ಸೋಮವಾರ, ಏಪ್ರಿಲ್ 28, 2025
HomekarnatakaShivamogga Yeddyurappa Airport : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಬೇಡ ಎಂದ ಬಿ.ಎಸ್....

Shivamogga Yeddyurappa Airport : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಬೇಡ ಎಂದ ಬಿ.ಎಸ್. ಯಡಿಯೂರಪ್ಪ

- Advertisement -

ಶಿವಮೊಗ್ಗ : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಬರೋ ಕನಸಿನಲ್ಲಿದೆ ಬಿಜೆಪಿ. ಬಿಜೆಪಿಯನ್ನು ಅಧಿಕಾರಕ್ಕೆ ತರೋದ್ರಲ್ಲಿ ದೊಡ್ಡ ಶಕ್ತಿ ಹಾಗೂ ಶ್ರಮ ಮಾಜಿ ಸಿಎಂ ಬಿಎಸ್ವೈ ಯವರದ್ದು. ಹೀಗಾಗಿ ಚುನಾವಣೆಗೂ ಮುನ್ನವೇ ಬಿಎಸ್ವೈರನ್ನು ಮನವೊಲಿಸಿ ಪಕ್ಷ ಸಂಘಟನೆಗೆ ಬಳಸಿಕೊಳ್ಳಲು ಮುಂದಾಗಿರೋ ಬಿಜೆಪಿ ಶಿವಮೊಗ್ಗದಲ್ಲಿ ನಿರ್ಮಾಣವಾಗ್ತಿರೋ ವಿಮಾನ ನಿಲ್ದಾಣಕ್ಕೆ (Shivamogga Yeddyurappa Airport ) ಬಿ.ಎಸ್.ಯಡಿಯೂರಪ್ಪ ಹೆಸರಿಡಲು ಮುಂದಾಗಿತ್ತು. ಆದರೆ ಪಕ್ಷ ಹಾಗೂ ಸರ್ಕಾರದ ಈ ತೀರ್ಮಾನವನ್ನು ಬಿ.ಎಸ್.ಯಡಿಯೂರಪ್ಪ ನಯವಾಗಿ ತಿರಸ್ಕರಿಸಿದ್ದಾರೆ.

ಶಿವಮೊಗ್ಗದ ಜನರ ಬಹುದಿನಗಳ ಕನಸು ವಿಮಾನ ನಿಲ್ದಾಣ. ಈಗ ಈ ಕನಸು ನನಸಾಗುವ ಕಾಲ ಬಂದಿದೆ. ಸೋಗಾನೆಯಲ್ಲಿ ವಿಮಾನ ನಿಲ್ದಾಣ ನಿರ್ಮಿಸಲು ಸರ್ಕಾರ ನಿರ್ಧರಿಸಿದ್ದು, ಇದಕ್ಕೆ ಮಾಜಿಸಿಎಂ ಬಿಎಸ್ವೈ ಹೆಸರಿಡುವುದಾಗಿ ಸರ್ಕಾರ ಘೋಷಿಸಿತ್ತು. ಆದರೆ ಸರ್ಕಾರದ ಈ ತೀರ್ಮಾನಕ್ಕೆ ಹಾಗೂ ತಮಗೆ ನೀಡಲಾಗುತ್ತಿರುವ ಗೌರವಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಿದ್ದವಾಗಿಲ್ಲ. ಹೀಗಾಗಿ ಸರ್ಕಾರದ ನಿರ್ಧಾರವನ್ನು ಬದಲಾಯಿಸುವಂತೆ ಕೋರಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿವರವಾದ ಪತ್ರ ಬರೆದಿದ್ದಾರೆ.

