Udupi School Holiday : ಆರಿದ್ರಾ ಮಳೆಯ ಅಬ್ಬರ : ಜುಲೈ 6ರಂದು ಬ್ರಹ್ಮಾವರ, ಕುಂದಾಪುರ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

Udupi Heavy Rainfall : ಉಡುಪಿ : ಕಳೆದ ಕೆಲವು ದಿನಗಳಿಂದಲೂ ಕರಾವಳಿ ಭಾಗದಲ್ಲಿ ಆರಿದ್ರಾ ಮಳೆ ಅಬ್ಬರಿಸುತ್ತಿದೆ. ಅದರಲ್ಲೂ ಉಡುಪಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಮಳೆಯ ಆರ್ಭಟ ಜೋರಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಬ್ರಹ್ಮಾವರ ಹಾಗೂ ಕುಂದಾಪುರ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಕುಂದಾಪುರ ಸಹಾಯಕ ಆಯುಕ್ತರಾದ ರಶ್ಮಿ ಎಸ್‌.ಆರ್‌ ಆದೇಶ ಹೊರಡಿಸಿದ್ದಾರೆ.

Schools, Colleges Holiday In Udupi On July 6 Due To Heavy Rainfall Kundapura and Brahmavar Taluk
Image Credit to Original Source

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜುಲೈ ೬ ರಂದು ಕುಂದಾಪುರ ಹಾಗೂ ಬ್ರಹ್ಮಾವರ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉಳಿದಂತೆ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್, ಐಟಿಐ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ.

ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯ ಮಾಡುವಂತಿಲ್ಲ. ಕಾಲೇಜುಗಳ ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವಾಗ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪಿಸುವ ಕಾರ್ಯವನ್ನು ಮಾಡಬೇಕು.

ನದಿ, ಹಳ್ಳ, ತೋಡುಗಳನ್ನು ದಾಟಿಕೊಂಡು ಶಾಲೆಗೆ ಬರುವ ವಿದ್ಯಾರ್ಥಿಗಳಿಗೆ ಸುರಕ್ಷತೆಯ ದೃಷ್ಠಿಯಿಂದ ಮನೆಯಲ್ಲಿಯೇ ಇರುವಂತೆ ಸೂಚನೆಯನ್ನು ನೀಡಬೇಕು. ಮಳೆಯ ಹಿನ್ನೆಲೆಯಲ್ಲಿ ನೀಡಿರುವ ರಜೆಯನ್ನು ಶನಿವಾರ ಅಐವಾ ಭಾನುವಾರದಂದು ಹೆಚ್ಚುವರಿ ತರಗತಿಗಳನ್ನು ನಡೆಸಿ, ಶೈಕ್ಷಣಿಕ ವೇಳಾಪಟ್ಟಿಯಲ್ಲಿ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ : 5,8.9ನೇ ತರಗತಿಗೆ ಬೋರ್ಡ್‌ ಪರೀಕ್ಷೆ ರದ್ದು : ಆದ್ರೆ ಶಿಕ್ಷಣ ಇಲಾಖೆಯಿಂದ ಹೊಸ ರೂಲ್ಸ್‌ ಜಾರಿ

ಕರ್ನಾಟಕ ರಾಜ್ಯದ ಹಲವೆಡೆ ಭಾರೀ ಮಳೆಯಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡದಲ್ಲಿ ಮಳೆಯ ಜೊತೆಗೆ ಹಲವೆಡೆ ಭೂಕುಸಿತ ಉಂಟಾಗುತ್ತಿದೆ. ಭಾರೀ ಮಳೆಯ ಉತ್ತರ ಕನ್ನಡ ಜಿಲ್ಲೆ ಕರಾವಳಿ ಭಾಗದ ಕುಮಟಾ ಮತ್ತು ಹೊನ್ನಾವರ ತಾಲೂಕಿನ ಶಾಲಾ-ಕಾಲೇಜುಗಳಿಗೆ ಜುಲೈ 5 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಆದೇಶಿಸಿದ್ದರು.

ಇನ್ನು ಮೂರು ದಿನಗಳ ಕಾಲ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಈಗಾಗಲೇ ಸೂಚನೆ ನೀಡಿದೆ. ಜಿಲ್ಲೆಯ ಕುಮಟಾ ತಾಲೂಕಿನಲ್ಲಿ ಇಂದು ಧಾರಾಕಾರ ಮಳೆಯಾಗಿದ್ದು, ನಾಳೆಯೂ ಭಾರೀ ಮಳೆಯಾಗುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಕುಮಟಾ ತಾಲೂಕಿನಲ್ಲಿ ಶಾಲಾ-ಕಾಲೇಜುಗಳಿಗೆ ಮಾತ್ರ ರಜೆ ನೀಡಲಾಗಿದೆ.

ಇದನ್ನೂ ಓದಿ : Karnataka New Schools : ಹೊಸ ಶಾಲೆಗಳಿಗೆ ಇನ್ನಿಲ್ಲದ ಬೇಡಿಕೆ: ಅನುಮತಿ ಕೋರಿ ಸಲ್ಲಿಕೆಯಾಗಿದೆ ಸಾವಿರಾರು ಅರ್ಜಿ

Schools, Colleges Holiday In Udupi On July 6 Due To Heavy Rainfall Kundapura and Brahmavar Taluk
Image Credit to Original Source

ಹೊನ್ನಾವರ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಗುಂಡಬಾಳ, ಭಾಸ್ಕೇರಿ ನದಿಗಳು ಉಕ್ಕಿ ಹರಿದು ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಕುಮಟಾ ಹೊನ್ನಾವರ ಗ್ರಾಮೀಣ ಭಾಗದಲ್ಲಿ ಆರೈಕೆ ಕೇಂದ್ರ ತೆರೆಯಲಾಗಿದೆ. ಈ ಭಾಗಕ್ಕೆ ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜುಲೈ 5 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉತ್ತರ ಕನ್ನಡ ಮಾತ್ರವಲ್ಲದೆ ಉಡುಪಿ ಜಿಲ್ಲೆಯಲ್ಲೂ ಭಾರೀ ಮಳೆಯಾಗಿದೆ

ಬೈಂದೂರು, ಕುಂದಾಪುರ, ಬ್ರಹ್ಮಾವರ ತಾಲೂಕುಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಜುಲೈ 5, ಶುಕ್ರವಾರ ಮುಂಜಾಗ್ರತಾ ಕ್ರಮವಾಗಿ ಈ ಮೂರು ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Schools, Colleges Holiday In Udupi On July 6 Due To Heavy Rainfall Kundapura and Brahmavar Taluk

Comments are closed.