ಬೆಂಗಳೂರು : ರಾಜ್ಯದಾದ್ಯಂತ ಸರಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ (Shakti Smart Card) ಅವಕಾಶ ಕಲ್ಪಿಸಲಾಗಿದೆ. ರಾಜ್ಯ ಸರಕಾರದ ಮಹತ್ವಾಕಾಂಕ್ಷಿಯ ಶಕ್ತಿ ಯೋಜನೆ ಜೂನ್ 11 ರಿಂದ ಜಾರಿಗೆ ಬರಲಿದೆ. ಆದರೆ ಮಹಿಳೆಯರು ಉಚಿತವಾಗಿ ಬಸ್‌ಗಳಲ್ಲಿ ಪ್ರಯಾಣಿಸಬೇಕಾದ್ರೆ ಕಡ್ಡಾಯವಾಗಿ ಶಕ್ತಿ ಸ್ಮಾರ್ಟ್ ಕಾರ್ಡ್ ಹೊಂದಿರಬೇಕು. ಮುಂದಿನ ಮೂರು ತಿಂಗಳ ಒಳಗಾಗಿ ಸ್ಮಾರ್ಟ್ ಕಾರ್ಡ್ ವಿತರಣೆಯನ್ನು ಪೂರ್ಣಗೊಳಿಸುವಂತೆ ಸರಕಾರ ಅಧಿಸೂಚನೆಯಲ್ಲಿ ತಿಳಿಸಿದೆ.
ಶಕ್ತಿ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರಕಾರ ಇಂದು ಅಧಿಸೂಚನೆಯನ್ನು ಹೊರಡಿಸಿದೆ. ಜೂನ್ 11 ರಿಂದಲೇ ಮಹಿಳೆಯರು ಸರಕಾರಿ ಸ್ವಾಮ್ಯದ ಕರ್ನಾಟಕ ರಸ್ತೆ ಸಾರಿಗೆ ನಿಗಮ (), ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (), ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ () ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ()ಗೆ ಸೇರಿದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಲಕ್ಷುರಿ ಹಾಗೂ ಎಸಿ ಬಸ್ಸುಗಳನ್ನು ಹೊರತು ಪಡಿಸಿ, ನಗರ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ರಾಜ್ಯದಾದ್ಯಂತ ಪ್ರಯಾಣಿಸಬಹುದಾಗಿದೆ.
ಎಸಿ, ನಾನ್ ಎಸಿ ಸ್ಲೀಪರ್, ಎಸಿ ಸ್ಲೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್, ಐರಾವತ ಗೋಲ್ಡ್ ಕ್ಲಾಸ್, ಅಂಬಾರಿ, ಅಂಬಾರಿ ಡ್ರೀಮ್ ಕ್ಲಾಸ್, ಅಂಬಾರಿ ಉತ್ಸವ್, ಫ್ಲೈ ಬಸ್, ಇವಿ ಪವರ್ ಬಸ್ಸುಗಳಲ್ಲಿ ಪ್ರಮಾಣಕ್ಕೆ ಅವಕಾಶವಿಲ್ಲ. ಜೊತೆಗೆ ಉಚಿತವಾಗಿ ಅಂತರಾಜ್ಯ ಪ್ರಯಾಣಕ್ಕೆ ಅವಕಾಶವಿಲ್ಲ.
ಇದನ್ನೂ ಓದಿ : Karnataka Grilahakshmi Yojana : ಕರ್ನಾಟಕ ಗೃಹಲಕ್ಷ್ಮಿ ಯೋಜನೆ : ಈ ಯೋಜನೆಗೆ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಕಡ್ಡಾಯ
ಶಕ್ತಿ ಯೋಜನೆಯಡಿಯಲ್ಲಿ ಸ್ಮಾರ್ಟ್ ಕಾರ್ಡ್ ಪಡೆಯಲು ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿಯನ್ನು ಸಲ್ಲಿಸುವ ಮೂಲಕ ಸ್ಮಾರ್ಟ್ ಕಾರ್ಡ್ ಪಡೆದುಕೊಳ್ಳಬಹುದಾಗಿದೆ. ಮೂರು ತಿಂಗಳ ಒಳಗಾಗಿ ಸ್ಮಾರ್ಟ್ ಕಾರ್ಡ್ ವಿತರಿಸುವಂತೆ ರಾಜ್ಯ ಸರಕಾರ ಸೂಚನೆಯನ್ನು ನೀಡಿದೆ. ಅಲ್ಲಿಯ ವರೆಗೆ ಭಾರತ ಸರಕಾರ ಅಥವಾ ಕರ್ನಾಟಕ ಸರಕಾರ ನೀಡಿರುವ ಭಾವಚಿತ್ರವಿರುವ ಯಾವುದೇ ಗುರುತಿನ ಚೀಟಿಯನ್ನು ತೋರಿಸುವ ಮೂಲಕ ಉಚಿತವಾಗಿ ಪ್ರಯಾಣಿಸಬಹುದಾಗಿದೆ.
Shakti Smart Card: Shakti Smart Card is mandatory for free travel of women in buses: How to apply?