ಮಂಗಳವಾರ, ಏಪ್ರಿಲ್ 29, 2025
HomekarnatakaSiddhu Nija Kanasu : ಸಿದ್ಧು ನಿಜ ಕನಸುಗಳು ಪುಸ್ತಕ ಬಿಡುಗಡೆ : ಹೊಸ ವಿವಾದಕ್ಕೆ...

Siddhu Nija Kanasu : ಸಿದ್ಧು ನಿಜ ಕನಸುಗಳು ಪುಸ್ತಕ ಬಿಡುಗಡೆ : ಹೊಸ ವಿವಾದಕ್ಕೆ ಮುನ್ನುಡಿ ಬರೆದ ಬಿಜೆಪಿ

- Advertisement -

ಬೆಂಗಳೂರು : Siddhu Nija Kanasu : ಸಿದ್ಧರಾಮಯ್ಯ ಕೋಲಾರದಲ್ಲಿ ಕ್ಷೇತ್ರ ಘೋಷಣೆಯೊಂದಿಗೆ ಚುನಾವಣಾ ಮತಸಮರಕ್ಕೆ ಸಜ್ಜಾಗುತ್ತಿದ್ದರೇ, ಇತ್ತ ಬಿಜೆಪಿ ಸಿದ್ದರಾಮಯ್ಯ ಅವರಿಗೆ ರಾಜಕೀಯವಾಗಿ ತಿರುಗೇಟು ನೀಡೋ ಉದ್ದೇಶದಿಂದ ಸಿದ್ಧು ನಿಜ ಕನಸುಗಳು ಎಂಬ ಪುಸ್ತಕ ಬಿಡುಗಡೆಗೆ ಸಜ್ಜಾಗಿದೆ. ಬಿಜೆಪಿಯ ಈ ಪುಸ್ತಕ ಬಿಡುಗಡೆ ವಿರುದ್ಧ ಕಾಂಗ್ರೆಸ್ ತಿರುಗಿ ಬಿದ್ದಿದ್ದು, ಇದು ಸಿದ್ಧು ತೇಜೋವಧೆಯ ಪ್ರಯತ್ನ ಎಂದು ಆರೋಪಿಸಿ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಮಾಜಿ ಸಿಎಂ ಸಿದ್ಧರಾಮಯ್ಯ ಸಾಕಷ್ಟು ರಾಜಕೀಯ ಲೆಕ್ಕಾಚಾರಸ ಬಳಿಕ ಸೋಮವಾರ ಕೋಲಾರದಲ್ಲಿ ತಮ್ಮ ಸ್ಪರ್ಧೆಯ ಕ್ಷೇತ್ರ ಘೋಷಿಸಿದ್ದಾರೆ. ಇದರ ಬೆನ್ನಲ್ಲೇ ಬಿಜೆಪಿ ಸಿದ್ಧು ನಿಜ‌ಕನಸುಗಳು ಎಂಬ ಪುಸ್ತಕ ಬಿಡುಗಡೆಗೆ ಸಜ್ಜಾಗಿದೆ.

ಬೆಂಗಳೂರಿನ ಪುರಭವನದಲ್ಲಿ ಸೋಮವಾರ ಮಧ್ಯಾಹ್ನ 3 ಗಂಟೆಗೆ ಸಿದ್ದು ನಿಜ ಕನಸುಗಳು ಎಂಬ ಪುಸ್ತಕ ಬಿಡುಗಡೆಗೊಳ್ಳಲಿದೆ.ಪುರಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಡಾ ಅಶ್ವತ್ಥ ನಾರಾಯಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಪುಸ್ತಕವನ್ನು ಬಿಡುಗಡೆ ಮಾಡಲಿದ್ದಾರೆ.ಇನ್ನೂ ಈ ಕಾರ್ಯಕ್ರಮಕ್ಕೆ ಬಿಜೆಪಿ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಣಸ್ವಾಮಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದು, ಬರಹಗಾರ ರೋಹಿತ್ ಚಕ್ರತೀರ್ಥ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.

