ಗ್ಯಾರಂಟಿ ಯೋಜನೆ ಕುರಿತು ಬಿಗ್ ಅಪ್‌ಡೇಟ್; ಪ್ರತ್ಯೇಕ ‘ಗ್ಯಾರಂಟಿ’ ಸಚಿವಾಲಯ ಸ್ಥಾಪನೆಗೆ ಸಿಎಂ ಸಿದ್ದರಾಮಯ್ಯಗೆ ಮನವಿ
Separate Guarantee Ministry in Karnataka: ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ ಹಾಗೂ ಸಮನ್ವಯಕ್ಕಾಗಿ ಪ್ರತ್ಯೇಕ ಸಚಿವಾಲಯವನ್ನು ಸ್ಥಾಪಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗಿದೆ.
ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಹಾಗೂ ಪರಿಷತ್ ಸದಸ್ಯರಾದ ದಿನೇಶ್ ಗೂಳಿ ಗೌಡ ಅವರು ಈ ಪ್ರಸ್ತಾವನೆಯನ್ನು ಸಲ್ಲಿಸಿದ್ದಾರೆ. ಐಎಎಸ್ ಅಧಿಕಾರಿಯ ನೇತೃತ್ವದಲ್ಲಿ ಈ ಪ್ರತ್ಯೇಕ ಸಚಿವಾಲಯ ಕಾರ್ಯನಿರ್ವಹಿಸಬೇಕು ಎಂಬುದು ಅವರ ಪ್ರಮುಖ ಬೇಡಿಕೆಯಾಗಿದೆ.
ಮನವಿಯಲ್ಲಿರುವ ಪ್ರಮುಖ 13 ಬೇಡಿಕೆಗಳು:
2026-27ನೇ ಸಾಲಿನ ಬಜೆಟ್‌ನಲ್ಲಿ ಈ ಕೆಳಗಿನ ಅಂಶಗಳನ್ನು ಸೇರಿಸುವಂತೆ ಅವರು ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸಮಗ್ರ ಪ್ರಸ್ತಾವನೆ ಸಲ್ಲಿಸಿದ್ದಾರೆ:
- ಆರೋಗ್ಯ ಮತ್ತು ಮೂಲಸೌಕರ್ಯ: ಬೆಂಗಳೂರಿನ ಹೊರವಲಯದ ಕೆಂಪೇಗೌಡ ಬಡಾವಣೆಯಲ್ಲಿ ಸುಮಾರು 20 ಎಕರೆ ಪ್ರದೇಶದಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ನೂತನ ಘಟಕ ಸ್ಥಾಪಿಸಲು ಅನುದಾನ ಮೀಸಲಿಡಬೇಕು.
- ರೇಷ್ಮೆ ಉದ್ಯಮ: ಪ್ರತಿದಿನ 5 ಸಾವಿರ ಸೀರೆಗಳ ಉತ್ಪಾದನೆಗೆ ಅನುಕೂಲವಾಗುವಂತೆ ಮೈಸೂರು ರೇಷ್ಮೆ ಸೀರೆಯ ಹೊಸ ಉತ್ಪಾದನಾ ಘಟಕ ಆರಂಭಿಸಬೇಕು.
- ಕೃಷಿ ಮತ್ತು ಹಾಲು ಉತ್ಪಾದನೆ: ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ₹7ಕ್ಕೆ ಹೆಚ್ಚಿಸಬೇಕು. ಕೃಷಿ-ಕೈಗಾರಿಕೆಗಳಿಗೆ ಸಮರ್ಪಕ ನೀರು ಪೂರೈಸಲು ವೈಜ್ಞಾನಿಕ ಸಲಹೆ ನೀಡಲು ‘ಜಲ ಆಯೋಗ’ ರಚಿಸಬೇಕು.
16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ಬ್ಯಾನ್? ಸಿಎಂ ಸಿದ್ದರಾಮಯ್ಯ ಹೊಸ ಮಾಸ್ಟರ್ ಪ್ಲಾನ್! - ಅಭಿವೃದ್ಧಿ ನಿಧಿ: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯನ್ನು ₹2 ಕೋಟಿಯಿಂದ ₹4 ಕೋಟಿಗೆ ಏರಿಸಬೇಕು.
- ಶಿಕ್ಷಣ ಮತ್ತು ಕಾನೂನು: ಹುಬ್ಬಳ್ಳಿಯಲ್ಲಿರುವ ಕಾನೂನು ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರವನ್ನು ಮೈಸೂರಿನಲ್ಲಿ ಸ್ಥಾಪಿಸಬೇಕು ಹಾಗೂ ಉದ್ಯೋಗಾಧಾರಿತ ಎಐ (AI) ಕೌಶಲ ಡಿಪ್ಲೊಮಾ ಕೋರ್ಸ್ ಆರಂಭಿಸಬೇಕು.
ಈ ಬೇಡಿಕೆಗಳು ಆರೋಗ್ಯ, ಕೃಷಿ, ತಂತ್ರಜ್ಞಾನ ಮತ್ತು ಆಡಳಿತ ಸುಧಾರಣೆಗೆ ಪೂರಕವಾಗಿವೆ ಎಂದು ದಿನೇಶ್ ಗೂಳಿ ಗೌಡ ಅವರು ತಿಳಿಸಿದ್ದಾರೆ.



