ಬೆಂಗಳೂರು : ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ (SM Krishna Death) ಅವರು ನಿಧನರಾಗಿದ್ದಾರೆ. ಬೆಂಗಳೂರಿನ ಸದಾಶಿವ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಬೆಳಗಿನ ಜಾವ 2.30 ರ ಸುಮಾರಿಗೆ ಎಸ್‌ಎಂ ಕೃಷ್ಣ ಅವರು ಬಾರದ ಲೋಕಕ್ಕೆ ಪಯಣಿಸಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿದ್ದು, ವಯೋ ಸಹಜ ಆರೋಗ್ಯ ಸಮಸ್ಯೆಯಿಂದ ಅವರು ಬಳಲುತ್ತಿದ್ದರು.
ಎಸ್‌ಎಂ ಕೃಷ್ಣ ಅವರಿಗೆ ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿತ್ತು. ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿರಲಿಲ್ಲ. ಎಸ್ಎಂ ಕೃಷ್ಣ ಅವರ ಪಾರ್ಥಿವ ಶರೀರವನ್ನು ಸದಾಶಿವ ನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರೀಯೆ ನಡೆಯಲಿದೆ.
ಮಂಡ್ಯ ಜಿಲ್ಲೆಯ ಮದ್ದೂರಿನ ಸೋಮಹಳ್ಳಿಯಲ್ಲಿ 1932ರ ಮೇ 1 ರಂದು ಜನಿಸಿದ ಸೋಮನಹಳ್ಳಿ ಮಲ್ಲಯ್ಯ ಕೃಷ್ಣ ಅವರು ತಮ್ಮ ಹುಟ್ಟೂರಿನಲ್ಲಿಯೇ ಶಿಕ್ಷಣವನ್ನು ಪೂರೈಸಿ ನಂತರ ಮೈಸೂರಿನ ಶ್ರೀ ರಾಮಕೃಷ್ಣ ವಿದ್ಯಾಶಾಲೆಯಲ್ಲಿ ಪ್ರೌಢಶಾಲಾ ಶಿಕ್ಷಣ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನ ಪದವಿ ಶಿಕ್ಷಣವನ್ನು ಪೂರೈಸಿದ್ದರು. ನಂತರ ಮೈಸೂರು ವಿವಿಯ ಕಾನೂನು ಪದವಿಯನ್ನು ಪಡೆದುಕೊಂಡರು. ಅಷ್ಟೇ ಅಲ್ಲದೇ ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನಲ್ಲಿ ಇರುವ ಸದರ್ನ್ ಮೆಥೋಡಿಸ್ಟ್ ವಿಶ್ವವಿದ್ಯಾಲಯದಲ್ಲಿ ಹಾಗೂ ವಾಷಿಂಗ್ಟನ್ ಡಿಸಿಯ ಜಾರ್ಜ್ ವಾಷಿಂಗ್ಟನ್ ವಿವಿಯಲ್ಲಿ ಪದವಿಯಲ್ಲಿಯನ್ನು ಪಡೆದಿದ್ದಾರೆ.
IPL 2025 Unsold Players: ಐಪಿಎಲ್ ಮೆಗಾ ಹರಾಜಿನಲ್ಲಿ ಮಾರಾಟವಾಗದ ಟಾಪ್ ಆಟಗಾರರು..!
ಮದ್ದೂರು ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಲ್ಲಿ ಕಣಕ್ಕೆ ಇಳಿಯುವ ಮೂಲಕ ಗೆಲುವು ಸಾಧಿಸುವ ಮೂಲಕ ರಾಜ್ಯ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದರು. ಆದರೆ ಪ್ರಜಾ ಸೋಷಿಯಲಿಸ್ಟ್ ಪಕ್ಷ ಸೇರ್ಪಡೆ ಆಗಿದ್ದ ಕೃಷ್ಣ ಅವರು ಮುಂದಿನ ಚುನಾವಣೆಯಲ್ಲಿ ಸೋಲಿನ ರುಚಿ ಕಂಡಿದ್ದರು. ಆದರೆ ೧೯೬೮ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಗೆಲವು ಸಾಧಿಸುವ ಮೂಲಕ ರಾಷ್ಟ್ರ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಸತತ ಮೂರು ಬಾರಿ ಮಂಡ್ಯ ಸಂಸದರಾಗಿ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ : Tirupati Tirumala Photo shoot Contravecy : ತಿರುಪತಿ ತಿರುಮಲದಲ್ಲಿ ಫೋಟೋ ಶೂಟ್ : ವಂಶಿನಾಥ್ ವಿರುದ್ದ ಕ್ರಮ
ಕೆಪಿಸಿಸಿ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಕೈಗೊಂಡ ಪಾಂಚಜನ್ಯ ಯಾತ್ರೆ ಕರ್ನಾಟಕದ ಕಾಂಗ್ರೆಸ್ ಪಕ್ಷಕ್ಕೆ ಹೊಸ ಚೈತನ್ಯವನ್ನು ತುಂಬಿತ್ತು. ಸಕ್ರೀಯ ರಾಜಕಾರಣದಿಂದ ದೂರವಾದ ನಂತರ ಮಹಾರಾಷ್ಟ್ರದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದಾರೆ. ಇನ್ನು ಪ್ರಧಾನಿ ಮನಮೋಹನ್ ಸಿಂಗ್ ಸಂಪುಟದಲ್ಲಿ ಸಚಿವರಾಗಿಯೂ ಸೇವೆ ಸಲ್ಲಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 2017 ರಲ್ಲಿ ಕಾಂಗ್ರೆಸ್ ಪಕ್ಷವನ್ನು ತೊರೆದ ಎಸ್ಎಂ ಕೃಷ್ಣ ಅವರು ಬಿಜೆಪಿ ಪಕ್ಷವನ್ನು ಸೇರ್ಪಡೆ ಆಗಿದ್ದರು. ಆದರೆ ಅನಾರೋಗ್ಯ ಕಾರಣದಿಂದ ಅವರು ಬಿಜೆಪಿಯಲ್ಲಿ ಉನ್ನತ ಹುದ್ದೆಯನ್ನು ಪಡೆದಿರಲಿಲ್ಲ. ಅಷ್ಟೇ ಅಲಲ್ದೇ ಕಳೆದ ವರ್ಷ ಅವರು ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದರು.
SM Krishna Death: Karnataka Chief Minister Somanahalli Mallaiah Krishna passed away, Kananda news