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರನ್ನು ಉದ್ದೇಶಿಸಿ ಪತ್ರ ಬರೆದಿರುವ ಮಾಜಿ ಸಿಎಂ ಬಿಎಸ್ವೈ, ಇತ್ತೀಚಿಗೆ ಕಾಮಗಾರಿ ವೀಕ್ಷಿಸಿ ಕಾಮಗಾರಿ ಪೂರ್ತಿಗೊಳಿಸಲು ಅಗತ್ಯ ಅನುದಾನವನ್ನು ಬಿಡುಗಡೆಗೊಳಿಸುವುದಾಗಿ ಹೇಳಿರುವುದಕ್ಕೆಬಿ.ಎಸ್. ಯಡಿಯೂರಪ್ಪ ಬೊಮ್ಮಾಯಿಯವರನ್ನು ಅಭಿನಂದಿಸಿದ್ದಾರೆ. ಮಾತ್ರವಲ್ಲ, ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಇಡುವ ನಿಮ್ಮ ಪ್ರಸ್ತಾಪಕ್ಕೆ , ಪ್ರೀತಿ ವಿಶ್ವಾಸಕ್ಕೆ ನಾನು ಆಭಾರಿ. ಇದೇ ಪ್ರೀತಿ ವಿಶ್ವಾಸವನ್ನು ತೋರಿದ ಜಿಲ್ಲೆಯ ಶಾಸಕರು, ವಿಧಾನಪರಿಷತ್ ಸದಸ್ಯರು, ಸಂಘ ಸಂಸ್ಥೆಗಳು ಹಾಗೂ ಎಲ್ಲ ಮುಖಂಡರಿಗೂ ಧನ್ಯವಾದ ಎಂದು ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

Shivamogga Yeddyurappa Airport does not need my name Yeddyurappa

ಅಲ್ಲದೇ, ರಾಷ್ಟ್ರದ ಅಭಿವೃದ್ಧಿಗೆ ಸೇವೆ ಸಲ್ಲಿಸಿದ ಅನೇಕ ಮಹನೀಯರು ಹಾಗೂ ದೇಶಭಕ್ತರು ಇದ್ದಾರೆ. ಅವರ ಕೊಡುಗೆಗಳನ್ನು ನೋಡಿದಾಗ ನನ್ನದು ಅಳಿಲು ಸೇವೆ ಮಾತ್ರ . ಅಲ್ಲದೇ ನಾನು ಮಾಡಿದ ಕಾರ್ಯ ನನ್ನನ್ನು ಸತತವಾಗಿ ಬೆಂಬಲಿಸಿದ ಜಿಲ್ಲೆಯ ಜನರಿಗೆ ನಾನು ಮಾಡಿದ ಪುಟ್ಟ ಸೇವೆ ಎಂಬುದು ನನ್ನ ಭಾವನೆ. ಹೀಗಾಗಿ ನೂತನ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಸೂಕ್ತ ಅಲ್ಲ ಎಂಬುದು ನನ್ನ ಭಾವನೆ. ಹೀಗಾಗಿ ನೀವು ಈ ವಿಚಾರವನ್ನು ಸೂಕ್ತ ವೇದಿಕೆಯಲ್ಲಿ ಚರ್ಚಿಸಿ, ಪುನರ್ ಪರಿಶೀಲಿಸಿ ರಾಷ್ಟ್ರದ ನಿರ್ಮಾಣಕ್ಕೆ ಕೊಡುಗೆ ನೀಡಿರೋರ ಹೆಸರನ್ನು ವಿಮಾನ ನಿಲ್ದಾಣಕ್ಕೆ ಇಡೋದು ಸೂಕ್ತ ಎಂದು ಬಿ.ಎಸ್. ಯಡಿಯೂರಪ್ಪ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ : ಆಕ್ರಮ ನೇಮಕಾತಿ ಪ್ರಕರಣದಲ್ಲಿ ಮಹತ್ವದ ಹೇಳಿಕೆ ನೀಡಿದ ಸಿಎಂ ಬೊಮ್ಮಾಯಿ

ಇದನ್ನೂ ಓದಿ : ಶಿವಮೊಗ್ಗದಲ್ಲಿ ಯಡಿಯೂರಪ್ಪ ವಿಮಾನ ನಿಲ್ದಾಣ 2023 ರಿಂದ ಆರಂಭ

Shivamogga Yeddyurappa Airport does not need my name Yeddyurappa

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular