ಬೆಳ್ತಂಗಡಿ : ಸೌಜನ್ಯ (soujanya Case) ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ಕಾರ್ಯಕರ್ತರ ನೇತೃತ್ವದಲ್ಲಿಂದು ಸೌಜನ್ಯ ತಾಯಿ ಕುಸುಮಾವತಿ ಅವರು ಧರ್ಮಸ್ಥಳದ ಅಣ್ಣಪ್ಪಸ್ವಾಮಿ ಬೆಟ್ಟದ ಮುಂಭಾಗದಲ್ಲಿ ಮಗಳ ಸಾವಿಗೆ ಕಣ್ಣೀರಿಟ್ಟು ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿದ್ದಾರೆ. ಇದರ ಬೆನ್ನಲ್ಲೇ ಸೌಜನ್ಯ ತಾಯಿ ಆರೋಪ ಮಾಡಿರುವ ಉದಯ್ ಜೈನ್, ಮಲ್ಲಿಕ್ ಜೈನ್ ಹಾಗೂ ಧೀರಜ್ ಕೆಲ್ಲಗುಡಿ ಕೂಡ ಅಣ್ಣಪ್ಪ ಗುಡಿಯ ಮುಂಭಾಗದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಇಂದು ಬೆಳಗ್ಗೆ ವಿಶ್ವ ಹಿಂದೂ ಪರಿಷತ್, ಭಜರಂಗಳದ ವತಿಯಿಂದ ನೇತ್ರಾವತಿ ನದಿಯಿಂದ ಧರ್ಮಸ್ಥಳದ ಅಣ್ಣಪ್ಪಸ್ವಾಮಿ ಬೆಟ್ಟದ ವರೆಗೂ ಪಾದಯಾತ್ರೆ ಹಾಗೂ ಸಾಮೂಹಿಕ ಪ್ರಾರ್ಥನೆ ನಡೆಯಿತು. ಭಜರಂಗಳದ ಹಾಗೂ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರ ಜೊತೆಗೆ ಸೌಜನ್ಯ ತಾಯಿ ಕುಸುಮಾವತಿ ಅವರು ಕೂಡ ಪಾದಯಾತ್ರೆ ನಡೆಸಿ ಅಣ್ಣಪ್ಪಸ್ವಾಮಿ ಬೆಟ್ಟಕ್ಕೆ ತೆರಳಿದ್ದಾರೆ.

ವಿಶ್ವ ಹಿಂದೂ ಪರಿಷತ್ ಮುಖಂಡ ಮುರಳಿ ಕೃಷ್ಣ ಹಂಸತಡ್ಕ ಅವರು ಸಂಘಟನೆಯ ಪರವಾಗಿ ಪ್ರಾರ್ಥನೆಯನ್ನು ಸಲ್ಲಿಸಿದ್ದಾರೆ. ಕಳೆದ 11 ವರ್ಷಗಳಿಂದಲೂ ಸೌಜನ್ಯ ಕುಟುಂಬಸ್ಥರು ಹೋರಾಟ ನಡೆಸುತ್ತಿದ್ದಾರೆ. ನೈಜ ಆರೋಪಿಗಳು ಯಾರು ಅನ್ನೋದನ್ನು ತಿಳಿಸುವುದರ ಜೊತೆಗೆ ಆರೋಪಿಗಳಿಗೆ ದೇವರೇ ಶಿಕ್ಷೆಯನ್ನು ನೀಡಬೇಕೆಂದು ಪ್ರಾರ್ಥನೆ ಯನ್ನು ಸಲ್ಲಿಸಿದ್ದಾರೆ. ಅಣ್ಣಪ್ಪಸ್ವಾಮಿ ಗುಡಿಯ ಮುಂದೆ ನಿಂತ ಸೌಜನ್ಯ ತಾಯಿ ಕುಸುಮಾವತಿಯಲ್ಲಿ ಕಣ್ಣೀರು ಸುರಿಸಿದ್ದಾರೆ.

