Shivamogga BUS Accident : ಶಿವಮೊಗ್ಗದಲ್ಲಿ ಎರಡು ಬಸ್ಸುಗಳ ನಡುವೆ ಭೀಕರ ಅಪಘಾತ

ಶಿವಮೊಗ್ಗ : Shivamogga BUS Accident: ಎರಡು ಖಾಸಗಿ ಬಸ್ಸುಗಳ ನಡುವೆ ಮುಖಾಮುಖಿ ಢಿಕ್ಕಿಯಾಗಿ 10 ಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಚೋರಡಿ ಎಂಬಲ್ಲಿ ನಡೆದಿದೆ. ಅಪಘಾಯದಲ್ಲಿ ಬಸ್‌ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ಗಾಯಾಳುಗಳನ್ನು ಆಸ್ಪತ್ತೆಗೆ ದಾಖಲಿಸಲಾಗಿದೆ.

ಶಿವಮೊಗ್ಗ ಹೊರವಲಯದ ಚೋರಡಿಯಲ್ಲಿ ಈ ಘಟನೆ ಸಂಭವಿಸಿದೆ. ಅಪಘಾತ ನಡೆಯುತ್ತಿದ್ದ ವೇಳೆಯಲ್ಲಿ ಒಟ್ಟು 50 ಕ್ಕೂ ಅಧಿಕ ಮಂದಿ ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ ಚಾಲಕ ಸೇರಿ ಐದು ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಎಷ್ಟು ಮಂದಿ ಗಾಯಗೊಂಡಿದ್ದಾರೆ ಅನ್ನೋ ನಿಖರ ಮಾಹಿತಿ ಲಭ್ಯವಾಗಿಲ್ಲ. ಸ್ಥಳಕ್ಕೆ ಕುಂಸಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ‌

ಇದನ್ನೂ ಓದಿ : ಗೋಲ್ಡನ್ ಟೆಂಪಲ್ ಬಳಿ ಬಾರೀ ಶಬ್ದ, ತನಿಖೆ ಚುರುಕುಗೊಳಿಸಿದ ಪೊಲೀಸರು

ಇದನ್ನೂ ಓದಿ : BJP MLA BM Sukumar Shetty : ಬೈಂದೂರು ಬಿಜೆಪಿ ಶಾಸಕ ಬಿಎಂ ಸುಕುಮಾರ ಶೆಟ್ಟಿ ಉಚ್ಚಾಟನೆ

ಆಗ್ರಾ : ಬಸ್ಸಿಗೆ ಕಾಯುತ್ತಿದ್ದ ಶಾಲಾ ಮಕ್ಕಳ ಮೇಲೆ ಕಾರು ಹರಿದು ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಆಗ್ರಾದ ದೌಕಿ ಪ್ರದೇಶದಲ್ಲಿ ನಡೆದಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ. ಮಹಾಪತ್ ಗ್ರಾಮದಲ್ಲಿ ಶಾಲಾ ಮಕ್ಕಳು ರಸ್ತೆ ಪಕ್ಕದಲ್ಲಿ ಬಸ್ಸಿಗಾಗಿ ಕಾಯುತ್ತಾ ನಿಂತಿದ್ದರು. ಈ ವೇಳೆಯಲ್ಲಿ ಫತೇಹಾಬಾದ್ ರಸ್ತೆಯ ಬದಿಯಿಂದ ವೇಗವಾಗಿ ಬಂದ ಕಾರು ಮಕ್ಕಳ ಮೇಲೆ ಹರಿದಿದೆ. ಈ ವೇಳೆಯಲ್ಲಿ ಕಾರಿನಡಿ ಸಿಲುಕಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮೂವರು ಗಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಅಪಘಾತದ ಬೆನ್ನಲ್ಲೇ ಹಲವು ಮಕ್ಕಳು ರಕ್ಷಣೆಗಾಗಿ ಓಡಿ ಬಂದಿದ್ದಾರೆ. ಕಾರು ಚಾಲಕನ ವಿರುದ್ದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಗ್ರಾಮಸ್ಥರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. ಘಟನೆಯಲ್ಲಿ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಫತೇಹಾಬಾದ್‌ನ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಸೌರಭ್ ಸಿಂಗ್ ಹೇಳಿದ್ದಾರೆ. ಗಾಯಗೊಂಡ ಮೂವರು ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

Shivamogga BUS Accident : Ksrtc Bus And Private Bus accident 10 death

Comments are closed.