ಬೆಂಗಳೂರು : ರಾಜ್ಯದಲ್ಲಿ ಶಕ್ತಿಯೋಜನೆ (Shakthi yojana) ಆರಂಭಗೊಂಡು ಕೆಲವು ತಿಂಗಳು ಕಳೆದಿದೆ. ಯೋಜನೆಯ ಎಫೆಕ್ಟ್‌ನಿಂದಾಗಿ ರಾಜ್ಯದಲ್ಲಿನ ಸರಕಾರಿನ ಬಸ್ಸುಗಳಲ್ಲಿ ಜನರು ತುಂಬಿ ತುಳುಕುತ್ತಿದ್ದಾರೆ. ಮಹಿಳೆಯರು ಹುಮ್ಮಸ್ಸಿನಿಂದಲೇ ಸರಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣವನ್ನು ಕೈಗೊಂಡಿದ್ದು, ಈ ನಡುವಲ್ಲೇ ಸಿಎಂ ಸಿದ್ದರಾಮಯ್ಯ ಮತ್ತೊಂದು ಗುಡ್‌ನ್ಯೂಸ್ ಕೊಟ್ಟಿದ್ದಾರೆ.
ಶಕ್ತಿ ಯೋಜನೆಗೆ ಸಂಬಂಧಿಸಿದಂತೆ ಸಾರಿಗೆ ಇಲಾಖೆಯ ಅಧಿಕಾರಿಗಳ ಜೊತೆಗೆ ಸಿದ್ದರಾಮಯ್ಯ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದ್ದಾರೆ. ಸಭೆಯಲ್ಲಿ ಅಧಿಕಾರಿಗಳಿಗೆ ಶಕ್ತಿ ಯೋಜನೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿಸುವ ನಿಟ್ಟಿನಲ್ಲಿ ಹಲವು ಸೂಚನೆಯನ್ನು ನೀಡಿದ್ದಾರೆ.

ಶಕ್ತಿ ಯೋಜನೆಯಿಂದ ಸರಕಾರಿ ಬಸ್ಸುಗಳಲ್ಲಿ ಶೇ.15ರಷ್ಟು ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ಇನ್ನಷ್ಟು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಹೊಸದಾಗಿ 5675 ಬಸ್ ಗಳನ್ನು ಖರೀದಿಸುವ ಗುರಿ ಹೊಂದಲಾಗಿದೆ. ಈ ನಿಟ್ಟಿನಲ್ಲಿ ಶೀಘ್ರದಲ್ಲಿಯೇ ಕ್ರಮವನ್ನು ಕೈಗೊಳ್ಳುವಂತೆ ಸೂಚನೆಯನ್ನು ನೀಡಿದ್ದಾರೆ.
ಇದನ್ನೂ ಓದಿ : ಅವಿವಾಹಿತ ಮಹಿಳೆಯರಿಗೆ ಪ್ರತೀ ತಿಂಗಳು 500ರೂ. : ಸರಕಾರದಿಂದ ಗುಡ್‌ನ್ಯೂಸ್, ಮನಸ್ವಿನಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ?
ಇದೀಗ ಹೊಸದಾಗಿ 5675 ಬಸ್ ಗಳನ್ನು ಖರೀದಿಸಲು ಸರಕಾರ 500 ಕೋಟಿ ರೂಪಾಯಿ ಅನುದಾನ ನೀಡಲಿದ್ದು, ಅತ್ಯಂತ ವೇಗವಾಗಿ ಬಸ್ಸುಗಳನ್ನು ಖರೀದಿಸಬೇಕು. ಜೊತೆಗೆ ಪ್ರಯಾಣಿಕರಿಗಾಗಿ ಹೆಚ್ಚುವರಿ ವೇಳಾಪಟ್ಟಿಯನ್ನು ಸೇರ್ಪಡೆಗೊಳಿಸುವ ಮೂಲಕ ಪ್ರಯಾಣಿಕರಿಗೆ ಉತ್ತಮ ಸೇವೆಯನ್ನು ನೀಡಬೇಕು ಎಂದು ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ.

