ಯಾದಗಿರಿ : ಶಿಕ್ಷಕರನ್ನು ದೇವರಂತೆ ಪೂಜಿಸಲಾಗುತ್ತದೆ. ಸಮಾಜದಲ್ಲಿ ಗುರುಗಳನ್ನು ಗೌರವದಿಂದ ನೋಡಲಾಗುತ್ತದೆ. ಭವಿಷ್ಯದ ಪ್ರಜೆಗಳನ್ನು ರೂಪಿಸಬೇಕಾಗಿದ್ದ ಪ್ರಾಂಶುಪಾಲನೋರ್ವ ಹೀನ ಕೃತ್ಯವನ್ನು ಎಸಗಿದ್ದಾನೆ. ವಿದ್ಯಾರ್ಥಿನಿಯೋರ್ವಳಿಗೆ ಶಾಲೆಯಲ್ಲಿಯೇ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಈ ಘಟನೆ ನಡೆದಿರೋದು ಯಾದಗಿರಿಯಲ್ಲಿ.
ಯಾದಗಿರಿ ಜಿಲ್ಲೆಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಪ್ರಭಾರ ಪ್ರಾಂಶುಪಾಲರ ವಿರುದ್ದ ಇದೀಗ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಿದೆ. ಶಾಲೆಗೆ ಪ್ರಭಾರ ಪ್ರಾಂಶುಪಾಲನಾಗಿರುವ ವಿಜ್ಞಾನ ಶಿಕ್ಷಕ ನವೆಂಬರ್ ೧ರಂದು ಶಾಲೆಯಲ್ಲಿಯೇ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ನಂತರದಲ್ಲಿ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಲಾಗಿದೆ ಅನ್ನೋ ಆರೋಪ ಕೇಳಿಬಂದಿದೆ.
ಪ್ರಾಂಶುಪಾಲನಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವ ಬಾಲಕಿ ಅಧಿಕಾರಿಯೋರ್ವರಿಗೆ ದೂರು ನೀಡಿದ್ದಾಳೆ. ಬಾಲಕಿ ಸರಿಯಾಗಿ ಶಾಲೆಗೆ ಬಾರದ ಹಿನ್ನೆಲೆಯಲ್ಲೀಗ ಪ್ರಕರಣ ಬೆಳಕಿಗೆ ಬಂದಿದೆ. ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರು ಶಾಲೆಗೆ ಭೇಟಿ ನೀಡಿದ್ದು, ಘಟನೆಗೆ ಸಂಬಂಧಿಸಿದಂತೆ ವರದಿ ನೀಡುವಂತೆ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.
ಇದನ್ನೂ ಓದಿ : ತಾಯಿಯ ಕುತ್ತಿಗೆಗೆ ಚಾಕು ಹಿಡಿದು ಅತ್ಯಾಚಾರ ವೆಸಗಿದ ಪಾಪಿ ಮಗ
ಇದನ್ನೂ ಓದಿ : ಮಗನ ಅಪ್ರಾಪ್ತ ಪ್ರಿಯತಮೆಯ ಮೇಲೆ ಅತ್ಯಾಚಾರವೆಸಗಿದ ತಂದೆ
(Sexual Harassment of a Student By a Principal At School Yadagiri)