ಕುಸುಮಾವತಿ ಅವರು ಪ್ರಾರ್ಥನೆ ಸಲ್ಲಿಸಿದ ಬೆನ್ನಲ್ಲೇ ಮಲ್ಲಿಕ್ ಜೈನ್, ಉದಯ್ ಜೈನ್ ಹಾಗೂ ಧೀರಜ್ ಕಲ್ಲಗುಡಿ ಕೂಡ ಪ್ರಾರ್ಥನೆಯನ್ನು ಸಲ್ಲಿಸಿದ್ದಾರೆ. ಧರ್ಮಸ್ಥಳದಲ್ಲಿ ದುರ್ಮರಣ ಸಂಭವಿಸಿದ್ದು, ಈ ಪ್ರಕರಣದಲ್ಲಿ ನಮ್ಮ ಯಾವುದೇ ಪಾತ್ರವಿಲ್ಲ. ನಮ್ಮ ಹೆಸರನ್ನು ಅನಾವಶ್ಯಕವಾಗಿ ಎಳೆದು ತರಲಾಗಿದೆ. ನಮ್ಮ ಹೆಸರನ್ನು ಎಳೆದು ತರುವವರಿಗೆ ಶಿಕ್ಷೆಯಾಗಲಿ ಎಂದು ಪ್ರಾರ್ಥಿಸಿ, ಕಾಣಿಸಿ ಸಲ್ಲಿಸಿದ್ದಾರೆ. ಅಣ್ಣಪ್ಪ ಸ್ವಾಮಿಯ ಗುಡಿಯ ಮುಂಭಾಗದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಹಿಂದೂ ಬಾಂಧವರು ಪಾಲ್ಗೊಂಡಿದ್ದರು. ಅಹಿತಕರ ಘಟನೆಗಳು ನಡೆಯದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ರಿಶ್ಯಂತ್ ಅವರು ಖುದ್ದು ಭೇಟಿ ನೀಡಿ ವಿಶೇಷ ಪೊಲೀಸ್ ಭದ್ರತೆಯನ್ನು ಒದಗಿಸಿದ್ದಾರೆ.
ಇದನ್ನೂ ಓದಿ : Gruha Arogya : ಗೃಹ ಆರೋಗ್ಯ: ಗೃಹಜ್ಯೋತಿ, ಗೃಹಲಕ್ಷ್ಮೀ ಬೆನ್ನಲ್ಲೇ ಮತ್ತೊಂದು ಹೊಸ ಯೋಜನೆ ಘೋಷಿಸಿದ ರಾಜ್ಯ ಸರಕಾರ
ಇನ್ನೊಂದೆಡೆ ಬೆಳ್ತಂಗಡಿಯ ತಾಲೂಕು ಕಚೇರಿಯ ಮುಂಭಾಗದಲ್ಲಿ ಸೌಜನ್ಯ ಸಾವಿನ ತನಿಖೆಗಾಗಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಬಿಜೆಪಿಯ ಶಾಸಕರು ಕೂಡ ಸಭೆಯಲ್ಲಿ ಪಾಲ್ಗೊಂಡಿದ್ದರು. ಸೌಜನ್ಯ ಪ್ರಕರಣವನ್ನು ಅಂದು ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರಕಾರವೇ ಸಿಬಿಐಗೆ ವಹಿಸಿತ್ತು. ಅಲ್ಲದೇ ಸಿಬಿಐ ಸಂಸ್ಥೆಯ ಮೇಲೆ ನಮಗೆ ನಂಬಿಕೆಯಿದೆ. ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ವಹಿಸುವಂತೆ ರಾಜ್ಯ ಸರಕಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಆಗ್ರಹಿಸಿದ್ದಾರೆ.
ಇದನ್ನೂ ಓದಿ : ಸೋಲಿನಲ್ಲೇ ಕೊನೆಯಾಯ್ತಾ ನಿಖಿಲ್ ಕುಮಾರಸ್ವಾಮಿ ರಾಜಕೀಯ ಭವಿಷ್ಯ : ಅಂತಿಮ ನಿರ್ಧಾರ ಪ್ರಕಟಿಸಿದ ಎಚ್‌ಡಿಕೆ
ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕಾರ್ಕಳ ಶಾಸಕ ಸುನಿಲ್ ಕುಮಾರ್, ಕುಂದಾಪುರ ಶಾಸಕ ಕಿರಣ್ ಕೊಡ್ಗಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮೂಡಬಿದರೆ ಶಾಸಕ ಉಮಾನಾಥ ಕೋಟ್ಯಾನ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಬಿಜೆಪಿ ಮುಖಂಡರಾದ ಉದಯ್ ಕುಮಾರ್ ಶೆಟ್ಟಿ, ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮುಂತಾದವರು ಉಪಸ್ಥಿತರಿದ್ದರು.