ಹಾಜರಾಗುತ್ತಿದ್ದು ಬಹುತೇಕ ಸೇವೆಗಳಿಗೆ ತೊಂದರೆಯಾಗಲಿದೆ.

ಕರ್ನಾಟಕ ಸಚಿವಾಲಯ ನೌಕರರ ಸಂಘ, ವಿವಿಧ ನಿಗಮ ಮಂಡಳಿಗಳ ನೌಕರರು, ಅರಣ್ಯ ಇಲಾಖೆ ನೌಕರರು ಭಾಗವಹಿಸುತ್ತಿದ್ದು, ಪ್ರಾದೇಶಿಕ ಸಾರಿಗೆ ಇಲಾಖೆಯಲ್ಲಿನ ವಾಹನಗಳ ನೋಂದಣಿ, ಪರವಾನಗಿ ವಿತರಣೆ ಕಾರ್ಯಗಳು ಸಹ ಸ್ಥಗಿತವಾಗಲಿವೆ. ಕಸ ಸಂಗ್ರಹದಲ್ಲಿ ವ್ಯತ್ಯಯ, ಶಾಲಾ-ಕಾಲೇಜುಗಳು ಬಂದ್, ಹೊರ ರೋಗಿಗಳ ಸೇವೆ ಸರ್ಕಾರಿ ಆಸ್ಪತ್ರೆಗಳಲ್ಲಿ ಅಲಭ್ಯ, ಆಸ್ತಿ ನೋಂದಣಿ ಸ್ಥಗಿತ, ತಹಶೀಲ್ದಾರ್ ಕಚೇರಿ ಬಂದ್, ಅಹವಾಲು ಸಲ್ಲಿಕೆ ಸೇವೆಗಳಿಗೆ ವ್ಯತ್ಯಯವುಂಟಾಗಲಿದೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆ, ಒಳರೋಗಿಗಳ ಆರೈಕೆ ಸೇವೆಗಳು ದೊರಕುತ್ತವೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ತಮ್ಮ ಬೇಡಿಕೆ ಈಡೇರಿಸುವಂತೆ ಮುಷ್ಕರ ನಡೆಸಲಿದ್ದಾರೆ. ಬಸ್ ಗಳ ಸಂಚಾರ ಎಂದಿನಂತಿರುತ್ತದೆ. ವಿವಿಗಳಲ್ಲಿ ತರಗತಿಗಳು ಎಂದಿನಂತೆ ನಡೆಯಲಿವೆ.

ಇದನ್ನೂ ಓದಿ : Bidar murder: ಜನನಿಬೀಡ ಪ್ರದೇಶದಲ್ಲಿ ಹಾಡಹಗಲೇ ವ್ಯಕ್ತಿಯನ್ನು ಕಡಿದು ಬರ್ಬರ ಹತ್ಯೆ

ಇದನ್ನೂ ಓದಿ : ಮಧ್ಯಂತರ ವರದಿ ಬಂದ ಕೂಡಲೇ ಸರಕಾರಿ ನೌಕರರಿಗೆ 7ನೇ ವೇತನ ಆಯೋಗ ಜಾರಿ : ಸಿಎಂ ಬಸವರಾಜ ಬೊಮ್ಮಾಯಿ

ನಾಳೆ ರಾಜ್ಯಾದಂತ ಸರಕಾರಿ ಶಾಲಾ ಕಾಲೇಜುಗಳು ಬಂದ್‌ ಆಗಲಿವೆ. ಅನಿರ್ದಿಷ್ಟಾವದಿ ಮುಷ್ಕರಕ್ಕೆ ಶಾಲಾ ಶಿಕ್ಷಕರೂ ಕೂಡ ಕೈಜೋಡಿಸಿದ್ದು, ಶಾಲಾ- ಕಾಲೇಜುಗಳುನ ನಾಳೆ ಬಂದ್‌ ಆಗಲಿವೆ. ಈ ಬಗ್ಗೆ ಶಾಲಾ ರಾಜ್ಯಾಧ್ಯಕ್ಷ ಶಂಭುಗೌಡ ಹೇಳಿಕೆ ನೀಡಿದ್ದು, ಶಾಲಾ ಕಾಲೇಜು ಶಿಕ್ಷಕರು ಕೂಡ ಈ ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದು, ನಾಳೆ ಶಾಲೆಗಳಿಗೆ ಮಕ್ಕಳನ್ನು ಬರಬೇಡಿ ಎಂದಿದ್ದೇವೆ. ಬೇಡಿಕೆ ಈಡೇರದಿದ್ದರೆ ಪರೀಕ್ಷೆ ಕೆಲಸದಲ್ಲಿ ಭಾಗವಹಿಸಲ್ಲ ಎಂದಿದ್ದಾರೆ.

ಇದನ್ನೂ ಓದಿ : ಭಾರತದ ನಂ.1 ಮರೀನಾ ಯೋಜನೆ ಬೈಂದೂರಿನಲ್ಲಿ ಪ್ರಾರಂಭ

Schools-Colleges Closed: Indefinite Strike of Government Employees: Schools-Colleges Closed Tomorrow

Comments are closed.