ಹಾಸನ : ಕರಾವಳಿ ಹಾಗೂ ಬೆಂಗಳೂರು ಸಂಪರ್ಕ ಕೊಂಡಿಯಂತಿರುವ ಶಿರಾಡಿಘಾಟ್ ರಸ್ತೆಯಲ್ಲಿ ಮತ್ತೆ ಭೂಕುಸಿತ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಶಿರಾಡಿಘಾಟ್ ರಸ್ತೆಯಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ (Shiradi Ghat travel ban) ನಿಷೇಧಿಸಲಾಗಿದೆ. ಈ ಕುರಿತು ಹಾಸನ ಎಸ್‌ಪಿ ಜೈರಾಂ ಶಂಕರ್ ಅವರು ಮಾಧ್ಯಮಗಳಿಗೆ ಮಾಹಿತಿಯನ್ನು ನೀಡಿದ್ದಾರೆ.
ಕಳೆದ ಎರಡು ದಿನಗಳ ಹಿಂದೆಯಷ್ಟೇ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ದೋಣಿಗಲ್ ಸಮೀಪ ಭೂ ಕುಸಿತ ಉಂಟಾಗಿತ್ತು. ಆದ್ರೀಗ ಅದೇ ಸ್ಥಳದಲ್ಲಿ ಮತ್ತೆ ಭೂ ಕುಸಿತ ಉಂಟಾಗಿದ್ದು, ಸಂಚಾರಕ್ಕೆ ಅಪಾಯವನ್ನು ತಂದೊಡ್ಡಿದೆ. ಜೊತೆಗೆ ಕಳೆದ ಹತ್ತಕ್ಕೂ ಅಧಿಕ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಶಿರಾಡಿಘಾಟ್ ರಸ್ತೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಇಂದೂ ಕೂಡ ಮತ್ತೆ ಭೂ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಹಾಸನ ಜಿಲ್ಲಾಡಳಿತ ಶಿರಾಡಿಘಾಟ್ ರಸ್ತೆಯಲ್ಲಿ ಬಾರೀ ವಾಹನಗಳ ಸಂಚಾರಕ್ಕೆ ನಿಷೇಧವನ್ನು ಹೇರಿದ್ದು, ಲಘು ವಾಹನ ಹಾಗೂ ಬಸ್ಸುಗಳ ಸಂಚಾರಕ್ಕೆ ಅವಕಾಶವನ್ನು ಕಲ್ಪಿಸಿತ್ತು. ಆದ್ರೀಗ ಮಲೆನಾಡಿನ ಭಾಗಗಳಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಭೂಕುಸಿತದ ಭೀತಿ ಉಂಟಾಗಿದೆ. ಇದೀಗ ವಾಹನ ಸವಾರರು ಬದಲಿ ಮಾರ್ಗದಲ್ಲಿ ಸಂಚಾರ ಮಾಡುವಂತೆ ಮನವಿ ಮಾಡಲಾಗಿದೆ.
ಮಲೆನಾಡಿನ ಜಿಲ್ಲೆಗಳಲ್ಲಿ ನಿಲ್ಲದ ವರುಣನ ಅಬ್ಬರ
ಕಾಫಿನಾಡು ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಹಾಗೂ ಮಡಿಕೇರಿ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆ ಬಿಡುವು ಪಡೆಯುವ ಲಕ್ಷಣ ಕಾಣಿಸುತ್ತಿಲ್ಲ. ಮಲೆನಾಡಿನ ಭಾಗಗಳಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಾ, ಭದ್ರಾ, ಹೇಮಾವತಿ, ಕಾವೇರಿ ನದಿಗಳು ತುಂಬಿ ಹರಿಯುತ್ತಿವೆ. ಜೊತೆಗೆ ನಿರಂತರ ಮಳೆಯಿಂದಾಗಿ ಮಣ್ಣು ಸಡಿಲವಾಗಿದ್ದು, ಅಲ್ಲಲ್ಲಿ ಭೂ ಕುಸಿತ ಉಂಟಾಗುತ್ತಿದೆ. ಈಗಾಗಲೇ ನೂರಾರು ಮನೆಗಳು ಧರೆಶಾಹಿಯಾಗಿದೆ. ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಇದನ್ನೂ ಓದಿ : ಒತ್ತಿನೆಣೆ ಕಾರು ಸುಟ್ಟ ಪ್ರಕರಣ : ಸಿನಿಮಾ ಸ್ಟೈಲ್‌ನಲ್ಲಿ ಸೂಸೈಡ್ ಹೈಡ್ರಾಮ, ಅಮಾಯಕನನ್ನು ಸುಟ್ಟ ಕೊಂದ ಪಾಪಿಗಳು
ಇದನ್ನೂ ಓದಿ : state government : ಸರ್ಕಾರಿ ಕಚೇರಿಗಳಲ್ಲಿ ಇನ್ಮುಂದೆ ಫೋಟೋ/ವಿಡಿಯೋ ಕ್ಲಿಕ್ಕಿಸುವಂತಿಲ್ಲ : ರಾಜ್ಯ ಸರ್ಕಾರದ ಮಹತ್ವದ ಆದೇಶ
Shiradi Ghat travel ban landslide in Donigal near Sakleshpura road Closed