ಶಕ್ತಿಯೋಜನೆಯಿಂದಾಗಿ ರಾಜ್ಯ ರಸ್ತೆ ನಿಗಮಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದ್ದು, ಸಾರಿಗೆ ಇಲಾಖೆ ಹೆಚ್ಚಿನ ಆದಾಯದ ನಿರೀಕ್ಷೆಯನ್ನು ಹೊಂದಿದೆ. ಅಲ್ಲದೇ ಸಾರಿಗೆ ನಿಗಮಗಳ ಹಣಕಾಸು ನಿರ್ವಹಣೆಯ ಕುರಿತು ಚರ್ಚೆ ನಡೆಸಲಾಗಿದೆ. ಇನ್ನು ವಾಹನಗಳ ತನಿಖೆಯಿಂದ 83 ಕೋಟಿ ರೂಪಾಯಿ ದಂಡವನ್ನು ವಸೂಲಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
5,675 ಹೊಸ ಬಸ್‌ಗಳ ಖರೀದಿಯಿಂದಾಗಿ ಸದ್ಯಕ್ಕೆ ಪ್ರಯಾಣಿಕರಿಗೆ ಉಂಟಾಗುತ್ತಿದ್ದ ತೊಡಕುಗಳು ನಿವಾರಣೆ ಆಗಲಿದೆ. ಹೆಚ್ಚುವರಿ ವೇಳಾಪಟ್ಟಿಯಿಂದ ಇನ್ನೂ ಹೆಚ್ಚಿನ ಅನುಕೂಲವಾಗಲಿದೆ. ಅಲ್ಲದೇ ಹೆಚ್ಚಿನ ಪ್ರಯಾಣಿಕರನ್ನು ಸರಕಾರಿ ಬಸ್ಸುಗಳ ಕಡೆಗೆ ಸೆಳೆಯಲು ಸಹಕಾರಿಯಾಗಲಿದೆ. ಇನ್ನು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಮಾತನಾಡಿ, ಶಕ್ತಿ ಯೋಜನೆಯು ರಾಜ್ಯದಲ್ಲಿ ನೂರಕ್ಕೆ ನೂರರಷ್ಟು ಯಶಸ್ವಿಯಾಗಿದೆ ಎಂದಿದ್ದಾರೆ.
ಇದನ್ನೂ ಓದಿ : ಮಹಿಳೆಯರಿಗೆ ಬಡ್ಡಿಯಿಲ್ಲದೇ ಸಿಗುತ್ತೆ 2 ಲಕ್ಷ ರೂ ಸಾಲ : ಗೃಹಲಕ್ಷ್ಮೀ ಬೆನ್ನಲ್ಲೇ ಸರಕಾರದಿಂದ ಮತ್ತೊಂದ ಯೋಜನೆ
ಏನಿದು ಶಕ್ತಿ ಯೋಜನೆ ? ಮಹಿಳೆಯರಿಗೆ ಏನು ಪ್ರಯೋಜನ ?
ಕರ್ನಾಟಕದ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆಯಂತೆ ಶಕ್ತಿ ಯೋಜನೆ ಕೂಡ ಒಂದು. ಜೂನ್ ೧೧ರಿಂದ ಕರ್ನಾಟಕ ರಾಜ್ಯದಲ್ಲಿ ಈ ಯೋಜನೆ ಜಾರಿಯಲ್ಲಿದೆ. ಶಕ್ತಿ ಯೋಜನೆಯ ಮೂಲಕ ಮಹಿಳೆಯರು ರಾಜ್ಯದಾದ್ಯಂತ ಉಚಿತ ಪ್ರಯಾಣ ಮಾಡಬಹುದಾಗಿದೆ.

ಕರ್ನಾಟಕ ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶವಿದೆ. ಸಾಮಾನ್ಯ ಹಾಗೂ ವೇಗದೂತ ಸರಕಾರಿ ಬಸ್ಸುಗಳಲ್ಲಿ ಮಾತ್ರವೇ ಮಹಿಳೆಯರಿಗೆ ಪ್ರಯಾಣಕ್ಕೆ ಅವಕಾಶವಿದೆ.
ಇದನ್ನೂ ಓದಿ : ಸರಕಾರಿ ನೌಕರರಿಗೆ ದಸರಾ ಗಿಫ್ಟ್ : ಡಿಎ ಹೆಚ್ಚಿಸಿದ ರಾಜ್ಯ ಸರಕಾರ, ವೇತನದಲ್ಲಿ ಎಷ್ಟು ಏರಿಕೆ ?
ಆದರೆ ಸರಕಾರಿ ಐಶಾರಾಮಿ ಬಸ್ಸುಗಳಲ್ಲಿ ಮಹಿಳೆಯ ಪ್ರಯಾಣಕ್ಕೆ ಅವಕಾಶವಿಲ್ಲ. ಮಹಿಳೆಯರು ಶಕ್ತಿ ಯೋಜನೆಯ ಮೂಲಕ ಪ್ರಯಾಣಿಸಲು ಗುರುತಿನ ಚೀಟಿ, ಆಧಾರ್ ಕಾರ್ಡ್ ಅಥವಾ ಡ್ರೈವಿಂಗ್ ಲೈಸೆನ್ಸ್ ಸೇರಿದಂತೆ ಸರಕಾರದ ಯಾವುದೇ ದಾಖಲೆಯನ್ನು ತೋರಿಸಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
Shakti Yojana Free Bus Scheme in Karnataka CM Siddaramaiah Given Good News