ಇನ್ನೊಂದೆಡೆ ಸಿದ್ದು ಹೆಸರಿನಲ್ಲಿ ಬಿಜೆಪಿ ಬೆಂಬಲಿತ ಬರಹಗಾರ ಕಡೆಯಿಂದ ವಿವಾದಾತ್ಮಕ ಪುಸ್ತಕ ಬಿಡುಗಡೆ ಆಗುತ್ತಿರೋದು ಕಾಂಗ್ರೆಸ್ ಕೆಂಗಣ್ಣಿಗೆ ಗುರಿಯಾಗಿದ್ದು, ಪುಸ್ತಕ ಬಿಡುಗಡೆಗೆ ತಡೆ ನೀಡುವಂತೆ ಒತ್ತಾಯಿಸಿ ಕೆಪಿಸಿಸಿ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್ ಎಸ್ ಜೆ ಪಾರ್ಕ್ ಪೊಲೀಸರ ಮೊರೆ ಹೋಗಿದ್ದಾರೆ.

ಈ ಬಗ್ಗೆ ಎಸ್ .ಜೆ.ಪಾರ್ಕ್ ಪೊಲೀಸ್ ಠಾಣೆಯಲ್ಲಿ ಸೂರ್ಯ ಮುಕುಂದ್ ರಾಜ್ ದೂರು ದಾಖಲಿಸಿದ್ದು, ಸಾಮರಸ್ಯ ಕದಡುವ ಹುನ್ನಾರದಿಂದ ಹಾಗೂ ಸಿದ್ಧರಾಮಯ್ಯನವರ ಬಗ್ಗೆ ಕಪೋಲಕಲ್ಪಿತ. ತೇಜೋವಧೆ ಉಳ್ಳ ಪುಸ್ತಕ ಬಿಡುಗಡೆ ಮಾಡಲಾಗುತ್ತಿದೆ. ಇದರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗಲಿದೆ ಎಂದು ದೂರಿನಲ್ಲಿ ತಿಳಿಸಿರುವ ಸೂರ್ಯ ಮುಕುಂದರಾಜ್ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಅವಕಾಶ ನೀಡದಂತೆ ಮನವಿ ಮಾಡಿದ್ದಾರೆ.

ಅಂದಿನ ಟಿಪ್ಪುವೇ ಇಂದಿನ ಸಿದ್ಧ ರಾಮಯ್ಯ ಎಂಬರ್ಥದಲ್ಲಿ ಅವಹೇಳನಕಾರಿಯಾಗಿ ಸಿದ್ಧರಾಮಯ್ಯನವರ ಬಗ್ಗೆ ಬರಹಗಳನ್ನು ಪುಸ್ತಕ ಒಳಗೊಂಡಿದೆ ಎಂದು ಕಾಂಗ್ರೆಸ್ ಆರೋಪಿಸಿದೆ‌. ಇದಕ್ಕೆ ಪೂರಕ ಎಂಬಂತೆ ಸಿದ್ಧು ನಿಜ ಕನಸುಗಳು ಪುಸ್ತಕದಲ್ಲಿ ಸಿದ್ಧರಾಮಯ್ಯನವರ ಕೈಯಲ್ಲಿ ಖಡ್ಗ ಹಿಡಿಸಿ ಕೆಟ್ಟದಾಗಿ ಚಿತ್ರಿಸಲಾಗಿದೆ ಎಂದು ಕೈಪಡೆ ಆರೋಪಿಸಿದೆ. ಒಟ್ಟಿನಲ್ಲಿ ನಾಳೆ ಸಿದ್ಧು ನಿಜ‌ಕನಸುಗಳು ಪುಸ್ತಕ ಮತ್ತೆ ಕೈ ಕಮಲ ಯುದ್ಧಕ್ಕೆ ನಾಂದಿ ಹಾಡೋದು ಬಹುತೇಕ ಖಚಿತ ಎನ್ನಲಾಗ್ತಿದೆ.

ಇದನ್ನೂ ಓದಿ : ಸಾಲ‌ಮನ್ನಾ ಹೆಸರಲ್ಲಿ ಸಿದ್ಧವಾಗ್ತಿದೆ ಭಾವುಕ ಅಸ್ತ್ರ : ರೈತರಿಗೆ ಪತ್ರ ಬರಿತಾರಂತೆ ಎಚ್ ಡಿಕೆ

ಇದನ್ನೂ ಓದಿ : Congress New formula : 2 ಬಂಟ, 2 ಬಿಲ್ಲವ, 2 ಮುಸ್ಲೀಂ,1 ಕ್ರಿಶ್ಚಿಯನ್ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಹೊಸ ಸೂತ್ರ

Siddhu Nija Kanasu book release BJP writes prelude to new controversy

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular