Shivamogga Kuvempu Airport: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಹೆಸರು

ಶಿವಮೊಗ್ಗ: (Shivamogga Kuvempu Airport) ನಗರದ ಸೋಗಾನೆ ವಿಮಾನ ನಿಲ್ದಾಣಕ್ಕೆ ಯಾವ ಹೆಸರಿಡಬೇಕೆಂದು ಚರ್ಚೆಗಳು ನಡೆಯುತ್ತಿದ್ದು, ಕೊನೆಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ ಅವರು ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ನಾಮಕರಣ ಮಾಡಲಾಗುವುದು ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಾಡು ಕಂಡ ಶ್ರೇಷ್ಠ ಕವಿ ಕುವೆಂಪು, ಅವರ ಕೊಡುಗೆ ಅಪಾರ, ಆದ ಕಾರಣ ಅವರ ಹೆಸರೇ ಸೂಕ್ತ ಎಂದು ತೀರ್ಮಾನಿಸಲಾಗಿದೆ ಎಂದರು.

ಫೆ. 27 ರಂದು ಪ್ರಧಾನಿ ಮೋದಿ ಅವರು ಶಿವಮೊಗ್ಗ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಲಿದ್ದು, ಅದೇ ದಿನ ಮೋದಿ ಅವರೇ ವಿಮಾನ ನಿಲ್ದಾಣಕ್ಕೆ ಕುವೆಂಪು ಎಂಬ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಲಿದ್ದು, ನಾಳೆ ವಿಧಾನಮಂಡಲ ಅಧಿವೇಶನದಲ್ಲಿ ಈ ವಿಚಾರವನ್ನು ಎಲ್ಲರ ಸಮ್ಮುಖದಲ್ಲಿ ಚರ್ಚಿಸಿ ಸರ್ವಾನುಮತದಿಂದ ನಿರ್ಣಯಿಸಿ ಕೇಂದ್ರಕ್ಕೆ ಕಳುಹಿಸಿಕೊಡಲಾಗುವುದು ಎಂದರು.

ಇನ್ನೂ ರಾಜಕೀಯ ವಿಚಾರವಾಗಿ ಮಾತನಾಡಿದ ಯಡಿಯೂರಪ್ಪ, ಈ ಬಾರಿ ಚುನಾವಣೆಗೆ ಸ್ಪರ್ಧಿಸುವ ಯೋಚನೆ ಮಾಡಿಲ್ಲ. ಇಷ್ಟು ವರ್ಷರಾಜಕೀಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ರಾಜ್ಯದ ಜನರ ಸೇವೆಗೆ ಶ್ರಮಿಸಿದ್ದೇನೆ. ಪಕ್ಷವನ್ನು ಬೂತ್‌ ಮಟ್ಟದಿಂದ ಬಲ ಪಡಿಸುವ ನಿಟ್ಟಿನಲ್ಲಿ ಅಧಿವೇಶನ ಮುಗಿದ ನಂತರ ಗ್ರಾಮೀಣ ಭಾಗದಲ್ಲಿ ಪ್ರವಾಸ ಕೈಗೊಳ್ಳುವ ತೀರ್ಮಾನ ಮಾಡಲಾಗಿದೆ.

ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೆಂದ್ರ ಗೃಹ ಸಚಿವ ಅಮಿತ್‌ ಶಾ ಪ್ರವಾಸ ಕೈಗೊಳ್ಳಲಿದ್ದಾರೆ. ಬಿಜೆಪಿ ನೂರ ನಲವತ್ತಕ್ಕೂ ಹೆಚ್ಚು ಸ್ಥಾನ ಪಡೆದು ಪುನಃ ಅಧಿಕಾರಕ್ಕೆ ಬರಲಿದೆ. ಎಲ್ಲಿಯೇ ಹೋದರೂ ಯಡಿಯೂರಪ್ಪ ಎಂಬ ಘೋಷಣೆ ಕೇಳಿ ಬರುತ್ತದೆ. ಆದ್ದರಿಂದ ನನಗೆ ಈ ಬಾರಿಯ ಚುನಾವಣೆ ಸವಾಲಾಗಿದೆ ಎಂದರು.

ಇದನ್ನೂ ಓದಿ : God’s invocation on student: ಕಾಂತಾರ ವರಾಹ ರೂಪಂ ಹಾಡಿಗೆ ನೃತ್ಯ: ವಿದ್ಯಾರ್ಥಿ ಮೇಲೆ ಆವಾಹನೆಯಾಯ್ತು ದೈವ

ಇದನ್ನೂ ಓದಿ : ದ.ಕ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣಕ್ಕೆ ಗ್ರಹಣ, 4 ವರ್ಷದಲ್ಲಿ 3 ಸಂಚಾಲಕರ ಬದಲಾವಣೆ !

ಇದನ್ನೂ ಓದಿ : Young man committed suicide: ಅಕ್ಕನ ಮನೆಗೆ ದತ್ತು ಹೋಗಿದ್ದ ತಮ್ಮ ಆತ್ಮಹತ್ಯೆ: ಸಾವಿನಲ್ಲೂ ಶಾಲೆಯ ಬಗ್ಗೆ ಪ್ರೀತಿ ತೋರಿದ ಯುವಕ

Shivamogga Kuvempu Airport: Shivamogga Airport is named after Rashtrakavi Kuvempu

Comments are closed.