Raghaveshwara Swamiji Big Relief : ರಾಘವೇಶ್ವರ ಸ್ವಾಮೀಜಿಗೆ ಬಿಗ್‌ ರಿಲೀಫ್‌ : ಆರೋಪ ಮುಕ್ತಗೊಳಿಸಿದ ಹೈಕೋರ್ಟ್‌

ಬೆಂಗಳೂರು : ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸನಗರದ ಶ್ರೀರಾಮಚಂದ್ರಾಪುರ ಮಠದ ( Sri Ramachandrapura Mutt ) ರಾಘವೇಶ್ವರ ಭಾರತಿತೀರ್ಥ ಸ್ವಾಮೀಜಿ (Raghaveshwara Swamiji Big Relief) ಅವರಿಗೆ ಹೈಕೋರ್ಟ್‌ ಬಿಗ್‌ ರಿಲೀಫ್‌ ಕೊಟ್ಟಿದೆ. ಸ್ವಾಮೀಜಿ ಅವರ ವಿರುದ್ದ ಸಲ್ಲಿಕೆಯಾಗಿದ್ದ ಪ್ರಕರಣದ ಕುರಿತು ಸೆಷನ್ಸ್‌ ನ್ಯಾಯಾಲಯ ನೀಡಿದ ತೀರ್ಪನ್ನು ಎತ್ತಿ ಹಿಡಿದಿರುವ ಹೈಕೋರ್ಟ್‌ ರಾಘವೇಶ್ವರ ಸ್ವಾಮೀಜಿ ಅವರನ್ನು ಆರೋಪ ಮುಕ್ತರನ್ನಾಗಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಹೊಸನಗರದ ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ತೀರ್ಥ ಸ್ವಾಮೀಜಿ ಅವರ ವಿರುದ್ದ ರಾಮಕಥಾ ಗಾಯಕಿ ಓರ್ವರು ದಾಖಲಿಸಿದ್ದ ಅತ್ಯಾಚಾರ ಪ್ರಕರಣದ ವಿಚಾರಣೆಯನ್ನು ನಡೆಸಿದ್ದ ಸೆಷನ್ಸ್‌ ನ್ಯಾಯಾಲಯ ಸ್ವಾಮೀಜಿ ಅವರನ್ನು ಆರೋಪ ಮುಕ್ತಗೊಳಿಸಿ ಆದೇಶ ಹೊರಡಿಸಿತ್ತು. ಅಲ್ಲದೇ ಸ್ವಾಮೀಜಿ ವಿರುದ್ದದ ಅತ್ಯಾಚಾರ ಆರೋಪ ಸಾಬೀತುಪಡಿಸಲು ಯಾವುದೇ ಸೂಕ್ತ ಸಾಕ್ಷಾಧಾರಗಳಿಲ್ಲ. ಅಲ್ಲದೇ ತನಿಖೆ ನಡೆಸಿರುವ ಸಿಐಡಿ ಪೊಲೀಸರು ಸಲ್ಲಿಸಿರುವ ಆರೋಪ ಪಟ್ಟಿಯಲ್ಲೂ ಆರೋಪ ಸಾಬೀತುಪಡಿಸುವಂತಹ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಸೆಷನ್ಸ್‌ ನ್ಯಾಯಾಲಯ ಅಭಿಪ್ರಾಯಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಅತ್ಯಾಚಾರ ಪ್ರಕರಣವನ್ನು ನ್ಯಾಯಾಲಯ ರದ್ದು ಪಡಿಸಿತ್ತು.

ಈ ಹಿನ್ನೆಲೆಯಲ್ಲಿ ಸೆಷನ್ಸ್‌ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಗಾಯಕಿ ಹಾಗೂ ಸಿಐಡಿ ಹೈಕೋರ್ಟ್‌ ಮೊರೆ ಹೋಗಿದ್ದರು. ಇದೀಗ ಎರಡು ಪ್ರತ್ಯೇಕ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆಯನ್ನು ನಡೆಸಿರುವ ಹೈಕೋರ್ಟ್‌ ಸೆಷನ್ಸ್‌ ಕೋರ್ಟ್‌ ನೀಡಿರುವ ಆದೇಶವನ್ನು ಎತ್ತಿ ಹಿಡಿದಿದೆ. ಸೆಷನ್ಸ್‌ ನ್ಯಾಯಾಲಯ ನೀಡಿರುವ ತೀರ್ಪನಲ್ಲಿ ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ. ಪ್ರಕರಣದ ವಿಚಾರಣೆಯನ್ನು ನಡೆಸಿರುವ ನ್ಯಾಯಮೂರ್ತಿ ವಿ.ಶ್ರೀಷಾನಂದ ಅವರಿದ್ದ ಏಕಸದಸ್ಯ ಪೀಠ ಈ ಮಹತ್ವದ ತೀರ್ಪು ನೀಡಿದೆ. ಈ ಮೂಲಕ ರಾಘವೇಶ್ವರ ಸ್ವಾಮೀಜಿ ಅವರಿಗೆ ಹೈಕೋರ್ಟ್‌ ಬಿಗ್‌ ರಿಲೀಫ್‌ ನೀಡಿದೆ.

೨೦೧೦ರಲ್ಲಿ ರಾಮಚಂದ್ರಾಪುರ ಮಠದ ರಾಮಕಥಾ ಕಾರ್ಯಕ್ರಮಕ್ಕೆ ಸೇರ್ಪಡೆಗೊಂಡಿದ್ದ ಗಾಯಕಿಯ ಮೇಲೆ ಸ್ವಾಮೀಜಿ ಅವರು ಅತ್ಯಾಚಾರವೆಸಗಿದ್ದಾರೆ ಎಂದ ಆರೋಪ ಕೇಳಿಬಂದಿತ್ತು. ರಾಮಕಥಾ ನಡೆದಿದ್ದ ಸುಮಾರು ೧೬೦ ಕಡೆಗಳಲ್ಲಿ ತನ್ನ ಮೇಲೆ ಅತ್ಯಾಚಾರ ನಡೆಸಲಾಗಿದೆ ಎಂದು ಹೇಳಲಾಗಿತ್ತು. ಈ ಕುರಿತು ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಸಿಐಡಿ ಅಧಿಕಾರಿಗಳು ಸುದೀರ್ಘ ಅವಧಿಯ ವರೆಗೆ ತನಿಖೆಯನ್ನು ನಡೆಸಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದ್ದರು. ಇನ್ನೊಂದೆಡೆಯಲ್ಲಿ ಮಠದ ಭಕ್ತೆಯೋರ್ವರು ಕೂಡ ಸ್ವಾಮೀಜಿ ವಿರುದ್ದ ಅತ್ಯಾಚಾರದ ಆರೋಪ ಮಾಡಿದ್ದರು. ತಾನು ಬಾಲಕಿಯಾಗಿದ್ದ ಸಂದರ್ಭದಲ್ಲಿ ತನ್ನ ಮೇಲೆ ಸ್ವಾಮೀಜಿ ಹಲವು ಬಾರಿ ಅತ್ಯಾಚಾರ ನಡೆಸಿದ್ದಾರೆ ಎಂದು ಗಿರಿನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಸ್ವಾಮೀಜಿ ಸೇರಿದಂತೆ ಒಟ್ಟು ಏಳು ಜನರ ವಿರುದ್ದ ದೋಷಾರೋಪ ಪಟ್ಟಿಯನ್ನು ಸಲ್ಲಿಕೆ ಮಾಡಿದ್ದರು. ರಾಘವೇಶ್ವರ ಭಾರತೀ ಸ್ವಾಮೀಜಿ ಅವರ ವಿರುದ್ದ ಕೇಳಿಬಂದಿರುವ ಅತ್ಯಾಚಾರ ಆರೋಪ ಪ್ರಕರಣ ದೇಶದಾದ್ಯಂತ ಸದ್ದು ಮಾಡಿತ್ತು. ಆರೋಪ ಕೇಳಿಬಂದು ಆರು ವರ್ಷಗಳ ನಂತರ ಹೈಕೋರ್ಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಮಹತ್ವದ ತೀರ್ಪು ನೀಡಿದೆ.

ಇದನ್ನೂ ಓದಿ : Eye Donate Just Misscall : ಮಿಸ್ ಕಾಲ್ ಕೊಡಿ, ನೇತ್ರದಾನಕ್ಕೆ ಹೆಸರು ನೋಂದಾಯಿಸಿ : ಪುನೀತ್ ಪುಣ್ಯತಿಥಿಯಂದು ವಿಭಿನ್ನ ಪ್ರಯತ್ನ

ಇದನ್ನೂ ಓದಿ : ಗೋವಾಕ್ಕೆ ಪಾರ್ಟಿಗೆ ಹೋಗೋ ಮುನ್ನ ಎಚ್ಚರ: ಸರ್ಕಾರ ಜಾರಿಗೆ ತಂದಿದೆ ಖಡಕ್ ರೂಲ್ಸ್

( Sri Ramachandrapura Mutt pontiff Raghaveshwara Swamiji gets high court relief in sexual harassment case)

Comments are closed.