Shimoga airport: ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕನ್ನಡ ಭಾಷೆಯ ಬಗ್ಗೆ ನಿರ್ಲಕ್ಷ್ಯ : ಕನ್ನಡಿಗರ ಆಕ್ರೋಶ

ಶಿವಮೊಗ್ಗ: (Shimoga airport) ರಾಜ್ಯ ಸರಕಾರದಿಂದ ಮಲೆನಾಡಿನ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ಲೋಕಾರ್ಪಣೆಗೆ ಸಿದ್ದವಾಗಿದ್ದು, ಈ ವಿಮಾನ ನಿಲ್ದಾಣದ ಒಳಗೆ ಕನ್ನಡ ಭಾಷೆಯ ಮೇಲೆ ನಿರ್ಲಕ್ಷ್ಯ ತೋರುತ್ತಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಹೊಸದಾಗಿ ನಿರ್ಮಾಣವಾದ ವಿಮಾನ ನಿಲ್ದಾಣವು ಕೆಲವೇ ದಿನಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಂದ ಉದ್ಘಾಟನೆಗೊಳ್ಳಲಿದೆ. ರಾಜ್ಯ ಬಿಜೆಪಿ ಸರಕಾರ ಕಾಳಜಿ ವಹಿಸಿ ಈ ನಿಲ್ದಾಣವನ್ನು ಸ್ಥಾಪಿಸಿದೆ ಎನ್ನಲಾಗುತ್ತಿದ್ದು, ಈ ವಿಮಾನ ನಿಲ್ದಾಣ ಕನ್ನಡ ಭಾಷೆ ವಿಚಾರದಲ್ಲಿ ಕನ್ನಡಿಗರ ಕೆಂಗಣ್ಣಿಗೆ ರಾಜ್ಯ ಸರಕಾರ ಗುರಿಯಾಗಿದೆ.

ಕನ್ನಡ ನೆಲದಲ್ಲಿ ನಿರ್ಮಾಣವಾದ ಈ ವಿಮಾನ ನಿಲ್ದಾಣದ ಒಳಗಡೆ ಕನ್ನಡದ ನಾಮಫಲಕಗಳು ಒಂದೂ ಇಲ್ಲ ಎನ್ನುವುದು ಬೇಸರದ ಸಂಗತಿ. ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಹೆಸರಿಡಲು ನಿರ್ಧರಿಸಲಾಗಿದ್ದು, ಇಂತಹ ಹೆಸರಿರುವ ವಿಮಾನ ನಿಲ್ದಾಣದಲ್ಲಿ ಕನ್ನಡ ನಾಮಫಲಕವೇ ಇಲ್ಲದಿದ್ದರೆ ಹೇಗೆ ಎಂದು ಪ್ರಶ್ನಿಸಿ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಾದೇಶಿಕ ಭಾಷೆಗಳಿಗೆ ಮನ್ನಣೆ ಸಿಗಬೇಕು. ಕನ್ನಡ ಭಾಷೆಯ ನೆಲದಲ್ಲೇ ಇಂತಹ ವಿಚಾರಗಳ ಮೂಲಕ ಅವಮಾನ ಮಾಡುವುದು ಸರಿಯಲ್ಲ. ಹೀಗಾಗಿ ಶಿವಮೊಗ್ಗ ವಿಮಾನ ನಿಲ್ದಾಣಗಳಲ್ಲಿ ಕನ್ನಡ ನಾಮಫಲಕ ಅಳವಡಿಸುವಂತೆ ಕನ್ನಡಿಗರು ಆಗ್ರಹಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರವನ್ನು ಬಿಜೆಪಿಯ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಪ್ರತಿನಿಧಿಸಿದ್ದರು. ಇಲ್ಲಿಗೆ ವಿಮಾನ ನಿಲ್ದಾಣವಾಗಬೇಕು ಎಂದು ಹೇಳಿದವರಲ್ಲಿ ಅವರೇ ಮೊದಲಾಗಿದ್ದರು. ಈ ಕಾರಣಕ್ಕೆ ಅವರ ಹೆಸರನ್ನೇ ವಿಮಾನ ನಿಲ್ದಾಣಕ್ಕೆ ಇಡಬೇಕು ಎಂಬ ಮಾತು ಕೇಳಿಬಂದಿತ್ತು. ಇದು ಚರ್ಚೆಗೂ ಕಾರಣವಾಗಿತ್ತು. ಆದರೆ ಈ ಚರ್ಚೆಗೆ ಸ್ವತಃ ಅವರೇ ತೆರೆ ಎಳೆದಿದ್ದು, ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ವಿಮಾನ ನಿಲ್ದಾಣಕ್ಕಿಡಲು ಯಡಿಯೂರಪ್ಪ ನಿರ್ಧರಿಸಿದರು. ಈಗ ಕುವೆಂಪು ಅವರ ಹೆಸರೇ ಅಂತಿಮ ಎಂದು ಹೆಳಲಾಗುತ್ತಿರುವ ವಿಮಾನ ನಿಲ್ದಾಣದಲ್ಲಿ ಕನ್ನಡದ ಬಗ್ಗೆ ನಿರ್ಲಕ್ಷ್ಯ ತೋರುತ್ತಿರುವುದಕ್ಕೆ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : IPS Roopa VS IAS Rohini: ರೋಹಿಣಿ ಸಿಂಧೂರಿ,‌ ರೂಪಾ ಮೌದ್ಗಿಲ್ ವೈಯಕ್ತಿಕ ಕಿತ್ತಾಟ : ಎಚ್ಚರಿಕೆ ಕೊಟ್ಟ ಕಾನೂನು ಸಚಿವ

ಇದನ್ನೂ ಓದಿ : ಮುಂದಿನ ತಿಂಗಳು ಬೆಂಗಳೂರಿಗೆ ಬರಲಿದೆ ಎಲೆಕ್ಟ್ರಿಕ್ ಎಸಿ ಡಬಲ್ ಡೆಕ್ಕರ್ ಬಸ್

Shimoga airport: Neglect of Kannada language at Shimoga airport: Kannadigas outrage

Comments are closed.