Shakti Yojana : ಕರ್ನಾಟಕದಲ್ಲಿ ನಾಳೆಯಿಂದ ಶಕ್ತಿ ಯೋಜನೆ ಜಾರಿ : ಸರಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ

ಬೆಂಗಳೂರು : (Shakti Yojana) ಕರ್ನಾಟಕ ರಾಜ್ಯದಾದ್ಯಂತ ನಾಳೆಯಿಂದ ಏಕಕಾಲಕ್ಕೆ ಕಾಂಗ್ರೆಸ್‌ ಸರಕಾರದ ಮಹತ್ವಾಕಾಂಕ್ಷಿಯ ಶಕ್ತಿ ಯೋಜನೆಗೆ ಚಾಲನೆ ನೀಡಲು ಸಿಎಂ ಸಿದ್ಧರಾಮಯ್ಯ ಚಾಲನೆ ನೀಡಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹಾಗೂ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಖುದ್ದಾಗಿ ಮಹಿಳಾ ಪ್ರಯಾಣಿಕರಿಗೆ ಟಿಕೆಟ್‌ ನೀಡುವ ಮೂಲಕ ಉಚಿತ ಬಸ್‌ ಪ್ರಯಾಣಕ್ಕೆ ಚಾಲನೆ ನೀಡಲಿದ್ದಾರೆ. ನಾಳೆ ಮಧ್ಯಾಹ್ನ ಒಂದು ಗಂಟೆಯಿಂದ ಈ ಯೋಜನೆಯ ಮೂಲಕ ಮಹಿಳೆಯರು ಉಚಿತವಾಗಿ ಬಸ್‌ ಪ್ರಯಾಣ ಮಾಡಬಹುದಾಗಿದೆ.

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಸರಕಾರ ತಮ್ಮ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಐದು ಪ್ರಮುಖ ಗ್ಯಾರಂಟಿಗಳಲ್ಲಿ ಮೊದಲ ಗ್ಯಾರಂಟಿ ಯೋಜನೆಗೆ ಜೂನ್‌ 11 ರಂದು ರಾಜ್ಯದ ಜನತೆಗೆ ಸಮರ್ಪಣೆ ಮಾಡಲಿದೆ. ಈ ಹಿನ್ನೆಲೆಯಲ್ಲಿ ಶಕ್ತಿ ಯೋಜನೆಯ ಮೂಲಕ ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ನೈರುತ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಬಿಎಂಟಿಸಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣಕ್ಕಾಗಿ ಅನುಕೂಲ ಕಲ್ಪಿಸಲಾಗುತ್ತಿದೆ. ಈ ಯೋಜನೆಗೆ ಖುದ್ದಾಗಿ ಸಿಎಂ ಸಿದ್ದರಾಮಯ್ಯ ಶಕ್ತಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಆದರೆ ಶಕ್ತಿ ಯೋಜನೆಯ ಜಾರಿಯ ಹೊತ್ತಲೇ ಬಸ್ಸುಗಳಲ್ಲಿ ಶೇ. 50ರಷ್ಟು ಸೀಟುಗಳನ್ನು ಪುರುಷರಿಗೆ ಮೀಸಲಿಡುವಂತೆ ಆದೇಶ ಹೊರಡಿಸಿದೆ. ಆದರೆ ಈ ಆದೇಶ ಕೆಎಸ್‌ಆರ್‌ಟಿಸಿ ಅಧಿಕಾರಿ ಅಪಸ್ವರ ಎತ್ತಿದ್ದಾರೆ.

ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ ಸಂಸ್ಥೆಗಳು ನಷ್ಟದ ಹಾದಿಯಲ್ಲಿವೆ. ಇದೀಗ ಶೇ.50ರಷ್ಟು ಸೀಟುಗಳನ್ನು ಮಹಿಳೆಯರಿಗೆ ಮೀಸಲು ಇಡುವುದರಿಂದ ಬಸ್ಸುಗಳಿಗೆ ಇನ್ನಷ್ಟು ನಷ್ಟವಾಗುವ ಸಾಧ್ಯತೆಯಿದೆ ಎಂಬ ಆತಂಕವನ್ನು ವ್ಯಕ್ತಪಡಿಸಿದ್ದಾರೆ. ಬಿಎಂಟಿಸಿ ಬಸ್ಸುಗಳಲ್ಲಿ ಯಾವುದೇ ರೀತಿಯಲ್ಲಿಯೂ ಮೀಸಲು ವ್ಯವಸ್ಥೆಯಿಲ್ಲ ಹೀಗಾಗಿ ಉಳಿದ ಸಂಸ್ಥೆಗಳ ಬಸ್ಸುಗಳಲ್ಲಿಯೂ ನೀಡಲಾಗಿರುವ ಮೀಸಲಾತಿಯನ್ನು ತೆಗೆದು ಹಾಕಬೇಕೆಂಬ ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.

ಮಹಿಳೆಯರು ಯಾವ ಬಸ್‌ಗಳಲ್ಲಿ ಪ್ರಯಾಣ ಮಾಡಬಹುದು ?

ಶಕ್ತಿಯೋಜನೆಯ ಮೂಲಕ ಮಹಿಳೆಯರು ಸಾಮಾನ್ಯ ಬಸ್ಸುಗಳಲ್ಲಿ ಪ್ರಯಾಣ ಬೆಳೆಸಬಹುದಾಗಿದೆ. ಆದರೆ ರಾಜಹಂಸ, ಸ್ಲೀಪರ್‌, ಎಸಿ, ಐರಾವತ ಸೇರಿದಂತೆ ಐಶಾರಾಮಿ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶವನ್ನು ಕಲ್ಪಿಸಿಲ್ಲ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಮಹಿಳೆಯರಿಗೆ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಅವಕಾಶವನ್ನು ನೀಡಲಾಗುತ್ತಿದೆ. ಶಕ್ತಿ ಯೋಜನೆ ಇದೀಗ ದೇಶದ ಗಮನ ಸೆಳೆದಿದೆ. ಈ ಯೋಜನೆಗೆ ಶಕ್ತಿ ಸ್ಮಾರ್ಟ್‌ ಕಾರ್ಡ್‌ ಕೂಡ ವಿತರಿಸುವುದಾಗಿ ಹೇಳಿದ್ದು, ಮೂರು ತಿಂಗಳ ಒಳಗಾಗಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಮಹಿಳೆಯರು ಶಕ್ತಿ ಸ್ಮಾರ್ಟ್‌ ಕಾರ್ಡ್‌ ಪಾಸುಗಳನ್ನು ಬಳಸಿಕೊಳ್ಳಬಹುದಾಗಿದೆ. ಅಲ್ಲಿಯ ವರೆಗೆ ಮಹಿಳೆಯರು ಕೇಂದ್ರ, ರಾಜ್ಯ ಸರಕಾರಗಳು ನೀಡಿರುವ ಯಾವುದೇ ದಾಖಲಾತಿಗಳನ್ನು ನೀಡುವ ಮೂಲಕ ಪ್ರಯಾಣಿಸಬಹುದಾಗಿದೆ.

ಮಹಿಳೆಯರು ತೋರಿಸಬೇಕಾದ ದಾಖಲೆಗಳ ವಿವರ :

ಆಧಾರ್‌ ಕಾರ್ಡ್‌, ವೋಟರ್‌ ಐಡಿ, ಡ್ರೈವಿಂ ಲೈಸನ್ಸ್‌, ಕೇಂದ್ರ ಸರಕಾರ ಅಥವಾ ರಾಜ್ಯ ಸರಕಾರ ನೀಡಿರುವ ವಾಸಸ್ಥಳದ ಗುರುತಿನ ಚೀಟಿ, ಇವುಗಳಲ್ಲಿ ಯಾವುದಾದರೂ ಒಂದು ತೋರಿಸಿ ಉಚಿತ ಪ್ರಯಾಣ ಮಾಡಬಹದಾಗಿದೆ.

ಸ್ಮಾರ್ಟ್‌ ಕಾರ್ಡ್‌ ಮಾಡುವ ವಿಧಾನ :

  • ಯಾವುದಾದರೂ ಹತ್ತಿರದ ಬೆಂಗಳೂರು ಒನ್‌, ಸೈಬರ್‌ ಸೆಂಟರ್‌ಗೆ ಭೇಟಿ ನೀಡಬೇಕು.
  • ಸೇವಾ ಸಿಂಧೂ ಪೋರ್ಟಲ್‌ ಮೂಲಕ ನೋಂದಣಿಗೆ ಅವಕಾಶವಿದೆ.
  • ಆಧಾರ್‌ ಕಾರ್ಡ್‌ ಅಥವಾ ಅಡ್ರೆಸ್‌ ಫ್ರೂಪ್‌ ನೀಡಿದಾಗ ಸ್ಮಾರ್ಟ್‌ ಕಾರ್ಡ್‌ ಮಾಡಿಕೊಡಲಾಗುವುದು.
  • ಸ್ಮಾರ್ಟ್‌ ಕಾರ್ಡಿಗೆ ಆಗುವ ಖರ್ಚನ್ನು ಸರಕಾರವೇ ಭರಿಸಲಿದೆ.

ಇದನ್ನೂ ಓದಿ : Gruha Lakshmi Yojana : ಗೃಹಲಕ್ಷ್ಮೀ ಯೋಜನೆಗೆ ಮನೆಯಿಂದಲೇ ಅರ್ಜಿ ಸಲ್ಲಿಸಿ : ಇಲ್ಲಿದೆ ಸಂಪೂರ್ಣ ಮಾಹಿತಿ

ಸಿಬ್ಬಂದಿಗೆ ಖಡಕ್‌ ಸೂಚನೆ :

  • ಮಹಿಳೆಯರಿಗೆ ಉಚಿತ ಪ್ರಯಾಣ ಅಂತ ನಿಲುಗಡೆಯ ಜಾಗದಲ್ಲಿ ಬಸ್‌ ನಿಲ್ಲಿಸದೇ ಅನಗತ್ಯ ಕಿರಿಕಿರಿ ಮಾಡುವ ಹಾಗೆ ಇಲ್ಲ.
  • ನಿಲುಗಡೆ ಇರುವ ಜಾಗದಲ್ಲಿ ಕಡ್ಡಾಯವಾಗಿ ಬಸ್‌ಗಳನ್ನು ನಿಲ್ಲಿಸಬೇಕು.
  • ಮನಸ್ಸಿಗೆ ಬಂದ ಹಾಗೆ ವರ್ತಿಸುವಂತಿಲ್ಲ
  • ಸಿಬ್ಬಂದಿಗಳು ಕೆಟ್ಟಾದಗಿ ವರ್ತಿಸಿದರೇ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು.
  • ಬಸ್‌ ಕಂಡಕ್ಟರ್‌ಗಳು ಪ್ರತಿ ಮಹಿಳೆಗೂ ಉಚಿತ ದರದಲ್ಲಿ ಟಿಕೆಟ್‌ ನೀಡಬೇಕು.
  • ಉಚಿತ ಟಿಕೆಟ್‌ ನೀಡಿಲ್ಲ ಎಂದರೇ ಕಂಡಕ್ಟರ್‌ ವಿರುದ್ಧ ಇಲಾಖೆಯಿಂದ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ.

Shakti Yojana: Shakti Yojana to be implemented in Karnataka from tomorrow: Free bus travel for women in government buses

Comments are closed.