ಯಾದಗಿರಿ : ಹಾಸ್ಟೆಲ್ ವಿದ್ಯಾರ್ಥಿಗಳು ಸೇವನೆ ಮಾಡುವ ಉಪಹಾರದಲ್ಲಿ ಹಾವಿನ ತಲೆ ( Snake head breakfast) ಪತ್ತೆಯಾಗಿದ್ದು, ಸುಮಾರು 50 ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ ಗೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಅಬ್ಬೆ ತುಮಕೂರಿನ ವಿಶ್ವರಾದ್ಯ ವಿದ್ಯಾವರ್ಧಕ ವಸತಿಯಲ್ಲಿ ಶಾಲೆಯಲ್ಲಿ ನಡೆದಿದೆ. ವಿದ್ಯಾರ್ಥಿಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ.
ಹಾಸ್ಟೆಲ್‌ನಲ್ಲಿಂದು ಉಪಹಾರಕ್ಕಾಗಿ ಉಪ್ಪಿಟ್ಟನ್ನು ಮಾಡಲಾಗಿತ್ತು. ಆದರೆ ಬಹುತೇಕ ವಿದ್ಯಾರ್ಥಿಗಳು ಉಪ್ಪಿಟ್ಟು ಸೇವನೆ ಮಾಡಿದ್ದಾರೆ. ಆದರೆ ಸಿದ್ದಪ್ಪ ಹಾಗೂ ರಾಹುಲ್ ಎಂಬ ವಿದ್ಯಾರ್ಥಿಗಳು ಉಪ್ಪಿಟ್ಟು ತಿನ್ನುವ ವೇಳೆಯಲ್ಲಿ ಹಾವಿನ ತಲೆ ಕಾಣಿಸಿಕೊಂಡಿದೆ. ಕೂಡಲೇ ವಿದ್ಯಾರ್ಥಿಗಳು ಹಾಸ್ಟೆಲ್ ಸಿಬ್ಬಂದಿಗಳ ಗಮನಕ್ಕೆ ತಂದಿದ್ದಾರೆ.
ಇನ್ನು ಉಪ್ಪಿಟ್ಟು ಸೇವನೆ ಮಾಡಿದ ಕೆಲವೇ ಹೊತ್ತಲ್ಲಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಕೂಡಲೇ 50 ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ನೀಡಲಾಗಿದೆ. ಎಲ್ಲಾ ವಿದ್ಯಾರ್ಥಿಗಳನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದ್ದು ಯಾವುದೇ ವಿದ್ಯಾರ್ಥಿಗಳಿಗೆ ಗಂಭೀರವಾದ ಆರೋಗ್ಯ ಸಮಸ್ಯೆ ಕಂಡುಬಂದಿಲ್ಲ ಎಂದು ವೈದ್ಯರು ಯಾದಗಿರಿ ತಾಲೂಕು ವೈದ್ಯಾಧಿಕಾರಿ ಹನುಮಂತ ರೆಡ್ಡಿ ಅವರು ತಿಳಿಸಿದ್ದಾರೆ.
ಎಲ್ಲಾ ವಿದ್ಯಾರ್ಥಿಗಳ ಮೇಲೆಯೂ ನಿಗಾ ಇರಿಸಲಾಗಿದೆ. ಸಂಜೆಯ ವರೆಗೆ ಯಾವುದೇ ಸಮಸ್ಯೆಗಳು ಕಂಡು ಬಾರದೇ ಇದ್ರೆ ವಿದ್ಯಾರ್ಥಿಗಳನ್ನು ಹಾಸ್ಟೆಲ್‌ಗೆ ಕಳುಹಿಸುವುದಾಗಿ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಇನ್ನು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಸುದ್ದಿ ತಿಳಿಯುತ್ತಲೇ ಪೋಷಕರು ಆಸ್ಪತ್ರೆಗೆ ದೌಡಾಯಿಸಿದ್ದಾರೆ. ವಸತಿ ಶಾಲೆ ನಿರ್ವಹಣೆ ಮಾಡುತ್ತಿದ್ದ ಟ್ರಸ್ಟ್ ವಿರುದ್ದ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ಯಾದಗಿರಿ ಶಾಲೆ ವೆಂಕಟ ರೆಡ್ಡಿ ಮುದ್ನಾಳ್ ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ವೈದ್ಯರಿಂದ ಮಾಹಿತಿಯನ್ನು ಪಡೆದುಕೊಂಡಿದ್ದೇನೆ. ಎಲ್ಲಾ ವಿದ್ಯಾರ್ಥಿಗಳು ಆರೋಗ್ಯವಾಗಿಯೇ ಇದ್ದಾರೆ. ಘಟನೆಗೆ ಕಾರಣವನ್ನು ತಿಳಿಯಲಾಗುತ್ತಿದ್ದು, ತಪ್ಪಿತಸ್ಥರ ವಿರುದ್ದ ಕ್ರಮಕೈಗೊಳ್ಳಲಾಗುವುದು ಎಂದಿದ್ದಾರೆ.
ಇದನ್ನೂ ಓದಿ : School Fees : ಶೇ.15 ರಷ್ಟು ಬೋಧನಾ ಶುಲ್ಕ ವಾಪಾಸ್ ಮಾಡಿ : ಖಾಸಗಿ ಶಾಲೆಗಳಿಗೆ ರಾಜ್ಯ ಸರಕಾರದ ಆದೇಶ
ಇದನ್ನೂ ಓದಿ : ದ್ವಿತೀಯ PUC ಪರೀಕ್ಷೆ ಮುಂದೂಡಿಕೆ : ಡಿ.13 ರಿಂದ ರಾಜ್ಯಾದ್ಯಂತ ಏಕಕಕಾಲದಲ್ಲಿ ಪರೀಕ್ಷೆ
( Snake head found at breakfast: more than 50 hostel students sick in Yadagiri )