ವಿಜಯಪುರ : ಜ್ಞಾನ ಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ (Siddeshwar Swamiji ) ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ (Holiday announced for schools, colleges) ಘೋಷಿಸಿ ಜಿಲ್ಲಾಧಿಕಾರಿ ವಿಜಯ್ ಮಹಾಂತೇಶ್ ದಾನಮ್ಮ ಆದೇಶ ಹೊರಡಿಸಿದ್ದಾರೆ.
ನಡೆದಾಡುವ ದೇವರು ಎಂಬ ಖ್ಯಾತಿಗೆ ಪಾತ್ರರಾಗಿದ್ದ ವಿಜಯಪುರದ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರು ವಿಧಿವಶರಾಗಿದ್ದಾರೆ.ವಯೋಸಹಜ ಕಾಯಿಲೆಯಿಂದ ಬಳಲುಹಿತ್ತಿದ್ದ ಸಿದ್ದೇಶ್ವರ ಸ್ವಾಮೀಜಿ ಅವರಿಗೆ ವೈದ್ಯರು ಆಶ್ರಮದಲ್ಲೇ ಚಿಕಿತ್ಸೆ ನೀಡುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಲಿಂಗೈಕ್ಯರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಸಿದ್ದೇಶ್ವರ ಸ್ವಾಮೀಜಿ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲು ಖುದ್ದು ಸಿಎಂ ಬಸವರಾಜ್ ಬೊಮ್ಮಾಯಿ ಅವರೇ ಮನವಿ ಮಾಡಿಕೊಂಡಿದ್ದರು. ಆದರೆ ಸ್ವಾಮೀಜಿ ಅವರು ಆಸ್ಪತ್ರೆಗೆ ದಾಖಲಾಗಲು ಮನಸ್ಸು ಮಾಡಿರಲಿಲ್ಲ. ಕಳೆದ ಒಂದು ತಿಂಗಳಿನಿಂದಲೂ ಸ್ವಾಮೀಜಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಆಶ್ರಮದಲ್ಲಿ ವಿಜಯಪುರದ ಬಿಎಲ್ಡಿಇ ಆಸ್ಪತ್ರೆಯ ವೈದ್ಯರ ತಂಡ ಚಿಕಿತ್ಸೆಯನ್ನು ನೀಡಲಾಗುತ್ತಿತ್ತು. ಆದರೆ ಇಂದು ಸಂಜೆ ಆರು ಗಂಟೆಗೆ ಅವರು ವಿಧಿವಶರಾಗಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಿದ್ದೇಶ್ವರ ಸ್ವಾಮೀಜಿ ಅವರ ಅಂತ್ಯಕ್ರಿಯೆಯನ್ನು ಸಕಲ ಸರರಕಾರಿ ಗೌರವದಿಂದ ನೆರವೇರಿಸಲು ಸೂಚನೆಯನ್ನು ನೀಡಿದ್ದು, ನಾಳೆ (ಜ. 3) ಸಂಜೆ 5 ಗಂಟೆ ಆಶ್ರಮದ ಆವರಣದಲ್ಲೇ ಅಂತ್ಯಕ್ರಿಯೆ ಮಾಡಲು ತಿರ್ಮಾನಿಸಲಾಗಿದೆ. ಆಶ್ರಮದಲ್ಲಿ ಬೆಳಗ್ಗೆ 4.30ರವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಾಳೆ(ಜ. 3) ಬೆಳಗ್ಗೆ 6ರಿಂದ ಮಧ್ಯಾಹ್ನ 3 ಗಂಟೆವರೆಗೆ ಸೈನಿಕ ಶಾಲೆಯಲ್ಲಿ ಭಕ್ತರಿಗೆ ಅಂತಿಮ ದರ್ಶನಕ್ಕೆ ಅವಕಾಶ ಮಾಡಲಾಗಿದೆ. ಸೈನಿಕ ಶಾಲೆಯಲ್ಲಿ ಮಧ್ಯಾಹ್ನ 3-4 ಗಂಟೆವರೆಗೆ ಸರ್ಕಾರದ ವತಿಯಿಂದ ಪೂಜ್ಯರಿಗೆ ಸಕಲ ಸರ್ಕಾರಿ ಗೌರವ ಸಲ್ಲಿಕೆ ಮಾಡಲಾಗುವುದು. ಬಳಿಕ ಸಂಜೆ 5 ಗಂಟೆಗೆ ಆಶ್ರಮದ ಆವರಣದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ ಎಂದು ವಿಜಯಪುರ ಡಿಸಿ ವಿಜಯ್ ಮಹಾಂತೇಶ್ ದಾನಮ್ಮನವರ್ ಹೇಳಿದ್ದಾರೆ.
ಭಾರತ ಸರಕಾರ ನೀಡುವ ಅತ್ಯುನ್ನತ ನಾಗರಿಕ ಪ್ರಶಸ್ತಿ ಪದ್ಮಶ್ರೀ ಪ್ರಶಸ್ತಿ ಸಿದ್ದೇಶ್ವರ ಸ್ವಾಮೀಜಿಯವರಿಗೆ ಒಲಿದುಬಂದಿತ್ತು. ಆದರೆ ಎಲ್ಲ ಗೌರವಾಧರಗಳೊಂದಿಗೆ ಈ ಪ್ರಶಸ್ತಿಯನ್ನು ಹಿಂದಿರುಗಿಸಿದರು. ನಾನೊಬ್ಬ ಸರಳ ವ್ಯಕ್ತಿ. ಸಾಮಾನ್ಯ ಜೀವನ ನಡೆಸುತ್ತ, ಆಧ್ಯಾತ್ಮಿಕ ಬೋಧನೆಯ ಮೂಲಕ ಜನರ ಜೀವನ ಉದಾತ್ತಗೊಳಿಸುವುದು ಉದ್ದೇಶ ನನ್ನದು. ಹಾಗಾಗಿ ಪ್ರಶಸ್ತಿಗಳ ಅವಶ್ಯತೆಯು ನನಗಿಲ್ಲ. ಅನ್ಯಥಾ ಭಾವಿಸದಿರಿ ಎಂದು ಹೇಳಿದ್ದರು. ಕರ್ನಾಟಕ ವಿಶ್ವವಿದ್ಯಾನಿಲಯ ಅವರಿಗೆ ಗೌರವ ಡಾಕ್ಟರೇಟ್ ಪ್ರಕಟಿಸಿತ್ತು. ಅದನ್ನೂ ಶ್ರೀಗಳು ಸ್ವೀಕರಿಸಿರಲಿಲ್ಲ. ಹೀಗೆ ತಮಗೆ ಸಂದ ಎಷ್ಟೋ ಪ್ರಶಸ್ತಿ ಮತ್ತು ಪುರಸ್ಕಾರಗಳನ್ನು ಅವರು ವಿನಮೃವಾಗಿಯೇ ನಿರಾಕರಿಸಿದ್ದರು.
ಇದನ್ನೂ ಓದಿ : Siddeshwara Swamiji passes away : ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯ
ಇದನ್ನೂ ಓದಿ : Veera Kambal movie : “ವೀರ ಕಂಬಳ” ಸಿನಿಮಾಕ್ಕೆ ಬಣ್ಣ ಹಚ್ಚಿದ ಡಾ. ವೀರೇಂದ್ರ ಹೆಗ್ಗಡೆ : ಪೋಟೋ ಸಖತ್ ವೈರಲ್
Siddeshwar Swamiji Passed away Holiday announced for schools colleges