ಶಿವಮೊಗ್ಗ ಬಸ್‌ ಅಪಘಾತದಲ್ಲಿ ಇಬ್ಬರು ಸಾವು : 30 ಕ್ಕೂ ಅಧಿಕ ಮಂದಿಗೆ ಗಾಯ

ಶಿವಮೊಗ್ಗ : ಖಾಸಗಿ ಬಸ್ಸುಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ (Accident) ಇಬ್ಬರು ಸಾವನ್ನಪ್ಪಿ 20ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಶಿವಮೊಗ್ಗ (Shivamogga) ತಾಲೂಕಿನ ಕುಂಸಿ ಬಳಿಯ ಕುಮಧ್ವತಿ ಸೇತುವೆಯ ಬಳಿಯಲ್ಲಿ ನಡೆದಿದೆ. 6 ಮಂದಿಯ ಸ್ಥಿತಿ ಚಿಂತಾಜನಕವಾಗಿದ್ದು, ಗಾಯಾಳುಗಳಿಗೆ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹೊಸದುರ್ಗ ನಿವಾಸಿ ತಿಪ್ಪೇಸ್ವಾಮಿ ಹಾಗೂ ಮಹಿಳೆ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿದ್ದು, ಕುಂಸಿ ಠಾಣೆಯ ಪೊಲೀಸರು ಜೊತೆಗೆ ರಕ್ಷಣಾ ಕಾರ್ಯವನ್ನು ನಡೆಸುತ್ತಿದ್ದಾರೆ. ಸುಮಾರು 30 ಕ್ಕೂ ಅಧಿಕ ಮಂದಿ ಗಾಯಾಳುಗಳನ್ನು ಈಗಾಗಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ ಎಂದು ಶಿವಮೊಗ್ಗ ಎಸ್‌ಪಿ ಮಿಥುನ್‌ ಕುಮಾರ್‌ ಮಾಹಿತಿ ನೀಡಿದ್ದಾರೆ.

ಶಿಕಾರಿಪುರದಿಂದ ಶಿವಮೊಗ್ಗದ ಕಡೆಗೆ ಪ್ರಯಾಣಿಸುತ್ತಿದ್ದ ಶ್ರೀನಿವಾಸ ಬಸ್‌, ಶಿವಮೊಗ್ಗದಿಂದ ಶಿಕಾರಿಪುದ ಕಡೆಗೆ ಸಾಗುತ್ತಿದ್ದ ಬಾಲಾಜಿ ಬಸ್ಸಿಗೆ ಢಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಬಸ್ಸಿನ ಚಾಲಕ ಕಾಳಪ್ಪ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮೆಗ್ಗಾನ್‌ ಆಸ್ಪತ್ರೆಗೆ ಸುಮಾರು ಹತ್ತು ಅಂಬ್ಯುಲೆನ್ಸ್‌ಗಳ ಮೂಲಕ ಗಾಯಾಳುಗಳನ್ನು ಆಸ್ತ್ರೆಗೆ ಸಾಗಿಸುವ ಕಾರ್ಯವನ್ನು ಮಾಡಲಾಗುತ್ತಿದೆ.

ಅಪಘಾತದಿಂದಾಗಿ ಎರಡೂ ಬಸ್ಸುಗಳು ಸಂಪೂರ್ಣವಾಗಿ ನುಜ್ಜುಗುಜ್ಜಾಗಿವೆ. ಎರಡೂ ಬಸ್ಸುಗಳನ್ನು ಜೆಸಿಬಿ ಸಹಾಯದಿಂದ ಬೇರ್ಪಡಿಸುವ ಕಾರ್ಯ ನಡೆಯುತ್ತಿದೆ. ಬಸ್ಸಿನಲ್ಲಿ ಸುಮಾರು 70 ಕ್ಕೂ ಅಧಿಕ ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಈ ಕುರಿತು ಕುಂಸಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಶಿವಮೊಗ್ಗ (Shivamogga) ನಗರದ ಮೆಗ್ಗಾನ್‌ ಆಸ್ಪತ್ರೆಗೆ ಸಂಸದ ಬಿ.ವೈ.ರಾಘವೇಂದ್ರ ಹಾಗೂ BY ವಿಜಯೇಂದ್ರ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಅಪಘಾತದಿಂದಾಗಿ ಶಿವಮೊಗ್ಗ ಹಾಗೂ ಸಾಗರ ನಡುವಿನ ರಾಷ್ಟ್ರೀಯ ಹೆದ್ದಾರಿ ಸಂಚಾರ ಸಂಪೂರ್ಣವಾಗಿ ಬಂದ್‌ ಆಗಿದ್ದು, ಶಿವಮೊಗ್ಗದಿಂದ ಆಯನೂರಿಗೆ ಸಂಚರಿಸಿ ರಿಪ್ಪನ್‌ ಪೇಟೆ ಮಾರ್ಗವಾಗಿ ವಾಹನಗಳು ಸಾಗರಕ್ಕೆ ಸಂಚಾರ ಮಾಡುತ್ತಿವೆ.

ಇದನ್ನೂ ಓದಿ : BJP MLA BM Sukumar Shetty : ಬೈಂದೂರು ಬಿಜೆಪಿ ಶಾಸಕ ಬಿಎಂ ಸುಕುಮಾರ ಶೆಟ್ಟಿ ಉಚ್ಚಾಟನೆ

ಇದನ್ನೂ ಓದಿ : ಶಾಲಾ ಮಕ್ಕಳ ಮೇಲೆ ಹರಿದ ಕಾರು : 3 ವಿದ್ಯಾರ್ಥಿಗಳ ಸಾವು, ಮೂವರು ಗಂಭೀರ

Shivamogga accident Kumsi any died in bus accident

Comments are closed.